ಬಳ್ಳಾರಿ ಗಲಾಟೆಯಲ್ಲಿ ಮೃತ ರಾಜಶೇಖರ್ ಕುಟುಂಬಕ್ಕೆ 25 ಲಕ್ಷ ಹಣ ನೀಡಿದ ಸಚಿವ ಜಮೀರ್..!

ಬಳ್ಳಾರಿ ಬ್ಯಾನರ್ ಗಲಾಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ರೆಡ್ಡಿ ಪ್ರಾಣ ಕಳೆದುಕೊಂಡಿದ್ದಾರೆ. ಮಗನ ಕಳೆದುಕೊಂಡ ದುಃಖದಲ್ಲಿ ಕುಟುಂಬವಿದ್ದು, ಇವತ್ತು ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಸಂತ್ರಸ್ತರನ್ನು ಭೇಟಿಯಾದರು.

author-image
Ganesh Kerekuli
Updated On
zameer ahmed (1)
Advertisment

ಬಳ್ಳಾರಿ ಬ್ಯಾನರ್ ಗಲಾಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ರೆಡ್ಡಿ ಪ್ರಾಣ ಕಳೆದುಕೊಂಡಿದ್ದಾರೆ. ಮಗನ ಕಳೆದುಕೊಂಡ ದುಃಖದಲ್ಲಿ ಕುಟುಂಬವಿದ್ದು, ಇವತ್ತು ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಸಂತ್ರಸ್ತರನ್ನು ಭೇಟಿಯಾದರು. 

ಈ ವೇಳೆ ಮೃತ ರಾಜಶೇಖರ್ ಕುಟುಂಬಕ್ಕೆ ವೈಯಕ್ತಿಕ ಧನ ಸಹಾಯ ಮಾಡಿದರು. 25 ಲಕ್ಷ ಧನ ಸಹಾಯ ಮಾಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು. ಮೃತ ರಾಜಶೇಖರ ತಾಯಿ ತುಳಸಿ ಕೈಗೆ ಚೀಲದಲ್ಲಿ ಜಮೀರ್ ಅಹ್ಮದ್ ಖಾನ್ ಹಣ ನೀಡಿದರು. 

ಇದೇ ವೇಳೆ ತುಳಸಿ ಅವರು, ಸರ್ಕಾರದಿಂದ ಮನೆ ನೀಡುವಂತೆ ಮನವಿ ಮಾಡಿಕೊಂಡರು. ಅದಕ್ಕೆ ಒಪ್ಪಿದ ಜಮೀರ್, ಸರ್ಕಾರದಿಂದ ಮನೆ ಕಟ್ಟಿಸಿಕೊಡಲಾಗುವುದು ಎಂದು ಭರವಸೆ ನೀಡಿದರು. 

ಇದನ್ನೂ ಓದಿ: ಶಮಿ ಮತ್ತೆ ಕಡೆಗಣನೆ.. ಅಯ್ಯರ್​ ಆಯ್ಕೆ ಆಗಿದ್ದರೂ ಆಡೋದು ಡೌಟ್.. BCCI ಹೇಳಿದ್ದೇನು?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Ballari news Ballari banner dispute ballari rajasekhar
Advertisment