/newsfirstlive-kannada/media/post_attachments/wp-content/uploads/2024/03/Hardik_Rohit-IPL.jpg)
ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಅತೀ ಹೆಚ್ಚು ಸಕ್ಸಸ್ಫುಲ್ ಆಗಿರೋ ತಂಡಗಳ ಪೈಕಿ ಮುಂಬೈ ಇಂಡಿಯನ್ಸ್ ಒಂದು. ಬರೋಬ್ಬರಿ 5 ಬಾರಿ ಐಪಿಎಲ್ ಚಾಂಪಿಯನ್ ಆಗಿದೆ. ತನ್ನ ಹಳೆಯ ತಂಡದಲ್ಲಿ ಕ್ಯಾಪ್ಟನ್ ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಯಾದವ್, ಜಸ್ಪ್ರೀತ್ ಬುಮ್ರಾ ಜೊತೆಗೆ ತಿಲಕ್ ವರ್ಮಾ ಅವರನ್ನು ಉಳಿಸಿಕೊಂಡಿದೆ.
ಮುಂಬೈ ತಂಡಕ್ಕೆ 5 ಬಾರಿ ಕಪ್ ಗೆಲ್ಲಿಸಿದ ಮಾಜಿ ಕ್ಯಾಪ್ಟನ್ ರೋಹಿತ್ ಶರ್ಮಾ ಅವರನ್ನು ಉಳಿಸಿಕೊಂಡು ಎಲ್ಲಾ ವಿವಾದಕ್ಕೂ ತೆರೆ ಎಳೆದಿದೆ. ಹಾಗೆಯೇ ಮೆಗಾ ಹರಾಜಿನಲ್ಲಿ ಸ್ಟಾರ್ ಆಟಗಾರರನ್ನು ಖರೀದಿ ಮಾಡಿ ಬಲಿಷ್ಠ ತಂಡ ಕಟ್ಟಿದೆ.
ಯಾರಿಗೆ ಎಷ್ಟು ಕೋಟಿ?
ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡವನ್ನು ತೊರೆಯಲಿದ್ದಾರೆ ಅನ್ನೋ ವದಂತಿ ಇತ್ತು. ಆದರೀಗ, ಮುಂಬೈ ಇಂಡಿಯನ್ಸ್ ತಂಡ ರೋಹಿತ್ ಶರ್ಮಾ ಅವರ ಮನವೊಲಿಸಿದೆ. ಹಾಗಾಗಿ ರೋಹಿತ್ ಶರ್ಮಾಗೆ 16.30 ಕೋಟಿ ಕೊಟ್ಟು ರೀಟೈನ್ ಮಾಡಿಕೊಂಡಿದೆ.
ಜಸ್ಪ್ರೀತ್ ಬುಮ್ರಾಗೆ ಬರೋಬ್ಬರಿ 18 ಕೋಟಿ ನೀಡಲಾಗಿದೆ. ಹಾರ್ದಿಕ್ ಪಾಂಡ್ಯ ಮತ್ತು ಸೂರ್ಯಕುಮಾರ್ ಯಾದವ್ಗೆ ತಲಾ 16.35 ಕೋಟಿ ನೀಡಿ ರೀಟೈನ್ ಮಾಡಿಕೊಳ್ಳಲಾಗಿದೆ. ತಿಲಕ್ ವರ್ಮಾಗೆ 8 ಕೋಟಿ ನೀಡಿ ಉಳಿಸಿಕೊಂಡಿದ್ದಾರೆ.
ಕ್ಯಾಪ್ಟನ್ ಯಾರು?
ಮುಂಬೈ ಇಂಡಿಯನ್ಸ್ ತಂಡವು ಮಹತ್ವದ ನಿರ್ಧಾರ ಕೈಗೊಂಡಿದೆ. ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅವರನ್ನೇ ಕ್ಯಾಪ್ಟನ್ ಆಗಿ ಮುಂದುವರಿಸುವ ನಿರ್ಧಾರಕ್ಕೆ ಬಂದಿದೆ. ಈ ಬಗ್ಗೆ ಮಾಜಿ ಕ್ಯಾಪ್ಟನ್ ರೋಹಿತ್ ಶರ್ಮಾ ಅವರೊಂದಿಗೆ ಮಾತುಕತೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ಈ ಹಿಂದೆ ಸೂರ್ಯಗೆ ಮುಂಬೈ ಕ್ಯಾಪ್ಟನ್ಸಿ ಪಟ್ಟ ಸಿಗಲಿದೆ ಎಂದು ಹೇಳಲಾಗಿತ್ತು. ಹಾರ್ದಿಕ್ ಪಾಂಡ್ಯ ಅವರೇ ನಾಯಕರಾದ ಕಾರಣ ಇದು ಸೂರ್ಯಗೆ ಶಾಕಿಂಗ್ ನ್ಯೂಸ್ ಆಗಿದೆ. ಸೂರ್ಯ ಮತ್ತು ಹಾರ್ದಿಕ್ ಮಧ್ಯೆ ನಾಯಕತ್ವಕ್ಕಾಗಿ ಭಾರೀ ಪೈಪೋಟಿ ನಡೆದಿತ್ತು.
ಇದನ್ನೂ ಓದಿ: ICC ಚಾಂಪಿಯನ್ಸ್ ಟ್ರೋಫಿ; ಟೀಮ್ ಇಂಡಿಯಾಗೆ ಮಾಸ್ಟರ್ ಸ್ಟ್ರೋಕ್ ಕೊಟ್ಟ ಬುಮ್ರಾ; ಏನಾಯ್ತು?
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್