/newsfirstlive-kannada/media/post_attachments/wp-content/uploads/2025/05/janardhan-reddy.jpg)
ಬಳ್ಳಾರಿ: ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹಾಗೂ ಆಪ್ತ ಸತೀಶ್ ರೆಡ್ಡಿ ಹಾಗೂ ಭರತ್ ರೆಡ್ಡಿ ತಂದೆ ನಾರಾ ಸೂರ್ಯನಾರಾಣರೆಡ್ಡಿಯಿಂದ ನನ್ನ ಹತ್ಯೆಗೆ ಸಂಚು ನಡೆದಿದೆ ಎಂದು ಮಾಜಿ ಸಚಿವ ಗಾಲಿ ಜನಾರ್ಧನ್ ರೆಡ್ಡಿ ಗಂಭೀರ ಆರೋಪ ಮಾಡಿದ್ದಾರೆ.
ಬ್ಯಾನರ್ ವಿಚಾರಕ್ಕೆ ಸಂಬಂಧಿಸಿ ನಡೆದ ಗಲಾಟೆ ಸಂಬಂಧ ಪ್ರತಿಕ್ರಿಯಿಸಿರುವ ಅವರು, ಬ್ಯಾನರ್ ಗಲಾಟೆ ನೆಪದಲ್ಲಿ ನಮ್ಮ ನಿವಾಸದ ಮುಂದೆ ಗನ್ ಮ್ಯಾನ್‌ಗಳಿಂದ ಗುಂಡಿನ ದಾಳಿಯಾಗಿದೆ. ನಾನು ಗಂಗಾವತಿಯಿಂದ ಕಾರಿನಲ್ಲಿ ಬಂದು ಇಳಿಯುತ್ತಿದ್ದಂತೆ ಗುಂಡಿನ ದಾಳಿ ಆರಂಭಿಸಿದ್ದಾರೆ. ಗನ್ ಮ್ಯಾನ್‌ಗಳು ನಾಲ್ಕಾರು ರೌಂಡ್ ಪೈರ್ ಮಾಡಿದ್ದಾರೆ. ಪುತ್ಥಳಿ ಪ್ರತಿಷ್ಟಾಪನೆ ಹೆಸರಲ್ಲಿಊರಿಗೆ ಬೆಂಕಿ ಹಚ್ಚಲು ಹೊರಟಿದ್ದಾರೆ. ಕೊಲೆಗೆಡುಕರನ್ನ ಹಿಂದಿಟ್ಟುಕೊಂಡು ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
/filters:format(webp)/newsfirstlive-kannada/media/media_files/2026/01/02/ballari-janradhana-reddy-1-2026-01-02-07-27-06.jpg)
ಆಗಿದ್ದೇನು..?
ಬ್ಯಾನರ್ ವಿಚಾರಕ್ಕೆ ನಗರದ ಅವಂಬಾವಿ ಏರಿಯಾದಲ್ಲಿರುವ ಮಾಜಿ ಸಚಿವ, ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಮನೆ ಮುಂದೆ ಎರಡು ಗುಂಪುಗಳ ನಡುವೆ ಗಲಾಟೆ ಆಗಿದೆ. ಜನವರಿ 03ನೇ ತಾರೀಖು (ನಾಳೆ) ವಾಲ್ಮೀಕಿ ಪುತ್ತಳಿ ಅನಾವರಣ ಹಿನ್ನೆಲೆ ಬ್ಯಾನರ್‌ಅಳವಡಿಕೆ ಮಾಡಲಾಗುತ್ತಿತ್ತು. ಒಂದು ಗುಂಪು ಜನಾರ್ದನ ರೆಡ್ಡಿ ಮನೆ ಮುಂದೆ ಬ್ಯಾನರ್ ಅಳವಡಿಕೆ ಮಾಡುತ್ತಿತ್ತು. ಅಲ್ಲಿಗೆ ಧಾವಿಸಿದ ಇನ್ನೊಂದು ಗುಂಪು ಏಕಾಏಕಿ ಗಲಾಟೆ ಮಾಡಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲುಪೊಲೀಸರು ಲಾಠಿಚಾರ್ಜ್‌ಮಾಡಿದ್ದಾರೆ. ನಂತರ ಪೊಲೀಸರ ಮೇಲೆ ಕಲ್ಲು ತೂರಾಟ ನಡೆದಿದೆ. ವಾತಾವರಣ ತಿಳಿಗೊಳಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.
/filters:format(webp)/newsfirstlive-kannada/media/media_files/2026/01/02/ballari-janradhana-reddy-2026-01-02-07-19-22.jpg)
ರಾಮುಲು ಆಗಮನ
ಕಲ್ಲು ತೂರಾಟ ಬೆನ್ನಲ್ಲೇ ಜನಾರ್ದನ ರೆಡ್ಡಿ ಮನೆಗೆ ಮಾಜಿ ಸಚಿವ ಶ್ರೀರಾಮುಲು ಆಗಮಿಸಿದ್ದಾರೆ. ಅಲ್ಲದೇ ಬಿಜೆಪಿ ಕಾರ್ಯಕರ್ತರು ಕೂಡ ಆಗಮಿಸಿದ್ದರು. ಇದರಿಂದ ಸ್ಥಳದಲ್ಲಿ ಮತ್ತಷ್ಟು ಬಿಗುವಿನ ವಾತಾವರಣ ನಿರ್ಮಾಣ ಆಗಿತ್ತು. ನೂರಾರು ಪೊಲೀಸರು ನಿಯೋಜನೆಗೊಂಡಿದ್ದರು. ಎಸ್ಪಿ ಪ್ರವೀಣ್‌ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದರು. ನಂತರ ಘಟನಾ ಸ್ಥಳಕ್ಕೆ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಆಗಮಿಸಿದ್ದರು. ಏಕವಚನದಲ್ಲಿ ಜನಾರ್ದನ ರೆಡ್ಡಿ ವಿರುದ್ಧ ವಾಗ್ದಾಳಿ ನಡೆಸಿದರು. ಇತ್ತ ಮನೆ ಮುಂಭಾಗದಲ್ಲಿ ಗಾಲಿ ಜನಾರ್ದನ ರೆಡ್ಡಿ, ಮಾಜಿ ಶಾಸಕ ಸೋಮಶೇಖರ್ ರೆಡ್ಡಿ, ಮಾಜಿ ಸಚಿವ ರಾಮುಲು ಕೂತಿದ್ದರು. ಇದರಿಂದ ಸ್ಥಳದಲ್ಲಿ ಮತ್ತಷ್ಟು ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.
ಇದನ್ನೂ ಓದಿ:ಬಳ್ಳಾರಿಯಲ್ಲಿ ಜನಾರ್ದನ್ ರೆಡ್ಡಿ ನಿವಾಸದ ಮುಂದೆ ಕಲ್ಲು ತೂರಾಟ, ಭಾರೀ ಗಲಾಟೆ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us