/newsfirstlive-kannada/media/media_files/2025/11/06/farmers_protest-2025-11-06-07-39-42.jpg)
ಹೆದ್ದಾರಿ ತಡೆದು ಕಬ್ಬು ಬೆಳೆಗಾರ ರೈತರ ಪ್ರತಿಭಟನೆ
ಕಬ್ಬುಗೆ ಪ್ರತಿ ಟನ್‌ಗೆ 3,500 ರೂಪಾಯಿ ಬೆಲೆ ನೀಡಬೇಕೆಂದು ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟ ಇಂದು( ನವಂಬರ್ 7) ತೀವ್ರ ಸ್ವರೂಪ ಪಡೆದುಕೊಂಡಿದೆ. ಬೆಳಗಾವಿ ಜಿಲ್ಲೆಯಲ್ಲಿ ರೈತರು ರಾಷ್ಟ್ರೀಯ ಹೆದ್ದಾರಿ 215 ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಗದ್ದನಕೇರಿ ಕ್ರಾಸ್ ನಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಕಬ್ಬು ಬೆಳೆಗೆ ವೈಜ್ಞಾನಿಕ ಬೆಲೆ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಪೊಲೀಸರು ಹೆದ್ದಾರಿ ತಡೆ ಮಾಡುತ್ತಿರುವ ರೈತರನ್ನು ತೆರವುಗೊಳಿಸಲು ಹರಸಾಹಸಪಡುತ್ತಿದ್ದಾರೆ. ರೈತರ ಪ್ರತಿಭಟನೆಯಲ್ಲಿ ಗುಳೇದಗುಡ್ಡ ಒಪ್ಪತ್ತೇಶ್ವರ ಸ್ವಾಮೀಜಿ ಕೂಡ ಭಾಗಿಯಾಗಿ ಬೆಂಬಲ ಸೂಚಿಸಿದ್ದಾರೆ.
ಬೆಳಗಾವಿಯ ಗದ್ದನಕೇರಿ ಕ್ರಾಸ್ ಬಳಿ ರಸ್ತೆ ಸಂಚಾರ ಬಂದ್ ಮಾಡಲಾಗಿದೆ. ಕಬ್ಬು ಬೆಳೆಗಾರ ರೈತರು ಹಸಿರು ಶಾಲು ಅನ್ನು ಗಾಳಿಯಲ್ಲಿ ತಿರುಗಿಸಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನೂ ಬಾಗಲಕೋಟೆ ಜಿಲ್ಲೆಯ ಮುಧೋಳ ಬಳಿಯೂ ಹೆದ್ದಾರಿ ತಡೆ ಮಾಡಲಾಗಿದೆ. ಬೆಂಗಳೂರಿನ ವಿಧಾನಸೌಧದಲ್ಲಿ ಇಂದು ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಸಿಎಂ ಸಭೆ ನಡೆಸುವರು. ಬಳಿಕ ರೈತ ಮುಖಂಡರ ಜೊತೆಗೂ ಸಭೆ ನಡೆಸಲು ಸಿಎಂ ನಿರ್ಧರಿಸಿದ್ದಾರೆ.
ಈಗಾಗಲೇ ಕಬ್ಬುಗೆ ವೈಜ್ಞಾನಿಕ ಬೆಲೆ ನೀಡಬೇಕೆಂದು ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us