ಪತ್ನಿಯ ಜೀವ ತೆಗೆದು ಹೃದಯಾಘಾತ ಅಂತಾ ಬಿಂಬಿಸಿದ.. ಈಗ ಏನಾಯ್ತು..?

ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ನಾಗರಿಕ ಸಮಾಜ ತಲೆತಗ್ಗಿಸುವಂತಹ ಘಟನೆಯೊಂದು ನಡೆದಿದೆ. ಶೀಲದ ಮೇಲಿನ ಸಂಶಯವೊಂದು ಒಂದು ಜೀವವನ್ನು ಬಲಿಪಡೆದಿದ್ದು, ಕಾಪೋಲಿ ಗ್ರಾಮದಲ್ಲಿ ಸ್ಮಶಾನ ಮೌನ ಆವರಿಸಿದೆ.

author-image
Ganesh Kerekuli
belagavi case
Advertisment

ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ನಾಗರಿಕ ಸಮಾಜ ತಲೆತಗ್ಗಿಸುವಂತಹ ಘಟನೆಯೊಂದು ನಡೆದಿದೆ. ಪತ್ನಿಯ ಶೀಲ ಶಂಕಿಸಿದ ಪತಿಯೊಬ್ಬ ಆಕೆಯನ್ನು ಭೀಕರವಾಗಿ ಹ*ತ್ಯೆ ಮಾಡಿದ್ದಾನೆ. ಬಳಿಕ ಅದನ್ನು ಸಹಜ ಸಾವು ಎಂದು ಬಿಂಬಿಸಲು ಹೋಗಿ ಈಗ ಪೊಲೀಸರ ಅತಿಥಿಯಾಗಿದ್ದಾನೆ. 

ಘಟನೆಯ ವಿವರ

ಖಾನಾಪುರ ತಾಲೂಕಿನ ಕಾಪೋಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. 30 ವರ್ಷದ ಕಿರಣಾ ಬಾಳೇಕುಂದ್ರಿ ಮೃತ ದುರ್ದೈವಿ. ಪತ್ನಿಯ ನಡತೆಯ ಮೇಲೆ ಸಂಶಯ ವ್ಯಕ್ತಪಡಿಸುತ್ತಿದ್ದ ಪತಿ ಅವಿನಾಶ್ ಬಾಳೇಕುಂದ್ರಿ, ಇದೇ ವಿಚಾರವಾಗಿ ಕಳೆದ ಎರಡು ದಿನಗಳಿಂದ ಮನೆಯಲ್ಲಿ ಕಿರಿಕಿರಿ ಮಾಡುತ್ತಿದ್ದ ಎನ್ನಲಾಗಿದೆ.

ಜಗಳ ವಿಕೋಪಕ್ಕೆ ಹೋಗಿದೆ.. 

ಕಳೆದ ಎರಡು ದಿನಗಳಿಂದ ಪತಿ-ಪತ್ನಿಯ ನಡುವೆ ತೀವ್ರ ಜಗಳ ನಡೆಯುತ್ತಿತ್ತು. ಜಗಳ ವಿಕೋಪಕ್ಕೆ ಹೋದ ಸಂದರ್ಭದಲ್ಲಿ ಆಕ್ರೋಶಗೊಂಡ ಅವಿನಾಶ್, ಪತ್ನಿಯ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದ್ದಾನೆ. ಪತಿಯ ಬರ್ಬರ ಹಲ್ಲೆಗೆ ತುತ್ತಾದ ಕಿರಣಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಇದನ್ನೂ ಓದಿ: ವಿಜ್ಞಾನ ಲೋಕಕ್ಕೆ 27 ವರ್ಷಗಳ ಅಮೋಘ ಸೇವೆ.. ಸುನೀತಾ ವಿಲಿಯಮ್ಸ್ ನಿವೃತ್ತಿ..!

ಹೃದಯಾಘಾತದ ನಾಟಕ

ಪತ್ನಿ ಮೃತಪಡುತ್ತಿದ್ದಂತೆಯೇ ಗಾಬರಿಗೊಂಡ ಆರೋಪಿ ಅವಿನಾಶ್, ಪೊಲೀಸರು ಮತ್ತು ಮನೆಯವರಿಂದ ತಪ್ಪಿಸಿಕೊಳ್ಳಲು ಹೊಸ ಸಂಚು ರೂಪಿಸಿದ್ದ. ಪತ್ನಿ ಹೃದಯಾಘಾತದಿಂದ (Heart Attack) ಸಾವನ್ನಪ್ಪಿದ್ದಾಳೆ ಎಂದು ಎಲ್ಲರಿಗೂ ನಂಬಿಸಲು ಯತ್ನಿಸಿದ್ದಾನೆ. ಮಹಿಳೆಯ ದೇಹದ ಮೇಲಿದ್ದ ಗಾಯದ ಗುರುತುಗಳು ಮತ್ತು ಪೋಲಿಸರ ತನಿಖೆಯ ವೇಳೆ ಸತ್ಯಾಂಶ ಹೊರಬಿದ್ದಿದೆ.

ಪೊಲೀಸ್ ಕಾರ್ಯಾಚರಣೆ

ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ನಂದಗಡ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಪತ್ನಿಯ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಪೊಲೀಸರು ಪತಿ ಅವಿನಾಶ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆ ರಹಸ್ಯ ಬಯಲಾಗಿದೆ. ಸದ್ಯ ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿ ಮುಂದಿನ ಕ್ರಮ ಕೈಗೊಳ್ಳಲಾಗಿದೆ. ಶೀಲದ ಮೇಲಿನ ಸಂಶಯವೊಂದು ಒಂದು ಜೀವವನ್ನು ಬಲಿಪಡೆದಿದ್ದು, ಕಾಪೋಲಿ ಗ್ರಾಮದಲ್ಲಿ ಸ್ಮಶಾನ ಮೌನ ಆವರಿಸಿದೆ.

ಇದನ್ನೂ ಓದಿ: SUPER SIX: 3ನೇ ಕ್ರಮಾಂಕದಲ್ಲಿ ಕಿಶನ್ ಬ್ಯಾಟಿಂಗ್.. ಸರಣಿ ಆರಂಭಕ್ಕೂ ಮುನ್ನ ನ್ಯೂಜಿಲೆಂಡ್​ಗೆ ಆಘಾತ..!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ. 

wife husband
Advertisment