ಡಿಕೆ ಶಿವಕುಮಾರ್ ಆಪ್ತ ಕಾರ್ಯದರ್ಶಿ ಕಾರು ಅಪಘಾತ; ಬೈಕ್ ಸವಾರ ನಿಧನ

ಡಿಸಿಎಂ ಡಿಕೆ ಶಿವಕುಮಾರ್ ಅವರ ಆಪ್ತ ಕಾರ್ಯದರ್ಶಿ ಕಾರು ಅಪಘಾತವಾಗಿ ಬೈಕ್​ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ದಾರುಣ ಘಟನೆ ಬೆಳಗಾವಿಯ ಸವದತ್ತಿ ಪಟ್ಟಣದ ಹೊರವಲಯದಲ್ಲಿ ಸಂಭವಿಸಿದೆ.

author-image
Ganesh Kerekuli
car accident
Advertisment

ಬೆಳಗಾವಿ: ಡಿಸಿಎಂ ಡಿಕೆ ಶಿವಕುಮಾರ್ ಅವರ ಆಪ್ತ ಕಾರ್ಯದರ್ಶಿ ಕಾರು ಅಪಘಾತವಾಗಿ ಬೈಕ್​ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ದಾರುಣ ಘಟನೆ ಬೆಳಗಾವಿಯ ಸವದತ್ತಿ ಪಟ್ಟಣದ ಹೊರವಲಯದಲ್ಲಿ ಸಂಭವಿಸಿದೆ. 

ಮಂಜುನಾಥ್ ಬೈರ್ನಟ್ಟಿ ಅಪಘಾತದಲ್ಲಿ ಮೃತಪಟ್ಟಿದ್ದು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಒಡೆತನದ ಹರ್ಷಾ ಸಕ್ಕರೆ ಕಾರ್ಖಾನೆಗೆ ಕೆಲಸಕ್ಕೆ ಹೊರಟ್ಟಿದ್ದರು. ಈ ವೇಳೆ ಡಿಸಿಎಂ ಖಾಸಗಿ ಕಾರ್ಯದರ್ಶಿ ಹಿರಿಯ ಕೆಎಎಸ್ ಅಧಿಕಾರಿ ರಾಜೇಂದ್ರ ಪ್ರಸಾದ್ ಕಾರು ಅಪಘಾತವಾಗಿದೆ. ಪರಿಣಾಮ ಬೈಕ್​ ಸವಾರ ಮಂಜುನಾಥ್ ಬೈರ್ನಟ್ಟಿ ಮೃತಪಟ್ಟಿದ್ದು, ಡಿಸಿಎಂ ಖಾಸಗಿ ಪಿಎ ರಾಜೇಂದ್ರ ಪ್ರಸಾದ್ ಹಾಗೂ ಕಾರು ಚಾಲಕನಿಗೂ ಗಾಯಗಳಾಗಿದೆ. ಧಾರವಾಡ ಆಸ್ಪತ್ರೆಗೆ ಶಿಫ್ಟ್​ ಮಾಡಿ ಚಿಕಿತ್ಸೆ ಕೊಡಿಸಲಾಗ್ತಿದೆ.

ಇನ್ನು ಅಪಘಾತದಲ್ಲಿ ಗಾಯಗೊಂಡ ರಾಜೇಂದ್ರ ಪ್ರಸಾದ್ ಅವರ ಆರೋಗ್ಯವನ್ನ ಡಿಸಿಎಂ ಡಿಕೆ ಶಿವಕುಮಾರ್​ ವಿಚಾರಿಸಿದ್ರು. ಆಸ್ಪತ್ರೆಗೆ ಭೇಟಿ ನೀಡಿದ ಡಿಕೆ ಶಿವಕುಮಾರ್​ ರಾಜೇಂದ್ರ ಪ್ರಸಾದ್ ಹಾಗೂ ಚಾಲಕನ ಆರೋಗ್ಯವನ್ನ ವಿಚಾರಿಸಿದ್ರು. ಈ ವೇಳೆ ಅಪಘಾತದಲ್ಲಿ ಮೃತ ಪಟ್ಟ ಯುವಕನ ಕುಟಂಬಸ್ಥರನ್ನ ಭೇಟಿಯಾಗಿ, ಸಾಂತ್ವನ ತಿಳಿಸುತ್ತೇನೆ ಅಂತ ಡಿಕೆ ಶಿವಕುಮಾರ್​ ಹೇಳಿದ್ದಾರೆ.

ಇದನ್ನೂ ಓದಿ:ಚೀನಾ GPS ಟ್ರ್ಯಾಕರ್‌ ಸುತ್ತ ಅನುಮಾನ.. ಭಾರತಕ್ಕೆ ಅದೆಷ್ಟು ಡೇಂಜರ್‌?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

DK Shivakumar Car Accident
Advertisment