/newsfirstlive-kannada/media/media_files/2026/01/06/basavanth-kadolkar-stabbed-2026-01-06-16-33-39.jpg)
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಚಾಕು ಇರಿಯಲಾಗಿದೆ. ಬೆಳಗಾವಿ ನಗರದ ಕ್ಲಬ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ಬಸವಂತ ಕಡೋಲ್ಕರ್( 32) ಮೇಲೆ ಚಾಕುವಿನಿಂದ ದಾಳಿ ನಡೆಸಲಾಗಿದೆ.
ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಕಾರು ಚಾಲಕ ಬಸವಂತ ಮೇಲೆ ದಾಳಿಯಾಗಿದೆ. ಕಾರು ನಿಲ್ಲಿಸಿ ಕೆಳಗೆ ನಿಂತಿದ್ದವನ ಮೇಲೆ ದಾಳಿಯಾಗಿದೆ. ಬೈಕ್ ಮೇಲೆ ಬಂದು ಇಬ್ಬರು ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ. ಎದೆ, ಭುಜ, ತೊಡೆ ಸೇರಿ ನಾಲ್ಕು ಕಡೆ ಚಾಕುವಿನಿಂದ ಇರಿದು ಹತ್ಯೆ ಯತ್ನ ಮಾಡಿದ್ದಾರೆ. ಗಾಯಗೊಂಡ ಬಸವಂತಗೆ ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಖಾಸಗಿ ಆಸ್ಪತ್ರೆಗೆ ಡಿಸಿಪಿ, ಎಸಿಪಿ ಹಾಗೂ ಮೃಣಾಲ್ ಹೆಬ್ಬಾಳ್ಕರ್ ಆಗಮಿಸಿದ್ದಾರೆ. ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹತ್ಯೆ ಯತ್ನದ ಘಟನೆ ನಡೆದಿದೆ.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us