ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಭರ್ಜರಿ ಗಿಫ್ಟ್ : ಬರ್ತ್ ಡೇ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ಮಂಜೂರು!

ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೆ ಅವರ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಗಳಂದು ರಜೆ ಪಡೆಯಲು ಐಜಿ ಅಂಡ್ ಡಿಜಿಪಿ ಎಂ.ಎ. ಸಲೀಂ ಆದೇಶ ಹೊರಡಿಸಿದ್ದಾರೆ. ಇದರಿಂದ ವೈಯಕ್ತಿಕ ಜೀವನ ಹಾಗೂ ವೃತ್ತಿ ಜೀವನದ ಮಧ್ಯೆ ಸಮತೋಲನ ಕಾಯ್ದುಕೊಳ್ಳಲು ಸಹಾಯವಾಗುತ್ತೆ ಎಂದಿದ್ದಾರೆ.

author-image
Chandramohan
POLICE_HAT_1

ಬರ್ತ್ ಡೇ, ವಿವಾಹ ವಾರ್ಷಿಕೋತ್ಸವದಂದು ರಜೆ ನೀಡಲು ಆದೇಶ

Advertisment
  • ಬರ್ತ್ ಡೇ, ವಿವಾಹ ವಾರ್ಷಿಕೋತ್ಸವದಂದು ರಜೆ ನೀಡಲು ಆದೇಶ
  • ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ರಜೆ ನೀಡಲು ಡಿಜಿಪಿ ಆದೇಶ
  • ಐಜಿಪಿ ಅಂಡ್ ಡಿಜಿಪಿ ಎಂ.ಎ. ಸಲೀಂ ಅವರಿಂದ ಆದೇಶ


ರಾಜ್ಯದ ಪೊಲೀಸ್ ಸಿಬ್ಬಂದಿಗೆ IG ಮತ್ತು   DGP   ಎಂ.ಎ ಸಲೀಂ ಅವರು  ಭರ್ಜರಿ ಗಿಫ್ಟ್  ನೀಡಿದ್ದಾರೆ. ಪೊಲೀಸ್ ಸಿಬ್ಬಂದಿಯ ಹುಟ್ಟುಹಬ್ಬ ಹಾಗೂ ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ ನೀಡುವಂತೆ ಆದೇಶ ಹೊರಡಿಸಿದ್ದಾರೆ. 
ಸಾರ್ವಜನಿಕ ಸುರಕ್ಷತೆ ಹಾಗೂ ಕಾನೂನು ಜಾರಿಯನ್ನು ಖಚಿತಪಡಿಸಿಕೊಳ್ಳಲು ಕಠಿಣ ಪರಿಸ್ಥಿತಿಗಳಲ್ಲಿ ಪೊಲೀಸ್ ಸಿಬ್ಬಂದಿ ಕೆಲಸ ನಿರ್ವಹಿಸುತ್ತಾರೆ. ಪೊಲೀಸ್ ಸಿಬ್ಬಂದಿಗಳಿಗೆ ಹುಟ್ಟುಹಬ್ಬ ಹಾಗೂ ವಿವಾಹ ವಾರ್ಷಿಕೋತ್ಸವಗಳಂತಹ ವೈಯಕ್ತಿಕ ಕಾರ್ಯಕ್ರಮ ಆಚರಿಸುವುದು ಬಹಳ ಮಹತ್ವದ್ದಾಗಿದೆ. ಈ ವಿಶೇಷ ದಿನಗಳಲ್ಲಿ ರಜೆ ಪಡೆಯುವುದರಿಂದ  ಅಧಿಕಾರಿಗಳು, ಸಿಬ್ಬಂದಿ ಭಾವನಾತ್ಮಕವಾಗಿ ಪುನಶ್ಚೇತನಗೊಳ್ಳಲು, ಕುಟುಂಬದೊಂದಿಗೆ ಗುಣಮಟ್ಟದ ಸಮಯ ಕಳೆಯಲು ಹಾಗೂ ಕರ್ತವ್ಯ, ವೈಯಕ್ತಿಕ ಜೀವನದ ಮಧ್ಯೆ ಸಮತೋಲನ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ಇದರಿಂದ ಮನೋಬಲ ವೃದ್ದಿಯಾಗುತ್ತದೆ. ಒತ್ತಡ ಕಡಿಮೆಯಾಗುತ್ತದೆ. ಒಟ್ಟಾರೆ  ಕೆಲಸದ ವೃತ್ತಿ ಉತ್ಪಾದಕತೆಯನ್ನು ಹೆಚ್ಚಿಸುತ್ತದೆ. ಈ ಮಾನವೀಯ ಕಾರ್ಯವು ಅವರ ತ್ಯಾಗಗಳನ್ನು ಗುರುತಿಸುವುದರ ಜೊತೆಗೆ ನಿಷ್ಠೆಯನ್ನು ಬೆಳೆಸುತ್ತದೆ. 
ಈ ಹಿನ್ನಲೆಯಲ್ಲಿ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳು ತಮ್ಮ ಹುಟ್ಟುಹಬ್ಬ ಹಾಗೂ ವಿವಾಹ ವಾರ್ಷಿಕೋತ್ಸವದಂದು ರಜೆ ಕೋರಿದ್ದಲ್ಲಿ ತಪ್ಪದೇ ರಜೆ ಮಂಜೂರು ಮಾಡಲು ಎಲ್ಲ ಘಟಕಾಧಿಕಾರಿಗಳಿಗೆ ಆದೇಶಿಸಿದೆ ಎಂದು ಐಜಿ ಹಾಗೂ ಡಿಜಿಪಿ ಡಾಕ್ಟರ್ ಎಂ.ಎ. ಸಲೀಂ ಆದೇಶ ಹೊರಡಿಸಿದ್ದಾರೆ. 

IG AND DGP SALEM




ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Karnataka Police bengaluru police IG AND DGP M A SALEEM leave to police on birthday
Advertisment