2024ರ ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಸೀಸನ್..!
ಇದೇ ಮಾರ್ಚ್ 22ನೇ ತಾರೀಕು ಚೆನ್ನೈ, RCB ಮೊದಲ ಮ್ಯಾಚ್
ಆರ್ಸಿಬಿ ತಂಡಕ್ಕೆ ಎಂಟ್ರಿಕೊಟ್ಟ ಸ್ಟಾರ್ ಕ್ರಿಕೆಟರ್ ಪಾಟಿದಾರ್
ಬಹುನಿರೀಕ್ಷಿತ 2024ರ ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಸೀಸನ್ಗೆ ದಿನಗಣನೆ ಶುರುವಾಗಿದೆ. ಇದೇ ಮಾರ್ಚ್ 22ನೇ ತಾರೀಕು ಚೆನ್ನೈ ಸೂಪರ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಧ್ಯೆ ಮೊದಲ ಐಪಿಎಲ್ ಮ್ಯಾಚ್ ನಡೆಯಲಿದೆ. ಈಗಾಗಲೇ ಆರ್ಸಿಬಿ ತಂಡದ ಆಟಗಾರರು ಬಿರುಸಿನ ತಯಾರಿ ಆರಂಭಿಸಿದ್ದು, ಸ್ಟಾರ್ ಕ್ರಿಕೆಟರ್ ರಜತ್ ಪಾಟಿದಾರ್ ಕ್ಯಾಂಪ್ ಸೇರಿಕೊಂಡಿದ್ದಾರೆ.
ಹೌದು, ಇತ್ತೀಚೆಗೆ ಇಂಗ್ಲೆಂಡ್ ವಿರುದ್ಧ ನಡೆದ ಟೆಸ್ಟ್ ಸೀರಿಸ್ನಲ್ಲಿ ಭಾರತ ತಂಡದ ಭಾಗವಾಗಿದ್ದ ರಜತ್ ಇಷ್ಟು ದಿನ ರೆಸ್ಟ್ನಲ್ಲಿದ್ದರು. ಒಂದು ವಾರದ ರೆಸ್ಟ್ ಬಳಿಕ ಈಗ ರಜತ್ ಪಾಟಿದಾರ್ ಆರ್ಸಿಬಿ ಕ್ಯಾಂಪ್ ಸೇರಿದ್ದಾರೆ. ಆರ್ಸಿಬಿ ತಂಡ ಸೇರಿಕೊಂಡ ರಜತ್ಗೆ ಅದ್ಧೂರಿ ಸ್ವಾಗತ ಕೋರಲಾಗಿದೆ.
ಅದು 2022ರ ಇಂಡಿಯನ್ ಪ್ರೀಮಿಯರ್ ಲೀಗ್ ಎಲಿಮಿನೇಟರ್ ಪಂದ್ಯ. ಅಂದು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಅಬ್ಬರಿಸಿದ ಆರ್ಸಿಬಿ ಬ್ಯಾಟ್ಸ್ಮನ್ ರಜತ್ ಪಾಟಿದಾರ್ ಆಕರ್ಷಕ ಶತಕ ಸಿಡಿಸಿ ದಾಖಲೆ ಬರೆದಿದ್ದರು.
This year, fortunes are in our favour,
RaPa’s return to our camp we’ll savour. 🙌Welcome home, Rajat! 🏡❤️#PlayBold #ನಮ್ಮRCB #IPL2024 #Homecoming @rrjjt_01 pic.twitter.com/OI3MXGKlKA
— Royal Challengers Bangalore (@RCBTweets) March 16, 2024
ಲಕ್ನೋ ವಿರುದ್ಧದ ಎಲಿಮಿನೇಟರ್ ಪಂದ್ಯದಲ್ಲಿ ಆರ್ಸಿಬಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿತ್ತು. ಈ ಮೂಲಕ ತಂಡ ಸಂಕಷ್ಟಕ್ಕೆ ಸಿಲುಕಿತ್ತು. ಸಂಕಷ್ಟದಲ್ಲಿದ್ದ ತಂಡಕ್ಕೆ ರಜತ್ ಪಾಟಿದಾರ್ ಆಸರೆಯಾದರು. ಐಪಿಎಲ್ ಪ್ಲೇ ಆಫ್ ಪಂದ್ಯಗಳಲ್ಲಿ ಗರಿಷ್ಠ ರನ್ ಸಿಡಿಸಿದ ಅನ್ಕ್ಯಾಪ್ ಪ್ಲೇಯರ್ ಅನ್ನೋ ಹೆಗ್ಗಳಿಕೆಗೆ ರಜತ್ ಪಾಟಿದಾರ್ ಪಾತ್ರರಾಗಿದ್ದಾರೆ. ಅಂದಿನಿಂದ ಕ್ರೀಡಾ ಲೋಕದಲ್ಲಿ ಭಾರೀ ಸದ್ದು ಮಾಡಿದ್ದ ರಜತ್ ಪಾಟಿದಾರ್ಗೆ ಟೀಮ್ ಇಂಡಿಯಾ ಪರ ಆಡಲು ಅವಕಾಶ ಸಿಕ್ಕಿತ್ತು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ