/newsfirstlive-kannada/media/media_files/2025/08/13/atm-theft-arrest1-2025-08-13-08-55-15.jpg)
ಬಳ್ಳಾರಿ: ಎಟಿಎಂ ದರೋಡೆಗೆ ಯತ್ನಿಸುತ್ತಿದ್ದ ಆರೋಪಿಯನ್ನು ಸಿನಿಮಾ ಸ್ಟೈಲ್ನಲ್ಲಿ ಪೊಲೀಸರು ಹಿಡಿದಿರೋ ಘಟನೆ ಕಾಳಮ್ಮ ಸರ್ಕಲ್ ಬಳಿ ನಡೆದಿದೆ. ವೆಂಕಟೇಶ ಬಂಧಿತ ಆರೋಪಿ.
ಇದನ್ನೂ ಓದಿ: ‘ನಾವಿಬ್ಬರು ಮ್ಯೂಚುಯಲ್ ಬ್ರೇಕಪ್ ಆಗಿದ್ದೇವೆ..’ ಭರ್ಜರಿ ಬ್ಯಾಚ್ಯುಲರ್ಸ್ ವಿನ್ನರ್ ಸುನಿಲ್, ಅಮೃತಾ ಹೇಳಿದ್ದೇನು
ಕಾಳಮ್ಮ ಸರ್ಕಲ್ ಬಳಿ ಇರುವ ಆಕ್ಸಿಸ್ ಬ್ಯಾಂಕ್ನ ಎಟಿಎಂ ದರೋಡೆಗೆಂದು ಕಳ್ಳ ಬಂದಿದ್ದ. ಖಚಿತ ಮಾಹಿತಿ ಮೇರೆಗೆ ಎಎಸ್ಐ ಮಲ್ಲಿಕಾರ್ಜುನ ಹಾಗೂ ಕಾನ್ಸ್‌ಟೇಬಲ್ ನಿಂಗಪ್ಪ ಸ್ಥಳಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಎಟಿಎಂನಲ್ಲಿ ಹಣ ದೋಚಲು ಯತ್ನಿಸಿದ ಕಳ್ಳನನ್ನು ಸಿನಿಮಾ ಸ್ಟೈಲ್ನಲ್ಲಿ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ನಿನ್ನೆ ಮಧ್ಯರಾತ್ರಿ 1.30ರ ಸುಮಾರಿಗೆ ಈ ಘಟನೆ ನಡೆದಿದೆ.
ಬಂಧಿತ ಆರೋಪಿ ವೆಂಕಟೇಶ ಆಂಧ್ರಪ್ರದೇಶದ ಅನಂತಪುರದವನು. ಇನ್ನು, ಪೊಲೀಸರ ಸಮಯಪ್ರಜ್ಞೆ ಹಾಗೂ ಸಾಹಸಕ್ಕೆ ಎಸ್ಪಿ ಡಾ. ಶೋಭಾರಾಣಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜೊತೆಗೆ ಸಿಬ್ಬಂದಿಗೆ ಸನ್ಮಾನಿಸಿ ಅಭಿನಂದಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ