/newsfirstlive-kannada/media/post_attachments/wp-content/uploads/2024/05/Bangalore-Rains-1.jpg)
ಬೆಂಗಳೂರು: ಮಂಗಳವಾರ ಸಿಲಿಕಾನ್​ ಸಿಟಿ ಬೆಂಗಳೂರಲ್ಲಿ ವರ್ಷದ ಮೊದಲ ಮಳೆ ಆಗಿದೆ. ಬಿಸಿಲ ಬೇಗೆಯಿಂದ ಬೇಸತ್ತು ಹೋಗಿದ್ದ ಜನರಿಗೆ ಮಳೆ ತಂಪರೆದಿದೆ.
ಇಂದು ಕೂಡ ನಗರದ ವಿವಿಧ ಏರಿಯಾಗಳಲ್ಲಿ ಮಳೆ ಆಗಲಿದೆ. ಇನ್ನೂ ಮೂರು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾದ ಚಂಡಮಾರುತದ ಪರಿಣಾಮ ಮಳೆ ಜೋರಾಗಿದೆ ಎಂದು ತಿಳಿದು ಬಂದಿದೆ.
ಈಗಾಗಲೇ ಪಕ್ಕದ ರಾಜ್ಯ ತಮಿಳುನಾಡಿನ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದಲ್ಲೂ ಮಳೆ ಆರ್ಭಟ ಜೋರಾಗಿದೆ. ಬೆಂಗಳೂರಲ್ಲೂ ಮೂರು ದಿನ ಇದೇ ರೀತಿ ವಾತಾವರಣ ಇರಲಿದೆ. ಬುಧವಾರ ಬೆಳಗ್ಗೆಯಿಂದ ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಜೋರು ಮಳೆ ಆಗಲಿದೆ. ಭಾರೀ ಮಳೆ ಮುನ್ಸೂಚನೆ ಇರೋ ಕಾರಣ ರಾಜ್ಯ ಸರ್ಕಾರ ಕಟ್ಟೆಚ್ಚರ ವಹಿಸಿದೆ.
ಎಲ್ಲೆಲ್ಲಿ ಮಳೆ ಸಾಧ್ಯತೆ?
ನಗರಾದ್ಯಂತ ಮೋಡ ಕವಿದ ವಾತವರಣ ಕಂಡು ಬರಲಿದೆ. ಮೆಜೆಸ್ಟಿಕ್, ಮಲ್ಲೇಶ್ವರಂ, ಶೇಷಾದ್ರಿಪುರಂ, ಬನಶಂಕರಿ, ಜಯನಗರ, ರಾಜಾಜಿನಗರ, ವಿಜಯನಗರ, ಇಂದಿರಾನಗರ, ಹಲಸೂರು, ಆವಲಹಳ್ಳಿ ಸೇರಿದಂತೆ ಅನೇಕ ಬಡಾವಣೆಗಳಲ್ಲಿ ಉತ್ತಮ ಹಗುರದಿಂದ ಸಾಧಾರಣ ಮಳೆ ಬೀಳಲಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us