ಉಸಿರುಗಟ್ಟಿ ಟೆಕ್ಕಿ ದುರಂತ ಅಂತ್ಯ; ಅಯ್ಯೋ, ಬೆಂಗಳೂರಲ್ಲಿ ಏನಾಯ್ತು..?

ಬೆಂಗಳೂರಲ್ಲಿ 34 ವರ್ಷದ ಯುವತಿಯೊಬ್ಬಳು ದುರಂತ ಅಂತ್ಯ ಕಂಡಿದ್ದಾಳೆ. ಮನೆಗೆ ಬೆಂಕಿ ಆವರಿಸಿ ಹೊಗೆಯಿಂದ ಉಸಿರಾಡಲು ಸಾಧ್ಯವಾಗದೇ ಮೃತಪಟ್ಟಿದ್ದಾಳೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸ್ತಿದ್ದಾರೆ. ಘಟನೆಯ ಸಂಪೂರ್ಣ ವಿವರ ಈ ಸ್ಟೋರಿಯಲ್ಲಿದೆ.

author-image
Ganesh Kerekuli
software engineer Sharmila
Advertisment

ಬೆಂಗಳೂರು: ಉಸಿರುಗಟ್ಟಿ ಮಹಿಳಾ ಟೆಕ್ಕಿ ಜೀವ ಕಳೆದುಕೊಂಡಿರುವ ಘಟನೆ ರಾಮಮೂರ್ತಿ ನಗರ ಠಾಣಾ ವ್ಯಾಪ್ತಿಯ ಸುಬ್ರಮಣ್ಯ ಲೇಔಟ್​ನಲ್ಲಿ ನಡೆದಿದೆ. ಶರ್ಮಿಳಾ (34) ಮೃತ ದುರ್ದೈವಿ. 

ಶರ್ಮಿಳಾ ಯಾರು..?

ಮೃತ ಶರ್ಮಿಳಾ ಮೂಲತಃ ಮಂಗಳೂರಿನವರು. ಅಕ್ಸೆಂಚರ್​ ಕಂಪನಿಯಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದರು. ಶರ್ಮಿಳಾ ಬೆಂಗಳೂರಿನ ಸುಬ್ರಮಣ್ಯ ಲೇಔಟ್​ನಲ್ಲಿ ವಾಸವಿದ್ದರು. ಮಂಗಳೂರನಿಂದ ಒಂದು ವರ್ಷದ ಹಿಂದೆ ಬೆಂಗಳೂರಿಗೆ ಕೆಲಸಕ್ಕೆ ಬಂದಿದ್ದರು. ಕುಶಾಲಪ್ಪ ಅನ್ನೋರ ಮಗಳಾಗಿದ್ದಳು.

ಆಗಿದ್ದೇನು..? 

ಪೊಲೀಸ್ ಮೂಲಗಳ ಪ್ರಕಾರ, ಜನವರಿ 3 ರಂದು ದುರಂತ ನಡೆದಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಜನವರಿ 3 ರಂದು ರಾತ್ರಿ 10.30 ರ ಸುಮಾರಿಗೆ ಶರ್ಮಿಳಾ ವಾಸವಿದ್ದ ರೂಮಿ​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ನೋಡಿದ ಮನೆ ಮಾಲೀಕ ವಿಜಯೇಂದ್ರ ರಾಮಮೂರ್ತಿನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. 

ಇದನ್ನೂ ಓದಿ: RCBಗೆ ಮಂದಾನ ರಾಯಲ್​ ಎಂಟ್ರಿ.. ಬಾಂಗ್ಲಾದೇಶದಲ್ಲಿ IPL ಬ್ಯಾನ್..!

software engineer Sharmila

ಕೂಡಲೇ ಶರ್ಮಿಳಾ ಮನೆ ಬಳಿ ಬಂದಿದ್ದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಮನೆಯ ಡೋರ್ ಒಡೆದು ಒಳಗೆ ಹೋಗಿದ್ದಾರೆ. ಈ ವೇಳೆ ರೂಮ್ ಹಾಗೂ ಹಾಲ್​ನಲ್ಲಿ ಬೆಂಕಿ ಬಿದ್ದು ಹೊಗೆ ತುಂಬಿಕೊಂಡಿತ್ತು. ಮನೆಯಲ್ಲಿ ಕಾಣಿಸಿಕೊಂಡಿದ್ದ ಬೆಂಕಿಯನ್ನು ನಂದಿಸುವಲ್ಲಿ ರಕ್ಷಣಾ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.  ಮನೆ ಪರಿಶೀಲನೆ ವೇಳೆ ಶರ್ಮಿಳಾ ಪ್ರಜ್ಞೆ ತಪ್ಪಿ ಬಿದಿರೋದು ಕಂಡುಬಂದಿದೆ. ಕೂಡಲೇ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಪರೀಕ್ಷೆ ನಡೆಸಿದ್ದ ವೈದ್ಯರು ಮೃತ ಪಟ್ಟಿರುವುದಾಗಿ ದೃಢಪಡಿಸಿದ್ದಾರೆ. 

ಇದನ್ನೂ ಓದಿ: 

software engineer Sharmila (2)

ಅನುಮಾನ ಏನು..? 

ಬೆಂಕಿ ಬಿದ್ದ ಪರಿಣಾಮ ರೂಮ್​ನಿಂದ ಹೊರ ಬರಲಾಗದೇ ಟೆಕ್ಕಿ ಶರ್ಮಿಳಾ ಸಾವನ್ನಪ್ಪಿರೋ ಶಂಕೆ ಇದೆ. ಆದರೂ ಪೊಲೀಸರು ತಮ್ಮದೇ ಆಯಾಮದಲ್ಲಿ ತನಿಖೆಯನ್ನು ಮುಂದುವರಿಸಿದ್ದಾರೆ. ಪೊಲೀಸ್ ತನಿಖೆ ನಂತರ ಸತ್ಯಾಸತ್ಯತೆ ತಿಳಿದುಬರಲಿದೆ. ಯಾಕೆಂದರೆ ಮನೆಯೊಳಗೆ ಹೇಗೆ ಬಿದ್ದಿದ್ದೆ ಅನ್ನೋದ್ರ ಬಗ್ಗೆ ಮಾಹಿತಿ ಇಲ್ಲ. 

ಇದನ್ನೂ ಓದಿ: RCBಗೆ ಮಂದಾನ ರಾಯಲ್​ ಎಂಟ್ರಿ.. ಬಾಂಗ್ಲಾದೇಶದಲ್ಲಿ IPL ಬ್ಯಾನ್..!

software engineer Sharmila (1)

ತನಿಖೆ ಏನು..? 

ಮನೆಗೆ ಬೆಂಕಿ ಹೊತ್ತಿಕೊಳ್ಳಲು ಕಾರಣ ಏನು ಅನ್ನೋದ್ರ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಶಾರ್ಟ್ ಸರ್ಕ್ಯೂಟ್ ಅಥವಾ ಬೆಡ್ ಲ್ಯಾಂಪ್, ಮೇಣದ ಬತ್ತಿಯಿಂದ ಬೆಂಕಿ ಹೊತ್ತಿಕೊಳ್ತಾ ಅನ್ನೋದ್ರ ಬಗ್ಗೆ ತನಿಖೆ ನಡೆಸಬೇಕಿದೆ. ಮನೆಯ ರೂಮ್​ನಲ್ಲಿ ಬೆಡ್, ಕರ್ಟನ್ ಸೇರಿದಂತೆ ಎಲ್ಲಾ ವಸ್ತುಗಳು ಸುಟ್ಟು ಹೋಗಿವೆ. ಘಟನಾ ಸ್ಥಳಕ್ಕೆ FSL ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಯಾವುದರಿಂದ ಬೆಂಕಿ ತಗುಲಿದೆ ಎಂದು ತಿಳಿಯಲು ಸೋಂಕೋ ತಂಡದ ವರದಿಗೆ ಕಾಯ್ತಿದ್ದಾರೆ. ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಅಡಿ ಪ್ರಕರಣ ದಾಖಲಾಗಿದೆ. 

ಇದನ್ನೂ ಓದಿ: ಬಯಲು ಸೀಮೆ ಜಿಲ್ಲೆ ರೈತರಿಗೆ ಗುಡ್ ನ್ಯೂಸ್‌ : ಮುಂದಿನ ತಿಂಗಳು ಕೆರೆಗಳಿಗೆ ಹರಿಯಲಿದೆ ಭದ್ರಾ ಮೇಲ್ದಂಡೆ ಯೋಜನೆಯ ನೀರು

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Bengaluru News Bengaluru case Software engineer Sharmila
Advertisment