/newsfirstlive-kannada/media/media_files/2025/08/20/kar_rain_new-2025-08-20-07-30-28.jpg)
ಬೆಂಗಳೂರು: ರಾಜ್ಯದಲ್ಲಿ ಮುಂದಿನ 5 ದಿನ ಮಳೆ ಮತ್ತು ಚಳಿ ಮುನ್ಸೂಚನೆಯನ್ನ ಹವಾಮಾನ ಇಲಾಖೆ ಕೊಟ್ಟಿದೆ. ಬೆಂಗಳೂರಿನಲ್ಲಿ ಮುಂದಿನ 4 ದಿನಗಳ ಕಾಲ ವಿಪರೀತ ಚಳಿ ಆಗಲಿದೆ.
ಎರಡು ದಿನ ಮೋಡ ಮುಸುಕಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯೂ ಇದೆ ಎಂದಿದ್ದಾರೆ. ಜನವರಿ 9 ಮತ್ತು10 ರಂದು ಬೆಂಗಳೂರಿನಲ್ಲಿ ಮಳೆ ಮುನ್ಸೂಚನೆ ಇದೆ. ಇನ್ನು, ಉತ್ತರ ಕರ್ನಾಟಕದಲ್ಲಿ ಐದು ದಿನ ಚಳಿ ಹೆಚ್ಚಳವಾಗಲಿದೆ.
ಕರಾವಳಿ-ದಕ್ಷಿಣ ಒಳನಾಡಲ್ಲೂ ಚಳಿ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆ ಬೀಳಲಿದೆ. ಆಗ್ನೇಯ ಅರೇಬಿಯನ್ ಸಮುದ್ರ ಹಾಗೂ ಪಕ್ಕದ ಕೇರಳ ಕರಾವಳಿಯಲ್ಲಿ ಚಂಡಮಾರುತ ಬೀಸಲಿದೆ. ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ಚಂಡಮಾರುತ ಸೃಷ್ಟಿಯಾಗಲಿದೆ.
ಜೊತೆಗೆ ಆಗ್ನೇಯ ಬಂಗಾಳ ಕೊಲ್ಲಿ ಮತ್ತು ನೈಋತ್ಯ ಬಂಗಾಳ ಕೊಲ್ಲಿ, ಹಿಂದೂ ಮಹಾಸಾಗರದಲ್ಲೂ ಚಂಡಮಾರುತದ ಪರಿಣಾಮ ಬೀರಲಿದೆ. ಹೀಗಾಗಿ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ:2 ಅವಧಿ.. 2,792 ದಿನ! ರಾಜ್ಯ ರಾಜಕೀಯದಲ್ಲಿ ಹೊಸ ಮೈಲಿಗಲ್ಲು, ಅರಸು ದಾಖಲೆ ಸರಿಗಟ್ಟಿದ ಸಿದ್ದು..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us