/newsfirstlive-kannada/media/media_files/2025/12/30/siddaramaiah-1-2025-12-30-07-22-28.jpg)
ಬೆಂಗಳೂರು: ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡ ಅರ್ಹರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲಾಗುವುದು. ಯಾರು ಅರ್ಹರು ಇದ್ದಾರೋ ಅವರಿಗೆ ವ್ಯವಸ್ಥೆ ಮಾಡಲಾಗುವುದು. 11.20 ಲಕ್ಷ ಮೌಲ್ಯದಲ್ಲಿ ಮನೆ ನಿರ್ಮಿಸಿಕೊಡಲು ಸೂಚಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕೋಗಿಲು ಬಡಾವಣೆಯಲ್ಲಿ ಅಕ್ರಮ ನಿವಾಸಿಗಳ ತೆರವು ವಿವಾಧ ಆಗುತ್ತಿದ್ದಂತೆಯೇ ನಿನ್ನೆ ಸಿಎಂ ಮಹತ್ವದ ಸಭೆ ನಡೆಸಿದರು. ಸಭೆ ಬಳಿಕ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು. ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ಕೋಗಿಲು ಬಡಾವಣೆಯಲ್ಲಿ ಡಿಸೆಂಬರ್ 20ರಂದು ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಶೆಡ್ ಗಳನ್ನು ನಿರ್ಮಾಣ ಮಾಡಿದ್ದ ಸುಮಾರು 167 ಶೆಡ್‌ಗಳನ್ನು ತೆರವುಗೊಳಿಸಲಾಗಿತ್ತು. ಅವರೆಲ್ಲರಿಗೂ ನೋಟಿಸ್ ನೀಡಿ, ಸರ್ಕಾರದ ಜಾಗವಾಗಿದ್ದು ತೆರವು ಮಾಡುವಂತೆ ಅವರ ಗಮನಕ್ಕೂ ತರಲಾಗಿತ್ತು, ಆದರೂ ಅವರು ಖಾಲಿ ಮಾಡಿರಲಿಲ್ಲ. ನಿನ್ನೆ ನಾನು ವಸತಿ ಸಚಿವರಾದ ಜಮೀರ್ ಅಹ್ಮದ್ ಖಾನ್ ಮತ್ತು ನನ್ನ ರಾಜಕೀಯ ಕಾರ್ಯದರ್ಶಿಯಾದ ನಸೀರ್ ಅಹ್ಮದ್ ಅವರನ್ನು ಸ್ಥಳಕ್ಕೆ ಕಳಿಸಿಕೊಟ್ಟಿದ್ದೆ. ಇಂದು ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಕೂಡ ಅಧಿಕಾರಿಗಳ ಜೊತೆ ಭೇಟಿ ನೀಡಿದ್ದಾರೆ ಎಂದರು.
ಇದನ್ನೂ ಓದಿ: ʼನೀನಾದೆ ನಾʼ ಖ್ಯಾತಿಯ ಕನ್ನಡದ ಸೀರಿಯಲ್ ನಟಿ ಹಠಾತ್ ನಿಧನ
/filters:format(webp)/newsfirstlive-kannada/media/media_files/2025/12/30/kogilu-layout-2-2025-12-30-07-26-12.jpg)
ಕಸ ವಿಲೇವಾರಿ ಮಾಡುವ ಉದ್ದೇಶಕ್ಕೆ 15 ಎಕರೆ ಜಮೀನನ್ನು ಜಿಲ್ಲಾಧಿಕಾರಿಗಳು ನಗರ ಪಾಲಿಕೆಗೆ ಹಸ್ತಾಂತರ ಮಾಡಿದ್ದರು. ಬಂಡೆ ಕ್ವಾರಿ ಕೂಡ ಅಲ್ಲಿದೆ. ಪಾಲಿಕೆಯವರು ಕಸ ಹಾಕುತ್ತಿದ್ದು, ಭೂಮಿ ಅವರ ಸ್ವಾಧೀನದಲ್ಲೇ ಇದೆ. ನಾವು ಸುಮಾರು 2020-21 ರಿಂದ ಈ ರೀತಿ ಅಕ್ರಮವಾಗಿ ಶೆಡ್ ಕಟ್ಟಿಕೊಂಡು ವಾಸ ಮಾಡುತ್ತಿದ್ದರು. ಹೀಗಾಗಿ ಅಲ್ಲಿನ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ ಕ್ರಮ ಜರುಗಿಸುವಂತೆ ಸೂಚಿಸಿದ್ದೇನೆ. ತಹಶಿಲ್ದಾರರಿಗೆ, ಶಿರಸ್ಥೆದಾರರಿಗೆ ಗೊತ್ತಿಲ್ಲದೆ ಹೀಗೆ ಒತ್ತುವರಿ ಆಗಲು ಸಾಧ್ಯವಿಲ್ಲ. ಇನ್ನುಮುಂದೆ ಇಂತಹ ಘಟನೆ ಮರುಕಳಿಬಾರದು ಎಂಬ ಕಾರಣಕ್ಕೆ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುತ್ತೇವೆ ಎಂಬ ಎಚ್ಚರಿಕೆ ನೀಡಿದರು.
ಇನ್ನುಮುಂದೆ ಯಾವುದೇ ಕಾರಣಕ್ಕೂ ಸರ್ಕಾರಿ ಜಮೀನಿನ ಅಕ್ರಮ ಒತ್ತುವರಿ ಆಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ. ಒಂದು ವೇಳೆ ಮನೆ ಕಟ್ಟಿದರೆ ಸಂಬಂಧಿಸಿದ ಅಧಿಕಾರಿಗಳನ್ನೇ ಜವಾಬ್ದಾರಿ ಮಾಡಲಾಗುತ್ತದೆ. ಅಕ್ರಮವಾಗಿ ಶೆಡ್‌ಗಳನ್ನು ಕಟ್ಟಿ ವಾಸವಿದ್ದವರಲ್ಲಿ ಮುಂದಿನ ಎರಡು ದಿನಗಳಲ್ಲಿ ಅರ್ಹರನ್ನು ಗುರುತಿಸಿ, ಪಟ್ಟಿ ನೀಡುವಂತೆ ಜಿಲ್ಲಾಧಿಕಾರಿ ಹಾಗೂ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಮಾನವೀಯತೆ ನೆಲೆಯಲ್ಲಿ ಅರ್ಹ ಸಂತ್ರಸ್ತರಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಡಬೇಕು ಎಂಬ ತೀರ್ಮಾನಕ್ಕೆ ಸರ್ಕಾರ ಬಂದಿದೆ ಎಂದು ಸ್ಪಷ್ಟಪಡಿಸಿದರು.
ಇದನ್ನೂ ಓದಿ: ʼಅಮ್ಮಾ ಕ್ಷಮಿಸಿ ಬಿಡು..ʼ ನಟಿ ನಂದಿನಿ ಕೇಸ್‌ಗೆ ಮಹತ್ವದ ಸುಳಿವು ಪತ್ತೆ
/filters:format(webp)/newsfirstlive-kannada/media/media_files/2025/12/30/kogilu-layout-1-2025-12-30-07-26-22.jpg)
ಈ ವಿಚಾರದ ಬಗ್ಗೆ ದೆಹಲಿಯಲ್ಲಿ ಕೆ.ಸಿ.ವೇಣುಗೋಪಾಲ್ ಅವರು ನನ್ನೊಂದಿಗೆ ಮತ್ತು ನಂತರ ಡಿ.ಕೆ.ಶಿವಕುಮಾರ್ ಅವರ ಜೊತೆ ಚರ್ಚೆ ಮಾಡಿದ್ದಾರೆ. ಅವರಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಡುವ ಭರವಸೆ ನೀಡಿದ್ದೇನೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಆಯುಕ್ತರು, ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗಳಿಗೆ ಊಟ, ವಸತಿ, ತಾತ್ಕಾಲಿಕ ಸೂರಿನ ವ್ಯವಸ್ಥೆ ಮಾಡುವಂತೆ ಹೇಳಿದ್ದೆ, ಅದರಂತೆ ಮೂರು ಕಡೆ ಈ ರೀತಿಯ ವ್ಯವಸ್ಥೆ ಮಾಡಿದ್ದರೂ ಅಲ್ಲಿನ ನಿವಾಸಿಗಳು ಹೋಗಿಲ್ಲ. ಡಿ.ಕೆ.ಶಿವಕುಮಾರ್, ವಸತಿ ಸಚಿವರಾದ ಜಮೀರ್ ಅಹ್ಮದ್, ಸ್ಥಳೀಯ ಶಾಸಕರಾದ ಕೃಷ್ಣ ಬೈರೇಗೌಡ ಅವರ ಜೊತೆ ಮಾತನಾಡಿ, ಪರ್ಯಾಯ ವ್ಯವಸ್ಥೆ ಮಾಡುವ ಸಂಬಂಧ ಚರ್ಚಿಸಿದ್ದೇನೆ. ಅಲ್ಲೇ ಸಮೀಪದ ಬೈಯ್ಯಪ್ಪನಹಳ್ಳಿಯ ಸರ್ವೇ ನಂ.23 ರಲ್ಲಿ ಸುಮಾರು 1087 ಮನೆಗಳಿವೆ, ಅಧಿಕಾರಿಗಳಿಂದ ಪಟ್ಟಿ ಬಂದ ನಂತರ ಅವರಿಗೆ ಬೈಯ್ಯಪ್ಪನಹಳ್ಳಿಯ ಬಹುಮಹಡಿ ಕಟ್ಟಡದಲ್ಲಿ ಮನೆಗಳ ಹಂಚಿಕೆ ಮಾಡುತ್ತೇವೆ ಎಂದರು. ಇದು ಕೋಗಿಲು ಇಂದ ಕೇವಲ 7 ಕಿ.ಮೀ ದೂರದಲ್ಲಿದೆ. ಒಂದು ಮನೆಗೆ ಸುಮಾರು ₹11.20 ಲಕ್ಷ ವೆಚ್ಚವಾಗಿದ್ದು, ಇವನ್ನು ಕೊಡುತ್ತೇವೆ. ಸಾಮಾನ್ಯವರ್ಗ, ಪರಿಶಿಷ್ಟ ಜಾತಿ ಮತ್ತು ವರ್ಗದವರಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಬ್ಸಿಡಿ ಲಭ್ಯವಿದೆ, ಜೊತೆಗೆ ಜಿಬಿಎ ಇಂದ ಪ್ರತಿ ಮನೆಗೆ 5 ಲಕ್ಷ ರೂಪಾಯಿ ನೀಡುವಂತೆ ಸೂಚಿಸಿದ್ದೇನೆ. ಜನರಲ್‌ಗೆ ಎಲ್ಲಾ ಸಬ್ಸಿಡಿ ಸೇರಿ 8 ಲಕ್ಷದ 70 ಸಾವಿರ ರೂಪಾಯಿ ಬರುತ್ತದೆ. ಎಸ್‌ಸಿಎಸ್‌ಟಿಗಳಾದರೆ 9.50 ಲಕ್ಷ ಬರುತ್ತದೆ. ಆಮೇಲೆ ಜನರಲ್‌ಗೆ 2.5 ಲಕ್ಷವನ್ನು ಸಾಲದ ರೂಪದಲ್ಲಿ ಕೊಡತಕ್ಕಂತದ್ದು. ಎಸ್‌ಸಿಎಸ್‌ಟಿಗೆ 1.70 ಲಕ್ಷ ಸಾಲ. ಅದನ್ನು ಜಮೀರ್ ಅಹ್ಮದ್ ಖಾನ್ ಅವರು ವೆರಿಫೇಷರಿಗೆ ಸಾಲ ಕೊಡಿಸ್ತೀನಿ ಅಂತ ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದರು.
ಇದನ್ನೂ ಓದಿ: ವೈಕುಂಠ ಏಕಾದಶಿ.. ಎಲ್ಲೆಲ್ಲೂ ಶ್ರೀನಿವಾಸನ ನಾಮಸ್ಮರಣೆ..!
/filters:format(webp)/newsfirstlive-kannada/media/media_files/2025/12/30/kogilu-layout-2025-12-30-07-26-34.jpg)
ಎರಡು ದಿನ ವೇರಿಫೈ ಮಾಡುತ್ತಾರೆ. ಜನವರಿ 1ರಂದು ಹೊಸ ವರ್ಷ ಪ್ರಾರಂಭದ ದಿನ ಇವರಿಗೆ ವಾಸಕ್ಕೆ ಮನೆಯನ್ನು ಒದಗಿಸಿಕೊಡುವ ಜವಾಬ್ದಾರಿಯನ್ನು ವಸತಿ ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರಿಗೆ ವಹಿಸಲಾಗಿದೆ. ಅಕ್ರಮವಾಗಿ ಮನೆ ಕಟ್ಟಿಕೊಂಡು ವಾಸ ಮಾಡುತ್ತಿದ್ದರೂ, ಮಾನವೀಯತೆ ದೃಷ್ಟಿಯಿಂದ ಅವರಿಗೆ ವಾಸಕ್ಕೆ ಪರ್ಯಾಯ ವ್ಯವಸ್ಥೆಯನ್ನು ಮಾಡುತ್ತಿದ್ದೇವೆ. 1 ಲಕ್ಷ ಮನೆಗಳನ್ನು ನಾವು ಕಟ್ಟಿಸಿರುವುದೇ ಬಡವರಿಗೆ ಸೂರು ಒದಗಿಸಿಕೊಡಲೆಂದು ಎಂದರು.
ಅಕ್ರಮವಾಗಿ ಮನೆ ಕಟ್ಟಿಕೊಂಡಿರುವವರಿಗೆ ಸರ್ಕಾರದಿಂದಲೇ ಮನೆ ಕಟ್ಟಿಸಿಕೊಡುವುದು ಇದೊಂದು ಪ್ರಕರಣಕ್ಕೆ ಮಾತ್ರ ಅನ್ವಯವಾಗುತ್ತದೆ. ಅಕ್ರಮವಾಗಿ ಶೆಡ್ ನಿರ್ಮಿಸಲು ಬಿಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ಇನ್ನು ಮುಂದೆ ಇಂತಹ ಅಕ್ರಮ ನಡೆದರೆ ಸಂಬಂಧಪಟ್ಟ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಮತ್ತೊಮ್ಮೆ ಎಚ್ಚರಿಕೆ ನೀಡಿದರು.
ಇದನ್ನೂ ಓದಿ: ಚಿಗಟೇರಿ ಗ್ರಾಮದಲ್ಲಿ ನಟಿ ನಂದಿನಿ ಅಂತ್ಯಕ್ರಿಯೆ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us