ಕಟೀಲ್ ವಿರುದ್ಧ ವಾಗ್ದಾಳಿ ಮಾಡಿದ್ದ MP ರೇಣುಕಾಚಾರ್ಯ
ಮಾಜಿ ಸಿಎಂ ವಿರುದ್ಧ ಆರೋಪಿಸಿದ್ದ ಬಸನಗೌಡ ಯತ್ನಾಳ್
ಬಿಜೆಪಿಯ ಇಬ್ಬರು ನಾಯರಿಗೆ ನೋಟಿಸ್ ನೀಡಿ ಹೇಳಿದ್ದೇನು?
ಬೆಂಗಳೂರು: ಇತ್ತೀಚೆಗೆ ನಡೆದ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡ ಬಿಜೆಪಿಯಲ್ಲೂ ಸದ್ಯ ಬಂಡಾಯದ ಬೇಗುದಿ ಮುಂದುವರಿದಿದೆ. ರಾಜ್ಯ ಬಿಜೆಪಿ ನಾಯಕರು ಒಬ್ಬರ ಮೇಲೊಬ್ಬರು ಟೀಕಾ ಪ್ರಹಾರ ಮಾಡುತ್ತಿದ್ದಾರೆ. ಇದಕ್ಕೆ ಬ್ರೇಕ್ ಹಾಕಲು ಮುಂದಾದ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ನೋಟಿಸ್ ನೀಡಿದೆ. ಹೀಗಾಗಿ ನಾಳೆ ಸಭೆಗೆ ಹಾಜರಾಗುವಂತೆ ಸೂಚಿಸಲಾಗಿದೆ.
ಪಕ್ಷದ ವಿರುದ್ಧ ಮಾತನಾಡಿದ ಬಿಜೆಪಿಯ ಇಬ್ಬರು ನಾಯಕರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದಕ್ಕಾಗಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ನೋಟಿಸ್ ಜಾರಿ ಮಾಡಿದ್ದಾರೆ.
ಎಂಪಿ ರೇಣುಕಾಚಾರ್ಯ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿರುದ್ದ ವಾಗ್ದಾಳಿ ನಡೆಸಿದ್ದರು. ಇತ್ತ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿ ಯತ್ನಾಳ್ ಆಕ್ರೋಶ ಹೊರ ಹಾಕಿದ್ದರು. ಸದ್ಯ ಈ ಇಬ್ಬರಿಗೂ ಶಿಸ್ತು ಕ್ರಮದ ನೋಟಿಸ್ ಅನ್ನು ಬಿಜೆಪಿಯ ಲಿಂಗರಾಜ್ ಪಾಟೀಲ್ ಜಾರಿ ಮಾಡಿ ಸಭೆಗೆ ಹಾಜರಾಗಿ ಎಂದು ಸೂಚನೆ ನೀಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ