/newsfirstlive-kannada/media/post_attachments/wp-content/uploads/2024/09/ganesha-chaturthi.jpg)
ಬೆಂಗಳೂರು: ಗೌರಿ-ಗಣೇಶ ಹಬ್ಬಕ್ಕೆ ಇನ್ನೊಂದು ವಾರವಷ್ಟೇ ಬಾಕಿ. ಬೆಂಗಳೂರಲ್ಲಿ ಬಿಬಿಎಂಪಿ ಸಕಲ ಸಿದ್ಧತೆ ನಡೆಸಿದ್ದು ಕಟ್ಟುನಿಟ್ಟಿನ ರೂಲ್ಸ್ ಜಾರಿ ಮಾಡಿದೆ. ಬೃಹತ್ ಪಾಲಿಕೆ ಜೊತೆ ಮಾಲಿನ್ಯ ನಿಯಂತ್ರಣ ಮಂಡಳಿ ಕೂಡ ಕೈ ಜೋಡಿಸಿದ್ದು ಪಿಓಪಿ ಗಣೇಶ ಮೂರ್ತಿ ತಯಾರಿಕೆ, ಮಾರಾಟ, ವಿಸರ್ಜನೆ ಮೇಲೆ ಹದ್ದಿನ ಕಣ್ಣಿಟ್ಟಿದೆ.
ಗೌರಿ-ಗಣೇಶ ಭಾದ್ರಪದ ಮಾಸದ ಶುಕ್ಲಪಕ್ಷದಲ್ಲಿ ಆಚರಿಸುವ ಸಂಭ್ರಮದ ಹಬ್ಬ. ಅತ್ಯಂತ ವೈಭವದಿಂದ ಆಚರಿಸುವ ಹಬ್ಬಕ್ಕೆ ನಮ್ಮ ಸಂಪ್ರದಾಯದಲ್ಲಿ ಬಹಳ ಪ್ರಾಮುಖ್ಯತೆ ಇದೆ. ಸುಖ, ಶಾಂತಿ ಸಮೃದ್ಧಿಗಾಗಿ ಎಲ್ಲೆಡೆ ಪೂಜೆ-ಪುನಸ್ಕಾರ ನಡೆಯುತ್ತೆ, ಆದ್ರೆ, ಹಬ್ಬದ ನೆಪದಲ್ಲಿ ಪರಿಸರ ಮಾಲಿನ್ಯ ಹಾಗೂ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರುವ ಕೃತ್ಯಕ್ಕೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದೆ.
ಇದನ್ನೂ ಓದಿ: ಪ್ರೀತಿ ನಿರಾಕರಿಸಿದ ವಿವಾಹಿತೆ.. ಕಾರು ಸಮೇತ ಕೆರೆಗೆ ತಳ್ಳಿ ಜೀವ ತೆಗೆದನಾ ಕಿರಾತಕ..?
ಗೌರಿ-ಗಣೇಶ ಹಬ್ಬಕ್ಕೆ ಇನ್ನೊಂದೇ ವಾರ ಬಾಕಿ ಇದ್ದು ಭರದ ತಯಾರಿ ನಡೀತಿದೆ. ಗಣೇಶಮೂರ್ತಿ ತಯಾರಕರು ಈಗಾಗಲೇ ತರಹೇವಾರಿ ಗಣೇಶ ಮೂರ್ತಿಗಳನ್ನು ತಯಾರು ಮಾಡಿದ್ದು ಮಾರಾಟ ಮಾಡಲು ಸಜ್ಜಾಗಿದ್ದಾರೆ. ಇನ್ನು, ಮಣ್ಣಿನ ಗಣಪತಿ ಪೂಜಿಸಿ, ಹಸಿರು ಪಟಾಕಿ ಬಳಸಿ, ಸಿಂಗಲ್ ಯೂಸ್ ಪ್ಲಾಸ್ಟಿಕ್ ಬಳಸಿ ಅಂತ ಸಾರ್ವಜನಿಕರಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಮನವಿ ಮಾಡಿದ್ರು.
ಇತ್ತ ರಾಜಧಾನಿ ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬಕ್ಕೆ ಕೆಲವೇ ದಿನ ಬಾಕಿಯಿರುವಾಗ ಬಿಬಿಎಂಪಿ ಮಾರ್ಗಸೂಚಿ ಪ್ರಕಟಿಸಿದೆ. ಪಿಒಪಿ ಗಣೇಶನ ಮೂರ್ತಿ ಮಾರಾಟ ಮಾಡಿದ್ರೆ ಕ್ರಿಮಿನಲ್ ಕೇಸ್ ಆಗುತ್ತೆ, ನಿಷೇಧಿತ ವಸ್ತು ಬಳಸಿ ತಯಾರಿಸಿದ ಗಣೇಶನ ಮೂರ್ತಿಗಳನ್ನು ವಶಪಡಿಸಿಕೊಳ್ಳಲಾಗುತ್ತದೆ. ನೈಸರ್ಗಿಕ ಗಣೇಶನನ್ನೇ ಪೂಜಿಸಬೇಕು. ಹಬ್ಬದ ನೆಪದಲ್ಲಿ ಜೋರಾಗಿ ಡಿಜೆ ಹಾಕಿಕೊಂಡು ಶಬ್ದ ಮಾಲಿನ್ಯ ಮಾಡುವಂತಿಲ್ಲ. ಗಣೇಶ ಕೂರಿಸಲು ಅನುಮತಿ ಕಡ್ಡಾಯ ಮಾಡಿ ಆದೇಶ ಹೊರಡಿಸಿದೆ. ಒಟ್ಟಾರೆ, 2025ರ ಗಣೇಶೋತ್ಸವ ಪರಿಸರ ಸ್ನೇಹಿಯಾಗಿ ನಡೆಯುವಂತೆ ರಾಜ್ಯ ಸರ್ಕಾರ ಬಿಗಿ ಕ್ರಮಗಳನ್ನು ಕೈಗೊಂಡಿರುವುದು ಶ್ಲಾಘನೀಯ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ