/newsfirstlive-kannada/media/media_files/2025/10/06/bng_wife-2025-10-06-16-31-26.jpg)
ಬೆಂಗಳೂರು: ಕೌಟುಂಬಿಕ ಕಲಹದಲ್ಲಿ ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಪ್ರಾಣ ಬಿಟ್ಟಿರುವ ಘಟನೆ ಸಿಲಿಕಾನ್ ಸಿಟಿಯ ಲಗ್ಗೆರೆಯ ಮುನೇಶ್ವರ ಬ್ಲಾಕ್ ಬಳಿ ನಡೆದಿದೆ.
ಲಗ್ಗೆರೆಯ ಮುನೇಶ್ವರ ಬ್ಲಾಕ್ ನಿವಾಸಿ ರಕ್ಷಿತಾ (26) ಜೀವ ಕಳೆದುಕೊಂಡವರು. ಈ ಮಹಿಳೆ 4 ವರ್ಷಗಳ ಹಿಂದೆ ಖಾಸಗಿ ಬ್ಯಾಂಕ್ ಉದ್ಯೋಗಿ ರವೀಶ್​ ಎನ್ನುವನನ್ನ ಮದುವೆಯಾಗಿದ್ದರು. ಆದರೆ ಕಳೆದ ಮೂರು ವರ್ಷಗಳಿಂದ ಪತ್ನಿ ಜೊತೆ ಗಲಾಟೆ ಮಾಡಲು ಶುರು ಮಾಡಿದ್ದನು. ರವೀಶ್ ಜೊತೆಯೇ ವಾಸವಿದ್ದ ಸಹೋದರ ಲೋಕೇಶ್ ಕೂಡ ರಕ್ಷಿತಾ ಜೊತೆ ಗಲಾಟೆ ಮಾಡುತ್ತಿದ್ದನು. ನಿನ್ನೆ ರಾತ್ರಿ ಕೂಡ ಈ ಇಬ್ಬರೂ ಮೊದಲಿನಿಂತೆ ಗಲಾಟೆ ಮಾಡಿದ್ದಾರೆ.
ಇದನ್ನೂ ಓದಿ: ಅಗ್ನಿ ಪರೀಕ್ಷೆಯಲ್ಲಿ ಶುಭ್​ಮನ್​ ಗಿಲ್.. ‘ಯುವರಾಜ’ನ ಮುಂದಿವೆ 5 ಬಿಗ್ ಚಾಲೆಂಜ್..!
ನಿತ್ಯ ಜಗಳದಿಂದ ಮನನೊಂದಿದ್ದ ಮಹಿಳೆ, ಇಂದು ಬೆಳಗ್ಗೆ ನೇಣು ಬಿಗಿದುಕೊಂಡು ಪ್ರಾಣ ಬಿಟ್ಟಿದ್ದಾರೆ. ಈಕೆಯ ಗಂಡ ರವೀಶ್ ಖಾಸಗಿ ಬ್ಯಾಂಕ್​ನಲ್ಲಿ ಮ್ಯಾನೇಜರ್​ ಆಗಿ ಕೆಲಸ ಮಾಡುತ್ತಿದ್ದಾನೆ. ಈತನೇ ಹೆಂಡತಿಯ ಜೀವ ತೆಗೆದಿದ್ದಾನೆ ಎಂದು ಮಹಿಳೆಯ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಪತ್ನಿ ಜೊತೆ ಮೂರು ವರ್ಷದ ಹೆಣ್ಣು ಮಗುವಿನ ಮೇಲೆಯೂ ಹಲ್ಲೆ ಮಾಡುತ್ತಿದ್ದನು ಎಂದು ಕುಟುಂಬಸ್ಥರು ಗಂಭೀರವಾದ ಆರೋಪ ಮಾಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ