ದೇವರ ದರ್ಶನ ಮುಗಿಸಿ ಬರ್ತಿದ್ದಾಗ ಭೀಕರ ಅಪಘಾತ; ಒಂದೇ ಕುಟುಂಬದ ಮೂವರು ನಿಧನ

ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಪ್ರಾಣ ಕಳೆದುಕೊಂಡಿರುವ ಘಟನೆ ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲ್ಲೂಕಿನ ದೇವಿನಗರ ಕ್ಯಾಂಪ್ ಬಳಿಯ ಬಳ್ಳಾರಿ-ಸಿರುಗುಪ್ಪ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.

author-image
Ganesh Kerekuli
Ballari accident (1)
Advertisment

ಬಳ್ಳಾರಿ: ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಪ್ರಾಣ ಕಳೆದುಕೊಂಡಿರುವ ಘಟನೆ ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲ್ಲೂಕಿನ ದೇವಿನಗರ ಕ್ಯಾಂಪ್ ಬಳಿಯ ಬಳ್ಳಾರಿ-ಸಿರುಗುಪ್ಪ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. 

ನಿಟ್ಟೂರು ಗ್ರಾಮದ ಒಂದೇ ಕುಟುಂಬದ ಐವರು ತಮಿಳುನಾಡಿನ ದೇವಸ್ಥಾನಕ್ಕೆ ತೆರಳಿ ವಾಪಸ್ಸಾಗುವ ವೇಳೆ ದುರ್ಘಟನೆ ಸಂಭವಿಸಿದೆ. ನಿಟ್ಟೂರು ಗ್ರಾಮದ ಪ್ರಸಾದ್ ರಾವ್ ಹಾಗೂ ಇಬ್ಬರು ಮಹಿಳೆಯರು ಸೇರಿ ಮೂವರು ಪ್ರಾಣ ಬಿಟ್ಟಿದ್ದಾರೆ. 

ಇದನ್ನೂ ಓದಿ: ಸರ್ಕಾರದಿಂದ ಮೊಬೈಲ್ ಬಳಕೆದಾರರಿಗೆ ‘CNAP ID’ -ಏನಿದು? ಏನು ಲಾಭ?

ಅಪಘಾತದಲ್ಲಿ ಇನ್ನಿಬ್ಬರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾರು ಬೆಳಗಿನ ಜಾವ, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಸ್ಥಳಕ್ಕೆ ತೆಕ್ಕಲಕೋಟೆ ಪೊಲೀಸರು ಭೇಟಿ ಪರಿಶೀಲಿಸಿದ್ದಾರೆ. 

ಇದನ್ನೂ ಓದಿ: ಈ ಸ್ಪರ್ಧಿಗೆ ದುರಹಂಕಾರ -ರಜತ್ ಪ್ರಕಾರ ಬಿಗ್ ​ಬಾಸ್​ನಲ್ಲಿ ಯಾರು ಹೆಂಗೆಂಗೆ..?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Accident NEWS
Advertisment