/newsfirstlive-kannada/media/media_files/2026/01/02/ballari-rajashekara-1-2026-01-02-08-53-04.jpg)
ಬಳ್ಳಾರಿ ನಗರದಲ್ಲಿ ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ಅವರ ಮನೆ ಮುಂದೆ ಬ್ಯಾನರ್ ಕಟ್ಟುವ ವಿಚಾರಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆಯಾಗಿದೆ. ಈ ಘಟನೆಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್ ಆಗಿದ್ದು, ಕಾಂಗ್ರೆಸ್​ ಕಾರ್ಯಕರ್ತ ರಾಜಶೇಖರ್ ಮೃತಪಟ್ಟಿದ್ದಾನೆ.
ಸದ್ಯ ರಾಜಶೇಖರ್ ಮೃತದೇಹವನ್ನು ಬಳ್ಳಾರಿ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ನ್ಯಾಯ ವೈದ್ಯಶಾಸ್ತ್ರ ವಿಭಾಗದ ವೈದ್ಯರಿಂದ ಮರಣೋತ್ತರ ಪರೀಕ್ಷೆ ನಡೆಯಲಿದೆ. 1 ತಾಸಿಗೂ ಹೆಚ್ಚು ಕಾಲ ಮರಣೋತ್ತರ ಪರೀಕ್ಷೆ ನಡೆಯಲಿದ್ದು, ಪೊಲೀಸ್ ಭದ್ರತೆ ನೀಡಲಿದ್ದಾರೆ. ಇನ್ನು ಶವಾಗಾರದ ಎದುರು ಮೃತನ ಕುಟುಂಬಸ್ಥರು ಜಮಾಯಿಸಿದ್ದಾರೆ.
ಇದನ್ನೂ ಓದಿ:ನನ್ನ ಹತ್ಯೆಗೆ ಸಂಚು ನಡೆದಿದೆ -ಜನಾರ್ದನ ರೆಡ್ಡಿ ಗಂಭೀರ ಆರೋಪ
ಘಟನೆ ಕುರಿತು ಗೃಹಸಚಿವ ಪರಮೇಶ್ವರ್​​​ ಶಾಸಕ ನಾರಾ ಭರತ್ ರೆಡ್ಡಿ ಮತ್ತು ಪೊಲೀಸ್​ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಬ್ಯಾನರ್​ ಅಳವಡಿಕೆ ವೇಳೆ ಕಿತ್ತಾಡಿಕೊಂಡಿರೋ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಜನರ ಮೇಲೆ ಬ್ರೂಸ್‌ಪೇಟೆ ಠಾಣೆಯಲ್ಲಿ FIR ದಾಖಲಾಗಿದೆ. ಶಾಸಕ ಜನಾರ್ದನ​ ರೆಡ್ಡಿ, ಶ್ರೀರಾಮುಲು, ಸೋಮಶೇಖರ್​ ರೆಡ್ಡಿ ಹಾಗೂ ದಮ್ಮೂರು ಶೇಖರ್​ ಸೇರಿ ಒಟ್ಟು 11 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಗಲಾಟೆಯಲ್ಲಿ ಶಾಸಕ ಜನಾರ್ದನ್​ ರೆಡ್ಡಿ ಹಾಗೂ ಶಾಸಕ ಭರತ್ ರೆಡ್ಡಿ ಬೆಂಬಲಿಗರು ಪರಸ್ಪರ ಕಲ್ಲು ತುರಾಟ ಮಾಡಿದ್ದಾರೆ. ಈ ಗಲಾಟೆ ಜೋರಾಗುತ್ತಿದ್ದಂತೆ ಸತೀಶ್​​ ರೆಡ್ಡಿ ಅವ್ರ ಖಾಸಗಿ ಗನ್ ಮ್ಯಾನ್‌ಗಳು ​ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.. ಆದ್ರೆ, ಗಲಾಟೆಯಲ್ಲಿ ಕಾಂಗ್ರೆಸ್​​ ಕಾರ್ಯಕರ್ತ ರಾಜಶೇಖರ್​​ ಮೃತಪಟ್ಟಿದ್ದಾನೆ.
ಇದನ್ನೂ ಓದಿ: ಬಳ್ಳಾರಿ ಗಲಾಟೆ - ಜನಾರ್ದನ ರೆಡ್ಡಿ ಸೇರಿ 11 ಜನರ ಮೇಲೆ ಕೇಸ್ ದಾಖಲು
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us