/newsfirstlive-kannada/media/media_files/2025/12/17/music-mailari-2025-12-17-11-54-27.jpg)
ಬಾಗಲಕೋಟೆ: ಪೋಕ್ಸೋ ಪ್ರಕರಣದಲ್ಲಿ ಜಾನಪದ ಗಾಯಕ ಮ್ಯೂಸಿಕ್ ಮೈಲಾರಿಯನ್ನ (Music Mailari) ಅರೆಸ್ಟ್ ಮಾಡಲಾಗಿದೆ. ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಕುಡಗುಂಟಿ ಗ್ರಾಮದ ನಿವಾಸಿಯಾಗಿರುವ ಮ್ಯೂಸಿಕ್ ಮೈಲಾರಿ ವಿರುದ್ಧ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಕೇಳಿಬಂದಿತ್ತು.
ಈ ಸಂಬಂಧ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿತ್ತು. ದೂರು ದಾಖಲಿಸಿಕೊಂಡಿದ್ದ ಪೊಲೀಸರು ಇವತ್ತು ಬೆಳಗ್ಗೆ 5.30 ರ ಸುಮಾರಿಗೆ ಆರೋಪಿಯನ್ನು ಬಂಧಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಬಾಗಲಕೋಟೆ ಎಸ್ಪಿ ಸಿದ್ಧಾರ್ಥ್ ಗೋಯಲ್, ಪ್ರಕರಣ ದಾಖಲಾಗುತ್ತಿದಂತೆ ಮೈಲಾರಿ ಬಂಧನಕ್ಕೆ ಬಾಗಲಕೋಟೆ ಪೋಲಿಸರು ಬಲೆ ಬೀಸಿದ್ದರು. ನಿನ್ನೆಯಿಂದ ನಮ್ಮ ತಂಡ ಮೈಲಾರಿ ಬೆನ್ನು ಬಿದ್ದಿತ್ತು. ವಿಜಯಪುರ ಮಾರ್ಗವಾಗಿ ತಿಕೋಟಾದಿಂದ ವಿಜಯಪುಕ್ಕೆ ಪ್ರಯಾಣ ಮಾಡುತ್ತಿದ್ದ ವೇಳೆ ಅರೆಸ್ಟ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಏನಿದು ಪ್ರಕರಣ..?
2025ರ ಅಕ್ಟೋಬರ್ 24ರಂದು ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ ಎಂದು ಆರೋಪಿಸಲಾಗಿದೆ. ಬೆಳಗಾವಿ ಜಿಲ್ಲೆಯ ಗ್ರಾಮವೊಂದರಲ್ಲಿ ಹನುಮಂತ ದೇವರ ಓಕುಳಿ ಪ್ರಯುಕ್ತ ಆಯೋಜಿಸಿದ್ದ ಆರ್ಕೆಸ್ಟ್ರಾ ಕಾರ್ಯಕ್ರಮದಲ್ಲಿ ಹಾಡಲು ಮ್ಯೂಸಿಕ್ ಮೈಲಾರಿ ಆಗಮಿಸಿದ್ದ. ಇದೇ ಆರ್ಕೆಸ್ಟ್ರಾದಲ್ಲಿ ಅಪ್ರಾಪ್ತ ಬಾಲಕಿ ಡ್ಯಾನ್ಸ್ ಮಾಡಲು ಬಂದಿದ್ದಳು. ಕಾರ್ಯಕ್ರಮದ ವೇಳೆ ಲಾಡ್ಜ್‌ಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಬಾಲಕಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾಳೆ. ಮ್ಯೂಸಿಕ್ ಮೈಲಾರಿ ಸೇರಿದಂತೆ ಏಳು ಜನರು ಅಪರಾಧ ಎಸಗಿದ್ದಾರೆ ಎಂದು ಬಾಲಕಿ ಆರೋಪಿಸಿದ್ದಾಳೆ.
ಇದನ್ನೂ ಓದಿ: 25.20 ಕೋಟಿ ಗ್ರೀನ್.. ಈ ಆಲ್​ರೌಂಡರ್​ಗೆ ಇಷ್ಟೊಂದು ಡಿಮ್ಯಾಂಡ್ ಯಾಕೆ ಗೊತ್ತಾ..?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us