ಸುಪ್ರೀಂ ಕೋರ್ಟ್‌ನಲ್ಲಿ ಇಂದು ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದ ಅರ್ಜಿ ವಿಚಾರಣೆ

ಬೆಳಗಾವಿ ಸೇರಿದಂತೆ 865 ನಗರ, ಪಟ್ಟಣ ಹಾಗೂ ಗ್ರಾಮಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂಬ ಬೇಡಿಕೆಯೊಂದಿಗೆ ಸಲ್ಲಿಸಲಾಗಿದ್ದ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಬೇಕೋ? ಅಥವಾ ತಿರಸ್ಕರಿಸಬೇಕೋ? ಎಂಬುದರ ಬಗ್ಗೆ ಸುಪ್ರೀಂ ಕೋರ್ಟ್ ಇಂದು ನಿರ್ಧಾರ ಕೈಗೊಳ್ಳಲಿದೆ.

author-image
Ganesh Kerekuli
Supreme_Court (2)
Advertisment
  • ಬೆಳಗಾವಿ ಸೇರಿ 865 ನಗರ, ಪಟ್ಟಣ, ಗ್ರಾಮಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಅಂತಾ ಅರ್ಜಿ
  • ಗಡಿ ವಿವಾದ ವಿಚಾರಣೆ ಹಿನ್ನೆಲೆ ಬೆಳಗಾವಿಯಲ್ಲಿ ಪೊಲೀಸ್ ಅಲರ್ಟ್
  • ಬೆಳಗಾವಿ ಕುರಿತು ಮಹಾರಾಷ್ಟ್ರಕ್ಕೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ನವದೆಹಲಿ/ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ನಡುವಿನ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆಯುತ್ತಿದೆ. 25 ವರ್ಷಗಳ ಹಿಂದೆ ಮಹಾರಾಷ್ಟ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ನಡೆಸಲಿದೆ.

ಬೆಳಗಾವಿ ಸೇರಿದಂತೆ 865 ನಗರ, ಪಟ್ಟಣ ಹಾಗೂ ಗ್ರಾಮಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂಬ ಬೇಡಿಕೆಯೊಂದಿಗೆ ಸಲ್ಲಿಸಲಾಗಿದ್ದ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಬೇಕೋ? ಅಥವಾ ತಿರಸ್ಕರಿಸಬೇಕೋ? ಎಂಬುದರ ಬಗ್ಗೆ ಸುಪ್ರೀಂ ಕೋರ್ಟ್ ಇಂದು ನಿರ್ಧಾರ ಕೈಗೊಳ್ಳಲಿದೆ.

ಇದನ್ನೂ ಓದಿ:ಲೇಡಿ ಫಿಟ್ನೆಸ್‌ ಟ್ರೈನರ್‌ ಮೇಲೆ ಸಾಣೆ ಪ್ರೀತಿ.. ಹರಿಯಾಣದಿಂದ ಬೆಂಗಳೂರಿಗೆ ಓಡೋಡಿ ಬಂದ! ಮುಂದೇನಾಯ್ತು..?

ಈ ಕಾನೂನು ಹೋರಾಟದಲ್ಲಿ ಮಹಾರಾಷ್ಟ್ರಕ್ಕೆ ಠಕ್ಕರ್ ನೀಡಲು ಕರ್ನಾಟಕ ಸರ್ಕಾರ ಸಂಪೂರ್ಣ ಸನ್ನದ್ಧವಾಗಿದೆ. ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ ಪರವಾಗಿ ಹಿರಿಯ ನ್ಯಾಯವಾದಿ ನಿಶಾಂತ ಪಾಟೀಲ ವಕಾಲತ್ತು ವಹಿಸಲಿದ್ದಾರೆ. ಮಹಾರಾಷ್ಟ್ರ ಸರ್ಕಾರ ಸಲ್ಲಿಸಿರುವ ಅರ್ಜಿಯನ್ನು ತಿರಸ್ಕರಿಸುವಂತೆ ಕರ್ನಾಟಕ ಸರ್ಕಾರ ಮನವಿ ಮಾಡುವ ಸಾಧ್ಯತೆ ಇದೆ.

ಬೆಳಗಾವಿ ಕುರಿತು ಮಹಾರಾಷ್ಟ್ರಕ್ಕೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಗಡಿ ವಿವಾದ ವಿಚಾರದಲ್ಲಿ ಮಹಾರಾಷ್ಟ್ರಕ್ಕೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಗಡಿ ರೇಖೆ ಗುರುತಿಸುವ ಪರಮಾಧಿಕಾರ ಸಂಸತ್ತಿಗೆ ಮಾತ್ರ ಸೇರಿದೆ ಎಂದು ಸ್ಪಷ್ಟಪಡಿಸಿದ್ದಾರೆ.  ಗಡಿ ರೇಖೆ ನಿರ್ಧಾರವು ಸುಪ್ರೀಂ ಕೋರ್ಟ್ ವ್ಯಾಪ್ತಿಗೆ ಬರುವುದಿಲ್ಲ ಎಂಬುದು ನಮ್ಮ ವಾದ ಎಂದು ಸಿಎಂ ತಿಳಿಸಿದ್ದಾರೆ. ಬೆಳಗಾವಿಯಲ್ಲೇ ನಿಂತು ಮಹಾರಾಷ್ಟ್ರ ನಾಯಕರಿಗೆ ಸ್ಪಷ್ಟ ಸಂದೇಶ ರವಾನಿಸಿರುವ ಅವರು, ಕರ್ನಾಟಕದ ಕಾನೂನು ತಜ್ಞರ ತಂಡ ಬಲಾಢ್ಯವಾಗಿದ್ದು, ಈ ಗಡಿ ವಿವಾದ ನ್ಯಾಯಾಂಗ ವ್ಯಾಪ್ತಿಗೆ ಬರುವುದೇ ಇಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಯಚೂರಿನಲ್ಲಿ ಭೀಕರ ಅಪಘಾತ.. ಸ್ಥಳದಲ್ಲೇ ಪ್ರಾಣಬಿಟ್ಟ ಐವರು..

ಗಡಿ ವಿವಾದ ವಿಚಾರಣೆ ಹಿನ್ನೆಲೆ ಬೆಳಗಾವಿಯಲ್ಲಿ ಪೊಲೀಸ್ ಅಲರ್ಟ್

ಗಡಿ ವಿವಾದ ಅರ್ಜಿ ವಿಚಾರಣೆಗೆ ಮಹೂರ್ತ ಫಿಕ್ಸ್ ಆಗಿರುವ ಹಿನ್ನೆಲೆ ಬೆಳಗಾವಿ ನಗರ ಹಾಗೂ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ಅಲರ್ಟ್ ಘೋಷಿಸಿದೆ. ಮರಾಠಿ ಭಾಷಿಕರು ಹೆಚ್ಚಿರುವ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲು ನಿರ್ಧಾರ ಮಾಡಲಾಗಿದೆ.  ಗಡಿ ಭಾಗಗಳಲ್ಲಿಯೂ ಹೆಚ್ಚುವರಿ ಪೊಲೀಸರ ನಿಯೋಜನೆಗೆ ನಗರ ಹಾಗೂ ಜಿಲ್ಲಾ ಪೊಲೀಸ್ ಅಧಿಕಾರಿಗಳು ಮುಂದಾಗಿದ್ದಾರೆ. ಸುಪ್ರೀಂ ಕೋರ್ಟ್ ತೀರ್ಪಿನತ್ತ ಇದೀಗ ಕರ್ನಾಟಕ ಹಾಗೂ ಮಹಾರಾಷ್ಟ್ರ ಎರಡೂ ರಾಜ್ಯಗಳ ಚಿತ್ತ ನೆಟ್ಟಿದೆ.

ಇದನ್ನೂ ಓದಿ:ಕೋಚ್ ಗಂಭೀರ್ ವಿರುದ್ಧ ರೊಚ್ಚಿಗೆದ್ದ ಫ್ಯಾನ್ಸ್.. ಅದೆಷ್ಟು ಸರಣಿ ಸೋಲು ಸಹಿಸೋದು..!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ. 

Karnataka-Maharashtra border dispute
Advertisment