/newsfirstlive-kannada/media/media_files/2025/12/09/belagavi-three-district-2025-12-09-08-42-01.jpg)
ಗೋಕಾಕ್ ಜಿಲ್ಲೆ ರಚನೆಗೆ ಸಿಎಂಗೆ ಮನವಿ ಸಲ್ಲಿಸಿದ್ದ ಜಾರಕಿಹೊಳಿ ಬ್ರದರ್ಸ್
ರಾಜ್ಯದ ಅತಿ ದೊಡ್ಡ ಜಿಲ್ಲೆಯಾದ ಬೆಳಗಾವಿಯನ್ನು ವಿಭಜನೆ ಮಾಡಲು ಮುಂದಾಗಿದೆ. ಆದರೇ, ಹೊಸದಾಗಿ ಯಾವ ಜಿಲ್ಲೆಯನ್ನು ರಚನೆ ಮಾಡಬೇಕೆಂಬುದು ರಾಜ್ಯ ಸರ್ಕಾರಕ್ಕೆ ಗೊತ್ತಾಗುತ್ತಿಲ್ಲ. ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕರೇ ಒಂದೊಂದು ಜಿಲ್ಲೆಯ ರಚನೆಗೆ ಸಿಎಂ ಮುಂದೆ ಬೇಡಿಕೆಯನ್ನು ಇಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಗೋಕಾಕ್ ಜಿಲ್ಲೆಯನ್ನು ರಚಿಸುವಂತೆ ಸಿಎಂ ಸಿದ್ದರಾಮಯ್ಯ ಮುಂದೆ ಬೇಡಿಕೆ ಇಟ್ಟಿದ್ದಾರೆ. ಸತೀಶ್ ಜಾರಕಿಹೊಳಿಗೆ ಬಾಲಚಂದ್ರ ಜಾರಕಿಹೊಳಿ, ರಮೇಶ್ ಜಾರಕಿಹೊಳಿ ಬೆಂಬಲವಾಗಿ ನಿಂತಿದ್ದಾರೆ.
ಆದರೇ, ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಅಥಣಿ ಜಿಲ್ಲೆಯನ್ನು ರಚನೆ ಮಾಡಬೇಕೆಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ಸಿಎಂ ಮುಂದೆ ಬೇಡಿಕೆ ಇಟ್ಟಿದ್ದಾರೆ.
ಇನ್ನೂ ಕಾಂಗ್ರೆಸ್ ಪಕ್ಷದ ಮತ್ತೊಬ್ಬ ಹಿರಿಯ ಶಾಸಕ ಮಹಾಂತೇಶ್ ಕೌಜಲಗಿ ಬೈಲಹೊಂಗಲ ಜಿಲ್ಲೆಯನ್ನು ರಚನೆ ಮಾಡಬೇಕೆಂದು ಬೇಡಿಕೆ ಇಟ್ಟಿದ್ದಾರೆ.
ಇನ್ನೂ ಕಾಂಗ್ರೆಸ್ ಪಕ್ಷದ ಮತ್ತೊಬ್ಬ ಹಿರಿಯ ನಾಯಕ ಪ್ರಕಾಶ್ ಹುಕ್ಕೇರಿ ಹಾಗೂ ಪುತ್ರ, ಶಾಸಕ ಗಣೇಶ್ ಹುಕ್ಕೇರಿ ಅವರು ಚಿಕ್ಕೋಡಿ ಜಿಲ್ಲೆ ರಚನೆ ಮಾಡಬೇಕೆಂದು ಸಿಎಂ ಮುಂದೆ ಬೇಡಿಕೆ ಇಟ್ಟಿದ್ದಾರೆ.
ಹೀಗೆ ಒಬ್ಬೊಬ್ಬರು ಒಂದೊಂದು ಜಿಲ್ಲೆಯನ್ನು ರಚನೆ ಮಾಡುವಂತೆ ಬೇಡಿಕೆ ಇಟ್ಟಿರುವುದರಿಂದ ಯಾವ ಜಿಲ್ಲೆಯನ್ನು ರಚನೆ ಮಾಡಬೇಕು, ಯಾವುದನ್ನು ಮಾಡಬಾರದು ಎಂಬುದೇ ರಾಜ್ಯ ಸರ್ಕಾರಕ್ಕೆ ಗೊತ್ತಾಗುತ್ತಿಲ್ಲ.
ಬೆಳಗಾವಿಯಲ್ಲಿ ನಾಲ್ಕು ಜಿಲ್ಲೆಗಳ ರಚನೆಗೆ ಬೇರೆ ಬೇರೆ ನಾಯಕರಿಂದ ಬೇಡಿಕೆ ಬಂದಿದೆ. ರಾಜ್ಯ ಸರ್ಕಾರ ಯಾವುದೇ ತೀರ್ಮಾನ ಕೈಗೊಂಡರೂ ಮತ್ತೊಬ್ಬರಿಗೆ ನಿರಾಶೆ, ಅಸಮಾಧಾನ ಉಂಟಾಗುತ್ತೆ. ಅದು ಎಲ್ಲಿ ಬಂಡಾಯಕ್ಕೆ ಕಾರಣವಾಗುತ್ತೋ ಎಂಬ ಆತಂಕ ರಾಜ್ಯ ಸರ್ಕಾರಕ್ಕೆ ಇದೆ.
ಇದರಿಂದ ಸಿಎಂ ಸಿದ್ದರಾಮಯ್ಯ, ಬೆಳಗಾವಿ ಜಿಲ್ಲಾ ವಿಭಜನೆಯ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ದಶಕಗಳಿಂದ ಜಿಲ್ಲಾ ವಿಭಜನೆಗೆ ಹೋರಾಟ ಮಾಡುತ್ತಿದ್ದ ನಾಯಕರು, ಹೋರಾಟಗಾರರಿಗೂ ಈಗ ನಿರಾಶೆಯಾಗಿದೆ. ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ನಾಯಕರು ಹೊಸ ಜಿಲ್ಲಾ ರಚನೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ತಮ್ಮ ತಾಲ್ಲೂಕುಗಳನ್ನೇ ಜಿಲ್ಲಾ ಕೇಂದ್ರವಾಗಿಸಿ ಜಿಲ್ಲೆ ರಚಿಸಬೇಕೆಂದು ಬೇಡಿಕೆ ಇಟ್ಟಿದ್ದಾರೆ. ಈ ಮೂಲಕ ಮುಂದೆ ತಾವೇ ಹೊಸ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವರಾಗಬಹುದು. ತಮ್ಮ ವಿಧಾನಸಭಾ ಕ್ಷೇತ್ರಕ್ಕೆ ಜಿಲ್ಲಾ ಕೇಂದ್ರದ ಸ್ಥಾನಮಾನ ತಂದುಕೊಡಬೇಕೆಂಬ ತವಕದಲ್ಲಿ ಕಾಂಗ್ರೆಸ್ ಶಾಸಕರು, ಸಚಿವರು ಇದ್ದಾರೆ.
/filters:format(webp)/newsfirstlive-kannada/media/media_files/2025/12/22/belagavi-new-districts-demand-2025-12-22-12-26-48.jpg)
ಬೆಳಗಾವಿ ಜಿಲ್ಲೆಯಲ್ಲಿ ಸದ್ಯ 18 ವಿಧಾನಸಭಾ ಕ್ಷೇತ್ರಗಳಿವೆ. ಬೆಂಗಳೂರು ನಗರ ಜಿಲ್ಲೆಯಲ್ಲಿ 28 ವಿಧಾನಸಭಾ ಕ್ಷೇತ್ರಗಳಿವೆ. ಬೆಂಗಳೂರಿನ ನಂತರ ರಾಜ್ಯದ 2ನೇ ಅತಿ ದೊಡ್ಡ ಜಿಲ್ಲೆ ಅಂದರೇ, ಬೆಳಗಾವಿ ಜಿಲ್ಲೆ.
ಬೆಳಗಾವಿ ಜಿಲ್ಲೆಯನ್ನು ವಿಭಜಿಸಿದರೇ, ಮಹಾರಾಷ್ಟ್ರದ ವಾದಕ್ಕೆ ಅನುಕೂಲವಾಗದಂತೆ ನೋಡಿಕೊಳ್ಳಬೇಕು. ಹೀಗಾಗಿ ರಾಜ್ಯ ಸರ್ಕಾರ ಈ ವಿಚಾರದಲ್ಲಿ ಯಾವುದೇ ಆತುರದ ತೀರ್ಮಾನ ಕೈಗೊಳ್ಳುತ್ತಿಲ್ಲ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us