ಜೈಲು ವಾಸಕ್ಕೆ ಸೊರಗಿ ಹೋದ ದರ್ಶನ್.. ಹುಟ್ಟು ಹಬ್ಬದ ದಿನ ಕೋರ್ಟ್​​ಗೆ ವಿಶೇಷ ಮನವಿ..!

ರೇಣುಕಾಸ್ವಾಮಿ ಪ್ರಕರಣದ 2ನೇ ಆರೋಪಿ (A2) ನಟ ದರ್ಶನ್ ತೂಗುದೀಪ್ ಜೈಲು ಪಾಲಾಗಿದ್ದು, ಅಲ್ಲಿಂದ ಹೊರ ಬರಲು ಪರದಾಡುತ್ತಿದ್ದಾರೆ. ಇದೀಗ ತಮ್ಮ ಹುಟ್ಟುಹಬ್ಬದ ದಿನದಂದೇ ದರ್ಶನ್ ಪರ ವಕೀಲರು ಕೋರ್ಟ್‌ಗೆ ಮಹತ್ವದ ಅರ್ಜಿ ಸಲ್ಲಿಸಿದ್ದು, ಪ್ರಕರಣದ ವಿಚಾರಣೆಯನ್ನು ತ್ವರಿತಗೊಳಿಸುವಂತೆ ಮನವಿ ಮಾಡಿದ್ದಾರೆ.

author-image
Ganesh Kerekuli
Darshan
Advertisment

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣದ 2ನೇ ಆರೋಪಿ (A2) ನಟ ದರ್ಶನ್ ತೂಗುದೀಪ್ ಜೈಲು ಪಾಲಾಗಿದ್ದು, ಅಲ್ಲಿಂದ ಹೊರ ಬರಲು ಪರದಾಡುತ್ತಿದ್ದಾರೆ. ಇದೀಗ ತಮ್ಮ ಹುಟ್ಟುಹಬ್ಬದ ದಿನದಂದೇ ದರ್ಶನ್ ಪರ ವಕೀಲರು ಕೋರ್ಟ್‌ಗೆ ಮಹತ್ವದ ಅರ್ಜಿ ಸಲ್ಲಿಸಿದ್ದು, ಪ್ರಕರಣದ ವಿಚಾರಣೆಯನ್ನು ತ್ವರಿತಗೊಳಿಸುವಂತೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಪಿ.ರಾಮಯ್ಯ ಪತ್ರಕರ್ತರಾಗಿ, ರಾಜಕಾರಣಿಯಾಗಿ ಸಾರ್ವಜನಿಕ ಬದುಕಿನ ಮೌಲ್ಯಗಳ ಪ್ರತಿರೂಪವಾಗಿದ್ದರು -ಕೆ.ವಿ.ಪ್ರಭಾಕರ್

‘ಡೇ ಟು ಡೇ’ ವಿಚಾರಣೆಗೆ ಪಟ್ಟು

ಪ್ರಕರಣದ ವಿಚಾರಣೆ ನಡೆಯುತ್ತಿರುವ 57ನೇ ಸೆಷನ್ಸ್ ಕೋರ್ಟ್‌ಗೆ ದರ್ಶನ್ ಪರ ವಕೀಲರು ಸಿಆರ್‌ಪಿಸಿ (CrPC) ಸೆಕ್ಷನ್ 309ರ ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಟ್ರಯಲ್ (ವಿಚಾರಣೆ) ಪ್ರಕ್ರಿಯೆಯನ್ನು ವಿಳಂಬ ಮಾಡದೆ, ‘ಡೇ ಟು ಡೇ’ (Day-to-day Basis) ಅಂದರೆ ಪ್ರತಿದಿನವೂ ವಿಚಾರಣೆ ನಡೆಸುವಂತೆ ಮನವಿ ಮಾಡಲಾಗಿದೆ.

ಜೈಲು ಸೇರಿ 6 ತಿಂಗಳು - ಜಾಮೀನಿನ ಲೆಕ್ಕಾಚಾರ

2025ರ ಆಗಸ್ಟ್ 14 ರಂದು ಜಾಮೀನು ರದ್ದುಗೊಂಡ ಬಳಿಕ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಪ್ರಮುಖ ಏಳು ಆರೋಪಿಗಳು ಜೈಲು ಸೇರಿದ್ದರು. ಇದೀಗ ದರ್ಶನ್ ಜೈಲು ಸೇರಿ ಭರ್ತಿ ಆರು ತಿಂಗಳು ಕಳೆದಿದೆ. ಈ ಹಿನ್ನೆಲೆಯಲ್ಲಿ ದರ್ಶನ್ ಮತ್ತು ಅವರ ಕಾನೂನು ತಂಡ ಹೊಸ ತಂತ್ರ ರೂಪಿಸಿದೆ.

ಇದನ್ನೂ ಓದಿ:ಧೋನಿಯನ್ನ ನಾಯಕತ್ವದಿಂದ ಇಳಿಸಲು ಡ್ರಾಮಾ? ಮಾಹಿ ಮಾತು ಕೇಳಿ ಸೆಲೆಕ್ಟರ್ಸ್ ಶಾಕ್ ಆಗಿದ್ದೇಗೆ?

Darshan and Pavitra Gowda (1)

ಪ್ರಕರಣದ ವಿಚಾರಣೆ ತ್ವರಿತಗತಿಯಲ್ಲಿ ನಡೆದು, ಪ್ರಮುಖ ಸಾಕ್ಷಿಗಳ ವಿಚಾರಣೆ ಮುಗಿದರೆ ಮತ್ತೆ ಜಾಮೀನಿಗೆ ಅರ್ಜಿ ಸಲ್ಲಿಸಲು ದಾರಿ ಸುಗಮವಾಗುತ್ತದೆ ಎಂಬುದು ದರ್ಶನ್ ಲೆಕ್ಕಾಚಾರ. ಹೀಗಾಗಿಯೇ ವಿಚಾರಣೆಯನ್ನು ಪ್ರತಿದಿನ ನಡೆಸುವಂತೆ ಕೋರ್ಟ್ ಮೊರೆ ಹೋಗಿದ್ದಾರೆ.

ಪ್ರಾಸಿಕ್ಯೂಷನ್ ಆಕ್ಷೇಪಣೆ?

ಸೋಮವಾರ ದರ್ಶನ್ ಹುಟ್ಟುಹಬ್ಬದಂದೇ ಈ ಅರ್ಜಿ ಸಲ್ಲಿಕೆಯಾಗಿದ್ದು, ಇದಕ್ಕೆ ಪ್ರಬಲ ಆಕ್ಷೇಪಣೆ ಸಲ್ಲಿಸಲು ಪ್ರಾಸಿಕ್ಯೂಷನ್ (ಪೊಲೀಸ್ ಪರ ವಕೀಲರು) ಸಿದ್ಧತೆ ನಡೆಸಿದೆ ಎಂದು ತಿಳಿದುಬಂದಿದೆ. ಈಗಾಗಲೇ ಕೋರ್ಟ್‌ನಲ್ಲಿ ಟ್ರಯಲ್ ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ಈ ಅರ್ಜಿ ವಿಚಾರಣೆ ನಿರ್ಣಾಯಕವಾಗಲಿದೆ. ಒಟ್ಟಿನಲ್ಲಿ, ಜೈಲಿನಲ್ಲಿ ಆರು ತಿಂಗಳು ಕಳೆದ ನಂತರ ನಟ ದರ್ಶನ್ ಬಿಡುಗಡೆಗಾಗಿ ಕಾನೂನು ಹೋರಾಟದ ವೇಗ ಹೆಚ್ಚಿಸಿದ್ದಾರೆ.

ಇದನ್ನೂ ಓದಿ: ಧರ್ಮ ಸಂಕಟದಲ್ಲಿ ತಿಲಕ್.. ಪವಿತ್ರ ಪ್ರೀತಿಯ ವಿಷಯ ದೇವ್​ಗೆ ಗೊತ್ತಾದ್ರೆ ಏನು ಕತೆ..?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Actor Darshan Pavitra Gowda Renukaswamy case
Advertisment