/newsfirstlive-kannada/media/media_files/2025/11/02/mnd_childran-2025-11-02-08-33-11.jpg)
ಮಂಡ್ಯ: ಪಿಕ್​ನಿಕ್​ಗೆ ಬಂದಿದ್ದ ಮದರಸದ ನಾಲ್ವರು ಮಕ್ಕಳು ನೀರಲ್ಲಿ ಕೊಚ್ಚಿ ಹೋಗಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಅರಕೆರೆ ಗ್ರಾಮದ ಬಳಿಯ ರಾಮಸ್ವಾಮಿ ನಾಲೆಯಲ್ಲಿ ನಡೆದಿದೆ.
ಮೈಸೂರಿನ ಶಾಂತಿನಗರದ ಮದರಸದ ಮಕ್ಕಳಾದ ಐಶಾ (13) ಎಂಬ ಬಾಲಕಿನ ರಕ್ಷಣೆ ಮಾಡಿ, ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಜೀವ ಬಿಟ್ಟಿದ್ದಾಳೆ. ಉಳಿದಂತೆ ಹನಿ (14), ಅರ್ಫಿನ್ (13), ತರ್ವೀನ್ (13) ನಾಪತ್ತೆ ಆಗಿದ್ದಾರೆ.
ಇದನ್ನೂ ಓದಿ:ಶಂಕರ್ ನಾಗ್ ನಾಗಮಂಡಲ ನಾಟಕ ಮಾಡಿದಾಗ ಮೇಲಿಂದ ನೋಡಿದ್ವಿ.. ಪ್ರಕಾಶ್ ರಾಜ್
/filters:format(webp)/newsfirstlive-kannada/media/media_files/2025/11/02/mnd_childran_incident-2025-11-02-08-33-27.jpg)
ಶಾಂತಿನಗರದ ಮದರಸದ ಮಕ್ಕಳನ್ನು ಪಿಕ್‌ನಿಕ್‌ಗೆ ಎಂದು ಕರೆದುಕೊಂಡು ಬರಲಾಗಿತ್ತು. ನಿನ್ನೆ ಸಂಜೆ 5.30ರ ಸಮಯಕ್ಕೆ ನಾಲೆ ಬಳಿ ಆಟವಾಡುವಾಗ ಮಕ್ಕಳು ನಾಲೆಗೆ ಇಳಿದಿದ್ದರು. ಆದರೆ ನೋಡು ನೋಡುತ್ತಿದ್ದಂತೆ ನಾಲ್ವರು ಮಕ್ಕಳು ಕೊಚ್ಚಿ ಹೋಗಿದ್ದರು. ಇದರಲ್ಲಿ ಬಾಲಕಿ ಐಶಾಳನ್ನ ಕಾಪಾಡಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾಳೆ. ಇನ್ನು ಹನಿ, ಅರ್ಫಿನ್ ಹಾಗೂ ತರ್ವೀನ್ ನಾಪತ್ತೆ ಆಗಿದ್ದರು.
ಈ ಸಂಬಂಧ ನಿನ್ನೆಯಿಂದಲೇ ಅಗ್ನಿಶಾಮಕ ದಳ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಆದರೆ ಕತ್ತಲು ಆಗಿದ್ದರಿಂದ ನಿನ್ನೆ ಶೋಧ ಕಾರ್ಯ ಸ್ಥಗಿತ ಮಾಡಲಾಗಿತ್ತು. ಇಂದು ಶೋಧ ಕಾರ್ಯ ಮುಂದುವರೆಯಲಿದೆ. ಅರಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us