/newsfirstlive-kannada/media/media_files/2025/11/10/mla-laxman-savadi-2025-11-10-16-18-44.jpg)
ಅಥಣಿ ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ
ಬೆಳಗಾವಿ DCC ಬ್ಯಾಂಕ್ ಅಧ್ಯಕ್ಷ- ಉಪಾಧ್ಯಕ್ಷ ಚುನಾವಣೆಯಲ್ಲಿ ಅವಿರೋಧ ಆಯ್ಕೆಯಾಗಿದೆ. ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಮಾಜಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ಮತ್ತು ಉಪಾಧ್ಯಕ್ಷರಾಗಿ ರಾಜು ಕಾಗೆ ಆಯ್ಕೆಯಾಗಿದ್ದಾರೆ. ಅಣ್ಣಾ ಸಾಹೇಬ್ ಜೊಲ್ಲೆ ಬಿಜೆಪಿ ಪಕ್ಷದವರಾದರೂ, ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಸಂಪೂರ್ಣವಾಗಿ ಜಾರಕಿಹೊಳಿ ಬ್ರದರ್ಸ್ ಬಣದಲ್ಲಿ ಗುರುತಿಸಿಕೊಂಡಿದ್ದರು. ಈಗ ಅಣ್ಣಾ ಸಾಹೇಬ್ ಜೊಲ್ಲೆಗೆ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನ ಒಲಿದು ಬಂದಿದೆ. ಇನ್ನೂ ಇಂದು ಬೆಳಿಗ್ಗೆಯಷ್ಟೇ ಡಿಸಿಸಿ ಬ್ಯಾಂಕ್ ಚುನಾವಣೆಗೆ ನನಗೆ ಯಾವುದೇ ಆಸಕ್ತಿ ಇಲ್ಲ ಎಂದಿದ್ದ ಶಾಸಕ ರಾಜು ಕಾಗೆಗೆ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಸ್ಥಾನ ಒಲಿದು ಬಂದಿದೆ. ಇಬ್ಬರನ್ನೂ ಅಧ್ಯಕ್ಷ, ಉಪಾಧ್ಯಕ್ಷರಾಗಿ ಆಯ್ಕೆ ಮಾಡಿರುವುದು ಜಾರಕಿಹೊಳಿ ಬ್ರದರ್ಸ್.
ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಜಾರಕಿಹೊಳಿ ಬ್ರದರ್ಸ್ ಬಣಕ್ಕೆ ವಿರುದ್ಧವಾಗಿ ಇದ್ದಿದ್ದು ಮಾಜಿ ಸಂಸದ ರಮೇಶ್ ಕತ್ತಿ ಹಾಗೂ ಶಾಸಕ ಲಕ್ಷ್ಮಣ್ ಸವದಿ.
ಈಗ ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷರಾಗಿ ಅಣ್ಣಾ ಸಾಹೇಬ್ ಜೊಲ್ಲೆ ಹಾಗೂ ಉಪಾಧ್ಯಕ್ಷರಾಗಿ ರಾಜು ಕಾಗೆ ಆಯ್ಕೆಯಾಗಿದ್ದಕ್ಕೆ ಶಾಸಕ ಲಕ್ಷ್ಮಣ್ ಸವದಿ ಪ್ರತಿಕ್ರಿಯಿಸಿದ್ದಾರೆ. ರೋಗಿ ಬಯಸಿದ್ದು, ಡಾಕ್ಟರ್ ಹೇಳಿದ್ದು ಹಾಲು ಎಂದಿದ್ದಾರೆ. ಈ ಮೂಲಕ ತಾವು ಕೂಡ ಅಣ್ಣಾ ಸಾಹೇಬ್ ಜೊಲ್ಲೆ ಅಧ್ಯಕ್ಷರಾಗಲಿ ಎಂದು ಬಯಸಿದ್ದೇವು ಎಂದು ಅಥಣಿ ಶಾಸಕ ಲಕ್ಷ್ಮಣ್ ಸವದಿ ಹೇಳಿದ್ದಾರೆ.
ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆಯ ವಿಚಾರದಲ್ಲಿ ನನ್ನ ಲೆಕ್ಕಾಚಾರ ತಪ್ಪಾಗಲಿಲ್ಲ . ನನ್ನ ಲೆಕ್ಕ ರಾಜಕೀಯದಲ್ಲಿ ತಪ್ಪಾಗಿಲ್ಲ .ಯಾವಾಗಲೂ ಗುಣಾಕಾರ, ಭಾಗಾಕಾರ ತಪ್ಪಾಗಿಲ್ಲ . ನಾನು ಬರೆದಿಟ್ಟುಕೊಂಡು ಚೋಪಡಿ, ಗಣಿತದಲ್ಲಿ ನಾನು ಎಲ್ಲರಿಗಿಂತ ಮುಂದೆ ಇದ್ದೇನೆ . ಜಿಲ್ಲೆಯ ಸಹಕಾರ ಬ್ಯಾಂಕ್ ಚುನಾವಣೆ ಸಾಕಷ್ಟು ಸದ್ದು ಮಾಡಿತ್ತು . ರೋಗಿ ಬಯಸಿದ್ದು, ಡಾಕ್ಟರ್ ಹೇಳಿದ್ದು ಹಾಲು . ಬ್ಯಾಂಕಿನಲ್ಲಿ ಒಳ್ಳೆಯ ಆಡಳಿತ ನೀಡುವವರು ಅಧ್ಯಕ್ಷರಾಗಿರುವುದು ವೈಯುಕ್ತಿಕವಾಗಿ ಸಂತೋಷವಾಗಿದೆ. ನನ್ನ ಆತ್ಮೀಯರೇ ಅಧ್ಯಕ್ಷ, ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆ . ಅಣ್ಣಾಸಾಹೇಬ್ ಜೊಲ್ಲೆ ಹಾಗೂ ರಾಜು ಕಾಗೆಗೆ ಸಂಪೂರ್ಣ ಸಹಕಾರ ನೀಡುವೆ. ಜನರಲ್ಲಿರುವ ಆತಂಕ ದೂರವಾಗಿದೆ. ನಾವೆಲ್ಲರೂ ಸಹಕಾರ ಕೊಡುತ್ತೇವೆ . ಸಹಕಾರ ಕ್ಷೇತ್ರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ . ಅಣ್ಣಾಸಾಹೇಬ್ ಜೊಲ್ಲೆ ಹಾಗೂ ರಾಜು ಕಾಗೆ ಡಿಸಿಸಿ ಬ್ಯಾಂಕ್ ಗೆ ಸೂಕ್ತ ವ್ಯಕ್ತಿಗಳು . ನನ್ನ ಮಾರ್ಗದರ್ಶನ, ಸಲಹೆಗಳನ್ನು ಇಬ್ಬರಿಗೂ ಮುಂದುವರೆಸುವೆ. ಎಲ್ಲರೂ ಸೇರಿಕೊಂಡು ಸಹಕಾರ ಕ್ಷೇತ್ರವನ್ನು ನಂಬರ್ ಒನ್ ಸ್ಥಾನ ಮಾಡುತ್ತೇವೆ . ಡಿಸಿಸಿ ಬ್ಯಾಂಕ್ ಚುನಾವಣೆಯ ಅಧ್ಯಕ್ಷ, ಉಪಾಧ್ಯಕ್ಷ ಅಯ್ಕೆಯಲ್ಲಿ ಯಾರಿಗೂ ಗೊಂದಲ ಇಲ್ಲ. ನಮ್ಮಲ್ಲಿ ಯಾವುದೇ ತರಹದ ಭಿನ್ನಾಭಿಪ್ರಾಯ ಇಲ್ಲ ಎಂದು ಶಾಸಕ ಹಾಗೂ ಡಿಸಿಸಿ ಬ್ಯಾಂಕ್ ನಿರ್ದೇಶಕ ಲಕ್ಷ್ಮಣ್ ಸವದಿ ಹೇಳಿದ್ದಾರೆ.
/filters:format(webp)/newsfirstlive-kannada/media/media_files/2025/11/10/mla-laxman-savadi-02-2025-11-10-16-20-45.jpg)
16 ಮಂದಿ ನಿರ್ದೇಶಕರು ಹಾಗೂ ಅಪೇಕ್ಸ್ ಬ್ಯಾಂಕ್ ನಿರ್ದೇಶಕರ ಜವಾಬ್ದಾರಿ ಇದೆ. ಬ್ಯಾಂಕ್ ಉಳಿಸಿಕೊಂಡು ಬೆಳೆಸಿಕೊಂಡು ಮಾದರಿ ಮಾಡುತ್ತೇವೆ. ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ ವಿಚಾರದಲ್ಲಿ ಹಸ್ತಕ್ಷೇಪ ಮಾಡಿಲ್ಲ. ನಾನೂ ಕಾಂಗ್ರೆಸ್ ಶಾಸಕ, ಅವರು ಏನಾದರೂ ಆಸಕ್ತಿ ಇದ್ದರೆ ಹೇಳುತ್ತಿದ್ದರು ಎಂದು ಶಾಸಕ ಲಕ್ಷ್ಮಣ್ ಸವದಿ ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us