Advertisment

ಅಡಿಕೆ ಎಲೆ ಚುಕ್ಕಿ ಹಳದಿ ಎಲೆ ರೋಗ, ತೆಂಗು ಕಪ್ಪು ತಲೆ ಹುಳು ರೋಗದ ಕೀಟ ನಿಯಂತ್ರಣಕ್ಕೆ 10 ಕೋಟಿ ನೀಡಿಕೆ-ಬಜೆಟ್ ನಲ್ಲಿ ಘೋಷಣೆ

ರಾಜ್ಯದ ತೋಟಗಾರಿಕೆ ಬೆಳೆಗಾರ ರೈತರು ಅಡಿಕೆ ಎಲೆ ಚುಕ್ಕಿ ಹಳದಿ ಎಲೆ ರೋಗ ಹಾಗೂ ತೆಂಗಿನ ಕಪ್ಪು ತಲೆ ಹುಳು ರೋಗದ ಕೀಟ ಭಾದೆಯಿಂದ ತತ್ತರಿಸಿ ಹೋಗಿದ್ದಾರೆ. ಇವುಗಳಿಂದ ಅಡಿಕೆ, ತೆಂಗು ಬೆಳೆಗಳು ಹಾಳಾಗುತ್ತಿವೆ. ಈ ಕೀಟ ನಿಯಂತ್ರಣಕ್ಕೆ ಬಜೆಟ್ ನಲ್ಲಿ 10 ಕೋಟಿ ರೂ. ಘೋಷಿಸಲಾಗಿದೆ.

author-image
Chandramohan
COCONUT AND ARECANUT PEST CONTROL FUNDS IN BUDGET
Advertisment


 * ತೋಟಗಾರಿಕೆಯನ್ನು ರೈತರ ಆದಾಯ ವೃದ್ಧಿಯ ಪ್ರಮುಖ ಇಂಜಿನ್ ಆಗಿ ರೂಪಿಸುವ ಉದ್ದೇಶದಿಂದ ನಮ್ಮ ಸರ್ಕಾರವು ಉತ್ಕೃಷ್ಟ ಗುಣಮಟ್ಟ, ಅಧಿಕ ಮೌಲ್ಯದ, ಹವಾಮಾನ 
ಸ್ಥಿತಿ-ಸ್ಥಾಪಕ ಮತ್ತು ಮಾರುಕಟ್ಟೆ ಆಧಾರಿತ ತೋಟಗಾರಿಕೆ ಅಭಿವೃದ್ಧಿಗೆ ಆದ್ಯತೆ ನೀಡುತ್ತಿದೆ. ಕಳೆದ ಮೂರು ವರ್ಷಗಳಲ್ಲಿ ತೋಟಗಾರಿಕೆ ಬೆಳೆಗಳ ಅಭಿವೃದ್ಧಿಗಾಗಿ ಈ ಕೆಳಕಂಡ ಕ್ರಮಗಳನ್ನು ಕೈಗೊಂಡಿದೆ:

Advertisment

•    ಹೊಸದಾಗಿ 89,000 ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕಾ ಬೇಸಾಯ ಅಳವಡಿಕೆ;
•    2.23 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಹನಿ ನೀರಾವರಿ ಅಳವಡಿಸಿ 2.36 ಲಕ್ಷ ರೈತರಿಗೆ ಅನುಕೂಲ;
•    ಬೆಳೆ ವಿಮೆ ಯೋಜನೆಯಡಿ 11 ಲಕ್ಷ ರೈತರಿಗೆ 2,378 ಕೋಟಿ ರೂ.ಗಳ ಬೆಳೆ ವಿಮೆ ಪರಿಹಾರ; 
•    21,360 ಫಲಾನುಭವಿಗಳಿಗೆ 9,800 ಕೊಯ್ಲೋತ್ತರ ಘಟಕಗಳ ನಿರ್ಮಾಣ. 

*  ತೋಟಗಾರಿಕೆ ಇಲಾಖೆಯ ಕ್ಷೇತ್ರಗಳು ಮತ್ತು ನರ್ಸರಿಗಳಲ್ಲಿ ಲಭ್ಯವಿರುವ ಜಮೀನನ್ನು ಉಪಯೋಗಿಸಿ ಉತ್ಕೃಷ್ಟ ಮೌಲ್ಯದ ತೋಟಗಳ ಅಭಿವೃದ್ಧಿ, ಕೊಯ್ಲೋತ್ತರ ಸೌಲಭ್ಯಗಳು ಹಾಗೂ ತೋಟಗಾರಿಕೆ ಆಧಾರಿತ ಕೈಗಾರಿಕೆಗಳನ್ನು PPP ಮಾದರಿಯಲ್ಲಿ ಸ್ಥಾಪಿಸಲಾಗುವುದು. 

*   ಅಡಿಕೆ ಬೆಳೆಯ ಎಲೆ ಚುಕ್ಕಿ, ಹಳದಿ ಎಲೆ ಹಾಗೂ ಕೊಳೆ ರೋಗಗಳ ಮತ್ತು ತೆಂಗು ಬೆಳೆಯ ಕಪ್ಪು ತಲೆ ಹುಳು ಹಾಗೂ ಬಿಳಿ ನೊಣಗಳ ನಿಯಂತ್ರಣಕ್ಕಾಗಿ ವಿಶ್ವವಿದ್ಯಾಲಯಗಳು ಹಾಗೂ ಕೃಷಿ ವಿಜ್ಞಾನ ಕೇಂದ್ರಗಳ ಸಹಯೋಗದೊಂದಿಗೆ ಸಮುದಾಯ ಆಧಾರಿತ ರೋಗ–ಕೀಟ ನಿಯಂತ್ರಣ ಕ್ರಮಗಳನ್ನು 10 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳ್ಳಲಾಗುವುದು. 

Advertisment

*    ತೋಟಗಾರಿಕೆ ಉತ್ಪನ್ನಗಳ ಸಂಸ್ಕರಣೆಗಾಗಿ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕು ಮತ್ತು ವಿಜಯಪುರ ಜಿಲ್ಲೆಯ ತೊರವಿಯಲ್ಲಿ ಒಟ್ಟು 12,000 ಮೆಟ್ರಿಕ್ ಟನ್ ಸಾಮರ್ಥ್ಯದ ಎರಡು ಶೀತಲಗೃಹಗಳನ್ನು 64 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು. ಎಲ್ಲಾ ಕೃಷಿ ಮಾರುಕಟ್ಟೆಗಳಲ್ಲಿ ಶೀತಲಗೃಹಗಳನ್ನು ಹಂತ ಹಂತವಾಗಿ ನಿರ್ಮಿಸಲಾಗುವುದು.

*   ಹೆಚ್ಚಿನ ಪ್ರವಾಸಿಗರನ್ನು ಹಾಗೂ ಪರಿಸರ ಪ್ರೇಮಿಗಳನ್ನು ಆಕರ್ಷಿಸುವ ದೃಷ್ಟಿಯಿಂದ ಮೈಸೂರಿನ ಲಿಂಗಾಂಬುಧಿ ಸಸ್ಯ ತೋಟವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು. 

* ನೀರಿನ ಸಂರಕ್ಷಣೆ ಮತ್ತು ಮಣ್ಣಿನಿಂದ ಹರಡುವ ರೋಗಗಳನ್ನು ತಡೆಗಟ್ಟಲು ಹೈಡ್ರೋಪೊನಿಕ್ಸ್ (Hydroponics) ಹಾಗೂ ಕೋಕೋಪೀಟ್ (Coco peat) ಆಧಾರಿತ ಮಣ್ಣಿಲ್ಲದ ಕೃಷಿಯನ್ನು ಪ್ರೋತ್ಸಾಹಿಸಲಾಗುವುದು. 

Advertisment

*    ತಜ್ಞರ ಕಾರ್ಯಸಾಧ್ಯತಾ ವರದಿಯ ಶಿಫಾರಸ್ಸಿನಂತೆ ಡಂಬಳದಲ್ಲಿ ತೋಟಗಾರಿಕೆ ಕಾಲೇಜನ್ನು ಸ್ಥಾಪಿಸಲು ಅಗತ್ಯವಿರುವ ಪ್ರಥಮ ಹಂತದ ಮೂಲಸೌಕರ್ಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

COCONUT AND ARECANUT PEST CONTROL FUNDS IN BUDGET
Advertisment
Advertisment
Advertisment