Advertisment

ಅಯ್ಯೋ ಕಂದಾ.. ಮಕ್ಕಳನ್ನ ಒಂಟಿಯಾಗಿ ಬಿಡುವ ಮುನ್ನ ಈ ಸ್ಟೋರಿ ಓದಿ..

ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಕರೇಕುಪ್ಪ ಗ್ರಾಮದಲ್ಲಿ ನಾಲ್ಕು ವರ್ಷದ ಬಾಲಕ ಅರವಿಂದ ಚರಂಡಿಗೆ ಬಿದ್ದು ಸಾವನ್ನಪ್ಪಿದ್ದಾನೆ. ನಿನ್ನೆ ಸಂಜೆ ಆಟವಾಡುತ್ತ ತಾತನ ಮನೆ ಕಡೆಗೆ ಹೊರಟಿದ್ದ ಬಾಲಕ, ಕಾಲು ಜಾರಿ ಚರಂಡಿ ನೀರು ತುಂಬಿದ ಗುಂಡಿಗೆ ಬಿದ್ದಿದ್ದಾನೆ.

author-image
Ganesh Kerekuli
bly boy death
Advertisment

ಬಳ್ಳಾರಿ: ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಕರೇಕುಪ್ಪ ಗ್ರಾಮದಲ್ಲಿ ನಾಲ್ಕು ವರ್ಷದ ಬಾಲಕ ಅರವಿಂದ ಚರಂಡಿಗೆ ಬಿದ್ದು ಸಾವನ್ನಪ್ಪಿದ್ದಾನೆ. ನಿನ್ನೆ ಸಂಜೆ ಆಟವಾಡುತ್ತ ತಾತನ ಮನೆ ಕಡೆಗೆ ಹೊರಟಿದ್ದ ಬಾಲಕ, ಕಾಲು ಜಾರಿ ಚರಂಡಿ ನೀರು ತುಂಬಿದ ಗುಂಡಿಗೆ ಬಿದ್ದಿದ್ದಾನೆ.

Advertisment

ರಾತ್ರಿಯಾದರೂ ಮನೆಗೆ ಬಾರದ ಅರವಿಂದನನ್ನು ಪೋಷಕರು ಗಾಬರಿಗೊಂಡು ಹುಡುಕಲು ಆರಂಭಿಸಿದ್ದಾರೆ. ಬಾಲಕನ ದೇಹ ಚರಂಡಿಯಲ್ಲಿ ಪತ್ತೆಯಾಗಿದೆ. ಕೂಡಲೇ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಬಾಲಕನನ್ನ ಪೋಷಕರು ಜಿಂದಾಲ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ವೈದ್ಯರು ಬಾಲಕ ಚರಂಡಿ ಗುಂಡಿಯಲ್ಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. 

ಪೋಷಕರ ಆಕ್ರೋಶ..

ಮಗುವಿನ ಸಾವಿಗೆ ಪುರಸಭೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರಿಯಾದ ಸಮಯದಲ್ಲಿ ತಮ್ಮ ವ್ಯಾಪ್ತಿಗೆ ಬರುವ ಕಾರ್ಯಗಳನ್ನು ಮಾಡದೇ ಅಸಡ್ಡೆ ತೋರಿರುವುದೇ ಈ ಘಟನೆಗೆ ಕಾರನ ಎಂದಿದ್ದಾರೆ. ಮಗು ಚರಂಡಿಯಲ್ಲಿ ಬಿದ್ದು ಒದ್ದಾಡುವ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ತೋರಣಗಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಇದನ್ನೂ ಓದಿ:ಬಿಡಿಎ ನಿಂದ 6 ಹೊಸ ಲೇಔಟ್ ನಿರ್ಮಾಣಕ್ಕೆ ಭೂಸ್ವಾಧೀನಕ್ಕೆ ಒಪ್ಪಿಗೆ: ಹೊಸೂರು ರಸ್ತೆಯಿಂದ ಮೈಸೂರು ರಸ್ತೆ ಮಧ್ಯೆ 50 ಸಾವಿರ ಸೈಟ್ ನಿರ್ಮಾಣ

Advertisment

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ. 

muncipality bellery boy death Bellary
Advertisment
Advertisment
Advertisment