/newsfirstlive-kannada/media/media_files/2025/10/25/cm-sj-2025-10-25-09-33-32.jpg)
ಬೆಳಗಾವಿ: ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಅವರ ಉತ್ತರಾಧಿಕಾರಿ ಹೇಳಿಕೆ ಬೆನ್ನಲ್ಲೆ ಸಿಎಂ ಸಿದ್ದರಾಮಯ್ಯ ಇಂದು ಬೆಳಗಾವಿಗೆ ಭೇಟಿ ನೀಡುತ್ತಿದ್ದಾರೆ. ಸಂಜೆ ನಡೆಯುವ ಕಿತ್ತೂರು ಉತ್ಸವದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಭಾಗಿಯಾಗಲಿದ್ದಾರೆ.
ಕಿತ್ತೂರು ಉತ್ಸವದಲ್ಲಿ ಹಿನ್ನೆಲೆಯಲ್ಲಿ ವಿಶೇಷ ವಿಮಾನದ ಮೂಲಕ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಿಂದ ಹುಬ್ಬಳ್ಳಿಗೆ ತೆರಳಲಿದ್ದಾರೆ. ಬಳಿಕ ರಾತ್ರಿ 9 ಗಂಟೆಗೆ ಅದೇ ವಿಮಾನದ ಮೂಲಕ ಬೆಂಗಳೂರಿಗೆ ವಾಪಾಸ್ ಆಗಲಿದ್ದಾರೆ. ಯಂತೀಂದ್ರ ಅವರ ಉತ್ತರಾಧಿಕಾರಿ ಹೇಳಿಕೆ ಬೆನ್ನಲ್ಲೇ ಶಿಷ್ಯನ ಜೊತೆ ಸಿಎಂ ವೇದಿಕೆ ಹಂಚಕೊಳ್ಳಲಿದ್ದಾರೆ.
ಇಂದು ಸಂಜೆ 7 ಗಂಟೆಗೆ ಶುರುವಾಗಲಿರುವ ಕಿತ್ತೂರು ಉತ್ಸವದ ಸಮಾರೋಪದಲ್ಲಿ ಸಿಎಂ ಸಿದ್ದರಾಮಯ್ಯ ಜೊತೆ ಸಚಿವ ಸತೀಶ್ ಜಾರಕಿಹೊಳಿ ಅವರು ವೇದಿಕೆ ಹಂಚಿಕೊಳ್ಳಲಿದ್ದಾರೆ. ಮೇಲ್ಮನೆ ಸದಸ್ಯ ಯತೀಂದ್ರ ಉತ್ತರಾಧಿಕಾರಿ ಹೇಳಿಕೆಯ ನಂತರ ಇದೇ ಮೊದಲ ಬಾರಿಗೆ ಸಿದ್ದರಾಮಯ್ಯ ಹಾಗೂ ಸಚಿವ ಸತೀಶ್​ ಜಾರಕಿಹೊಳಿ ಭೇಟಿಯಾಗಲಿದ್ದಾರೆ. ಈ ಹಿನ್ನೆಯಲ್ಲಿ ಬೇರೆ ಯಾವುದೇ ಪ್ರವಾಸ ಕೈಗೊಳ್ಳದೇ ಸತೀಶ್ ಜಾರಕಿಹೊಳಿ ಬೆಳಗಾವಿಯಲ್ಲೇ ಉಳಿದುಕೊಂಡಿದ್ದಾರೆ.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us