/newsfirstlive-kannada/media/media_files/2025/11/17/cm-siddaramaiah-meets-kharge-2025-11-17-19-40-37.jpg)
ಹೈಕಮ್ಯಾಂಡ್ ತೀರ್ಮಾನಕ್ಕೆ ಬದ್ದ ಎಂದ ಸಿಎಂ
ನಾನು ಹೈಕಮಾಂಡ್ ಹೇಳಿದಂತೆ ಕೇಳುತ್ತೇನೆ. ಹೈಕಮಾಂಡ್ ಏನು ಹೇಳುತ್ತೋ ಅದರಂತೆ ನಡೆದುಕೊಳ್ತೇನೆ ಎಂದು ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ಸಿಎಂ ಸಿದ್ದರಾಮಯ್ಯ ತಮ್ಮ ಆಪ್ತರ ಜೊತೆ ಸಭೆ ನಡೆಸಿ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಈ ಚರ್ಚೆಯ ಬಳಿಕ ನಾನು ಕಾಂಗ್ರೆಸ್ ಹೈಕಮ್ಯಾಂಡ್ ಹೇಳಿದಂತೆ ಕೇಳುತ್ತೇನೆ ಎಂದಿದ್ದಾರೆ.
ಸಿಎಂ ಆಪ್ತರಿಂದ ದೆಹಲಿ ದಂಡಯಾತ್ರೆ
ಇನ್ನೂ ಸಿದ್ದರಾಮಯ್ಯ ಪರ ಹೈಕಮಾಂಡ್ ಮುಂದೆ ಪೆರೇಡ್ ಗೆ ಬೆಂಬಲಿಗರು ಪ್ಲಾನ್ ಮಾಡಿದ್ದಾರೆ. ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯನವರನ್ನೇ ಮುಂದುವರೆಸಲು ಹೈಕಮ್ಯಾಂಡ್ ಮೇಲೆ ಒತ್ತಡ ಹೇರಲು ನಿರ್ಧರಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು ಮಲ್ಲಿಕಾರ್ಜುನ ಖರ್ಗೆ ಅವರು ಸಿಎಂ, ಡಿಸಿಎಂ ಇಬ್ಬರನ್ನೂ ದೆಹಲಿಗೆ ಕರೆಸಿಕೊಂಡು ಮಾತನಾಡಿ ಸೆಟಲ್ ಮಾಡುತ್ತೇವೆ ಎಂದಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರ ಈ ಹೇಳಿಕೆಯ ಬಳಿಕ ಸಿಎಂ ಬೆಂಬಲಿಗ ಶಾಸಕರು, ಸಚಿವರು ಹೈಕಮ್ಯಾಂಡ್ ನಾಯಕರಾದ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಲು ನಿರ್ಧರಿಸಿದ್ದಾರೆ.
ಸಿದ್ದರಾಮಯ್ಯ ಅವರು ಸಿಎಂ ಗಾದಿ ಬಿಡದಂತೆ ಅಹಿಂದ ಸಚಿವರು ಪಟ್ಟು ಹಿಡಿದಿದ್ದಾರೆ. ಸಿಎಂ ಸಿದ್ದರಾಮಯ್ಯಗೆ ಅಹಿಂದ ಸಚಿವರು ಒತ್ತಡ ಹಾಕುತ್ತಿದ್ದಾರೆ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಗಾದಿ ಬಿಟ್ಟುಕೊಡಬೇಡಿ ಎಂದು ಸಿಎಂಗೆ ಸಚಿವರು ಹೇಳಿದ್ದಾರೆ. ನಾವೆಲ್ಲರೂ ನಿಮ್ಮ ಜೊತೆ ಇದ್ದೇವೆ . ಯಾವುದೇ ಕಾರಣಕ್ಕೂ ಸ್ಥಾನ ಬಿಡಬೇಡಿ ಎಂದು ಸಚಿವರುಗಳು ಸಿಎಂ ಮೇಲೆ ಒತ್ತಡ ಹಾಕಿದ್ದಾರೆ. ಡಿಸಿಎಂ ಡಿ.ಕೆ ಶಿವಕುಮಾರ್ ತಂತ್ರಕ್ಕೆ ಸಿಎಂ ಸಿದ್ದರಾಮಯ್ಯ ಬಣದಿಂದ ಪ್ರತಿತಂತ್ರ ಹೂಡಲಾಗುತ್ತಿದೆ.
/filters:format(webp)/newsfirstlive-kannada/media/media_files/2025/10/02/cm-and-dcm-watching-empty-chair-2025-10-02-13-14-49.jpg)
ಡಿಕೆಶಿಗೆ ಕೌಂಟರ್ ಕೊಡಲು ಸಿಎಂ ಬಳಗ ಪ್ಲಾನ್ ಮಾಡಿದೆ. ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ಸಿಎಂ, ಡಿಸಿಎಂ ದೆಹಲಿಗೆ ತೆರಳುವರು. ಇದೇ ವಾರದಲ್ಲಿ ಸಿಎಂ, ಡಿಸಿಎಂ ಇಬ್ಬರು ದೆಹಲಿಗೆ ತೆರಳುವರು.
ಹೈಕಮಾಂಡ್‌ನ ತೀರ್ಮಾನ ಮತ್ತು ಸೂತ್ರಕ್ಕೆ ಒಪ್ಪಬೇಕಾದ ಅನಿವಾರ್ಯತೆಯಲ್ಲಿ ಸಿಎಂ ಸಿದ್ದರಾಮಯ್ಯ ಇದ್ದಾರೆ. ಹಾಗಾಗಿ ಹೈಕಮಾಂಡ್ ಭೇಟಿಗೂ ಮೊದಲೇ ತಂತ್ರಗಾರಿಕೆ ರೂಪಿಸುವುದರಲ್ಲಿ ಸಿಎಂ ಆಪ್ತ ಬಳಗ ಬ್ಯುಸಿಯಾಗಿದೆ. ಕಾಂಗ್ರೆಸ್ ಹೈಕಮ್ಯಾಂಡ್ ಮೇಲೆ ಒತ್ತಡ ಹಾಕಿ ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಲ್ಲಿ ಮುಂದುವರಿಸುವಂತೆ ಮಾಡಲು ಅಹಿಂದ ಸಚಿವರು ಮುಂದಾಗಿದ್ದಾರೆ. ಸಿಎಂ ಮುಂದುವರೆಸುವಂತೆ ಅಹಿಂದ ಸಚಿವರು ಒಮ್ಮತದ ತೀರ್ಮಾನ ಕೈಗೊಂಡಿದ್ದಾರೆ. ಇನ್ನೂ ಅಹಿಂದ ಸಚಿವರ ಜೊತೆಗಿನ ಸಭೆಯ ಬಳಿಕ ಸಿದ್ದರಾಮಯ್ಯ ಕೂಡ ಕಾಂಗ್ರೆಸ್ ಹೈಕಮ್ಯಾಂಡ್ ತೀರ್ಮಾನಕ್ಕೆ ಬದ್ದ ಎಂದಿದ್ದಾರೆ. ಹಾಗಾದರೇ, ಕಾಂಗ್ರೆಸ್ ಹೈಕಮ್ಯಾಂಡ್ ತೀರ್ಮಾನ ಏನು ಎಂಬುದೇ ಈಗ ಮಿಲಿಯನ್ ಡಾಲರ್ ಪ್ರಶ್ನೆಯಾಗಿದೆ.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us