Advertisment

ಆಲ್​​​ ದಿ ಬೆಸ್ಟ್​ ಮಕ್ಕಳೇ.. ಇವತ್ತಿನಿಂದ ದ್ವಿತಿಯ ಪಿಯುಸಿ ಪರೀಕ್ಷೆ..!

ರಾಜ್ಯಾದ್ಯಂತ ಇಂದಿನಿಂದ (ಶನಿವಾರ) ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗುತ್ತಿವೆ. ಮಾರ್ಚ್ 17ರವರೆಗೆ ನಡೆಯಲಿರುವ ಈ ಮಹತ್ವದ ಪರೀಕ್ಷೆಗೆ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ.

author-image
Ganesh Kerekuli
Exam
Advertisment

ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ (ಶನಿವಾರ) ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗುತ್ತಿವೆ. ಮಾರ್ಚ್ 17ರವರೆಗೆ ನಡೆಯಲಿರುವ ಈ ಮಹತ್ವದ ಪರೀಕ್ಷೆಗೆ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ.

Advertisment

ಪರೀಕ್ಷಾ ಸಮಯ ಮತ್ತು ಕೇಂದ್ರಗಳು

ಪರೀಕ್ಷೆಗಳು ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿವೆ. ರಾಜ್ಯದಾದ್ಯಂತ ಒಟ್ಟು 1,217 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, ಯಾವುದೇ ಅಕ್ರಮ ನಡೆಯದಂತೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು:

ಈ ಬಾರಿ ಒಟ್ಟು 7,10,363 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಬರೆಯಲಿದ್ದಾರೆ. ಈ ಪೈಕಿ ವಿಜ್ಞಾನ ವಿಭಾಗದಲ್ಲೇ ಅತಿ ಹೆಚ್ಚು ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.

ವಿಭಾಗವಾರು ವಿದ್ಯಾರ್ಥಿಗಳ ವಿವರ ಹೀಗಿದೆ:

  • ವಿಜ್ಞಾನ ವಿಭಾಗ: 2,92,645 ವಿದ್ಯಾರ್ಥಿಗಳು
  • ವಾಣಿಜ್ಯ ವಿಭಾಗ: 2,11,174 ವಿದ್ಯಾರ್ಥಿಗಳು
  • ಕಲಾ ವಿಭಾಗ: 1,42,982 ವಿದ್ಯಾರ್ಥಿಗಳು
Advertisment

ಏಪ್ರಿಲ್‌ನಲ್ಲೇ ಫಲಿತಾಂಶ

ಪರೀಕ್ಷೆ ಮುಗಿದ ಕೆಲವೇ ದಿನಗಳಲ್ಲಿ ಮೌಲ್ಯಮಾಪನ ಕಾರ್ಯ ಮುಗಿಸಲು ಮಂಡಳಿ ನಿರ್ಧರಿಸಿದ್ದು, ಏಪ್ರಿಲ್ 7 ರಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಪರೀಕ್ಷೆ ಬರೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ 'All The Best'.

ಇದನ್ನೂ ಓದಿ: ದಳಪತಿ ವಿಜಯ ದಾಂಪತ್ಯದಲ್ಲಿ ಬಿರುಕು: ವಿವಾಹ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ ಪತ್ನಿ ಸಂಗೀತಾ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Kannada News PUC
Advertisment
Advertisment
Advertisment