/newsfirstlive-kannada/media/media_files/2025/08/14/darshan-and-vijayalaxmi-2025-08-14-15-02-48.jpg)
ರೇಣುಕಾಸ್ವಾಮಿ ಪ್ರಕರಣದ ಆರೋಪಿ ದರ್ಶನ್ ಅಂಡ್ ಗ್ಯಾಂಗ್ಗೆ ಸಿಕ್ಕಿದ್ದ ಜಾಮೀನು ರದ್ದಾಗಿದೆ. ಇವತ್ತು ಸುಪ್ರೀಂ ಕೋರ್ಟ್ನಿಂದ ಮಹತ್ವದ ತೀರ್ಪು ಪ್ರಕಟವಾಗಿದ್ದು, 7 ಪ್ರಮುಖ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನು ರದ್ದುಗೊಂಡಿದೆ.
ಸರ್ವೋಚ್ಛ ನ್ಯಾಯಾಲಯದಿಂದ ತೀರ್ಪು ಹೊರ ಬೀಳುತ್ತಿದ್ದಂತೆಯೇ ದರ್ಶನ್ ಪತ್ನಿ ಕಣ್ಣೀರು ಇಟ್ಟಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ವಿಜಯಲಕ್ಷ್ಮೀ ಅವರು ಹೊಸಕೆರೆ ಹಳ್ಳಿ ಅಪಾರ್ಟ್ಮೆಂಟ್ನಲ್ಲಿದ್ದಾರೆ. ತೀರ್ಪು ಪ್ರಕಟವಾಗುತ್ತಿದ್ದಂತೆಯೇ ಭಾವುಕರಾಗಿದ್ದಾರೆ. ತಮ್ಮ ಪತಿ ದರ್ಶನ್ ಪ್ರಕರಣದಲ್ಲಿ ಸಿಲುಕಿದಾಗಿಂದ ಅವರನ್ನು ಬಚಾವ್ ಮಾಡಲು ತುಂಬಾನೇ ಪ್ರಯತ್ನ ಪಟ್ಟಿದ್ದರು. ಕಾನೂನು ಹೋರಾಟ, ದೇವರ ಸೇವೆ ಸೇರಿದಂತೆ ಎಲ್ಲಾ ರೀತಿಯಿಂದಲೂ ಹೋರಾಟ ನಡೆಸುತ್ತಿದ್ದಾರೆ.
ಇದನ್ನೂ ಓದಿ:ಸುಪ್ರೀಂ ಕೋರ್ಟ್ ತೀರ್ಪು ಬೆನ್ನಲ್ಲೇ ಎ1 ಆರೋಪಿ ಪವಿತ್ರಾ ಗೌಡ ಅರೆಸ್ಟ್.!
ಹೈಕೋರ್ಟ್ನಿಂದ ಜಾಮೀನು ಕೊಡಿಸಿ ನಿಟ್ಟುಸಿರು ಬಿಟ್ಟಿದ್ದ ವಿಜಯಲಕ್ಷ್ಮಿಗೆ ಇದೀಗ ಸುಪ್ರೀಂ ಕೋರ್ಟ್ ಶಾಕ್ ನೀಡಿದೆ. ದರ್ಶನ್ ಅಂಡ್ ಗ್ಯಾಂಗ್ ಮತ್ತೆ ಜೈಲು ಸೇರಬೇಕಾಗಿದೆ. ದರ್ಶನ್, ಪವಿತ್ರಾಗೌಡ ಹಾಗೂ 7 ಆರೋಪಿಗಳ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರದ ಅರ್ಜಿಯ ಆದೇಶ ಹೊರ ಬಿದ್ದಿದೆ. ಹೈಕೋರ್ಟ್ ತೀರ್ಪಿನಲ್ಲಿ ದೋಷವಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈ ಪ್ರಕರಣವನ್ನು ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಜೆ.ಬಿ ಪರ್ದಿವಾಲಾ ಹಾಗೂ ನ್ಯಾಯಾಮೂರ್ತಿ ಮಹಾದೇವನ್ ಪೀಠ ತೀರ್ಪು ನೀಡಿದೆ.
ಇದನ್ನೂ ಓದಿ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು.. ನಟ ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳ ಜಾಮೀನು ರದ್ದು
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ