/newsfirstlive-kannada/media/post_attachments/wp-content/uploads/2025/07/MALLIKHARJUN_KHARGE_PHOTO.jpg)
ಬೆಂಗಳೂರು: ಕಾಂಗ್ರೆಸ್​ನ ಹಿರಿಯ ನಾಯಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ಉದ್ಯಾನ ನಗರಿಯ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ರಾತ್ರಿಯೇ ದಾಖಲು ಆಗಿದ್ದಾರೆ. ಹಿರಿಯ ವೈದ್ಯರು, ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯ ತಪಾಸಣೆ ಮಾಡಿದ್ದು ಯಾವುದೇ ತೊಂದರೆ ಇಲ್ಲ ಎಂದು ಹೇಳಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಅವರು ಅನಾರೋಗ್ಯಕ್ಕೀಡಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಯಾವುದೇ ಸಮಸ್ಯೆ ಇಲ್ಲ, ಖರ್ಗೆ ಅವರು ಸಾಮಾನ್ಯ ವಾರ್ಡ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅನಾರೋಗ್ಯದ ಕಾರಣ ಕಲಬುರಗಿಗೆ ಭೇಟಿ ನೀಡಲಾಗದೆ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲೇ ಖರ್ಗೆ ಉಳಿದುಕೊಂಡಿದ್ದರು. ಇದೇ ವೇಳೆ ಅನಾರೋಗ್ಯ ಸಮಸ್ಯೆ ಎದುರಾಗಿದೆ ಅಷ್ಟೇ. ಸದ್ಯಕ್ಕಂತೂ ಖರ್ಗೆ ಅವರು ಆರೋಗ್ಯವಾಗಿದ್ದಾರೆ.
ಇದನ್ನೂ ಓದಿ: ಬಿಗ್​ ಬಾಸ್​ಗೆ ಬಿಗ್ ಶಾಕ್ ಕೊಟ್ಟ ಮಲ್ಲಮ್ಮ.. ಈ ಕಾರಣಕ್ಕೆ ಸರಿ ಇಲ್ಲ ಎಂದೇ ಬಿಟ್ಟರು!
ಉತ್ತರ ಕರ್ನಾಟಕದಲ್ಲಿನ ಪ್ರವಾಹ ಕುರಿತು ಪ್ರಧಾನಿ ಮೋದಿಯವರಿಗೆ ಪತ್ರ ಬರೆದು ಬೆಳೆ ಹಾನಿಗೆ ಪರಿಹಾರ ನೀಡಬೇಕು ಎಂದು ಮನವಿ ಮಾಡುವುದಾಗಿ ಹೇಳಿದ್ದರು. ಈ ಸಂಬಂಧ ಮಾತನಾಡಬೇಕಿತ್ತು. ಅದರಂತೆ ತಮ್ಮ ನಿತ್ಯದ ಕೆಲಸದಂತೆ ರಾಜಕೀಯ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದರು. ಸದ್ಯ ಅನಾರೋಗ್ಯದಿಂದ ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಮಲ್ಲಿಕಾರ್ಜುನ್ ಖರ್ಗೆ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ