/newsfirstlive-kannada/media/media_files/2025/12/03/bagalakote-accident-2025-12-03-13-24-28.jpg)
ಬಾಗಲಕೋಟೆ: ಸಿದ್ದಾಪುರ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ. ನಿಂತಿದ್ದ ಕಬ್ಬಿನ ಟ್ರ್ಯಾಕ್ಟರ್​ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ಅನಾಹುತ ಸಂಭವಿಸಿದೆ.
ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ. ವಿಶ್ವನಾಥ್ ಕಂಬಾರ್ (17), ಪ್ರವೀಣ್ ಶೇಡಬಾಳ್ (22), ಗಣೇಶ ಅಳ್ಳಿಮಟ್ಟಿ (20), ಪ್ರಜ್ವಲ್ ಶೇಡಬಾಳ್ (17) ಮೃತ ದುರ್ದೈವಿಗಳು. ಮೃತರೆಲ್ಲರೂ ಸಿದ್ದಾಪುರ ಗ್ರಾಮದ ನಿವಾಸಿಗಳು.
/filters:format(webp)/newsfirstlive-kannada/media/media_files/2025/12/03/bagalakote-2025-12-03-13-29-05.jpg)
ಕಾರಿನಲ್ಲಿದ್ದ ಮೃತದೇಹಗಳನ್ನು ಜೆಸಿಬಿಯಿಂದ ಪೊಲೀಸರು ಹೊರ ತೆಗೆದಿದ್ದಾರೆ. ಸ್ಥಳಕ್ಕೆ ಜಮಖಂಡಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us