/newsfirstlive-kannada/media/media_files/2025/12/02/kj-george-and-smart-meter-case-2025-12-02-17-51-51.jpg)
ಸಚಿವ ಕೆ.ಜೆ.ಜಾರ್ಜ್ ವಿರುದ್ಧದ ಸ್ಮಾರ್ಟ್ ಮೀಟರ್ ಕೇಸ್ ರದ್ದು-ಹೈಕೋರ್ಟ್
ಸ್ಮಾರ್ಟ್ ಮೀಟರ್ ಅಳವಡಿಕೆ ಟೆಂಡರ್ ಪ್ರಕರಣದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಬಿಜೆಪಿ ನಾಯಕರು ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇಂಧನ ಸಚಿವ ಕೆ.ಜೆ.ಜಾರ್ಜ್ ಹಾಗೂ ಅಧಿಕಾರಿಗಳ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಈ ದೂರಿನ ಆಧಾರದ ಮೇಲೆ ಸ್ಮಾರ್ಟ್ ಮೀಟರ್ ಅಳವಡಿಕೆಯಲ್ಲಿ ಭ್ರಷ್ಟಾಚಾರ ನಡೆದಿದೆಯೇ ಇಲ್ಲವೇ ಎಂಬ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ , ಲೋಕಾಯುಕ್ತ ಪೊಲೀಸರಿಗೆ ಆದೇಶ ನೀಡಿತ್ತು.
ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ ಈ ಆದೇಶ ಪ್ರಶ್ನಿಸಿ ಇಂಧನ ಸಚಿವ ಕೆ.ಜೆ.ಜಾರ್ಜ್ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ತಮ್ಮ ಹಾಗೂ ಇಂಧನ ಇಲಾಖೆಯ ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಖಾಸಗಿ ದೂರು ರದ್ದುಪಡಿಸಬೇಕೆಂದು ಹೈಕೋರ್ಟ್ ಗೆ ಸಲ್ಲಿಸಿದ್ದ ಮೇಲ್ಮನವಿಯಲ್ಲಿ ಕೋರಿದ್ದರು.
ಇಂಧನ ಸಚಿವ ಕೆ.ಜೆ.ಜಾರ್ಜ್ ಸಲ್ಲಿಸಿದ್ದ ಅರ್ಜಿಯನ್ನು ಜಸ್ಟೀಸ್ ಎಂ.ಐ.ಅರುಣ್ ಅವರ ಪೀಠ ವಿಚಾರಣೆ ನಡೆಸಿ ಇಂದು ಆದೇಶ ಪ್ರಕಟಿಸಿದೆ. ಸ್ಮಾರ್ಟ್ ಮೀಟರ್ ಅಳವಡಿಕೆಯ ಟೆಂಡರ್ ನಲ್ಲಿ ಆಕ್ರಮ ನಡೆದಿರುವುದಕ್ಕೆ ಯಾವುದೇ ಸಾಕ್ಷ್ಯ ಇಲ್ಲ ಎಂದು ಹೈಕೋರ್ಟ್ ಆದೇಶ ನೀಡಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಬಿಜೆಪಿ ನಾಯಕರಾದ ಶಾಸಕ ಡಾ.ಸಿ.ಎನ್. ಅಶ್ವಥ್ ನಾರಾಯಣ್ ಹಾಗೂ ಇತರರು ಸಲ್ಲಿಸಿದ್ದ ದೂರು ಅನ್ನು ಹೈಕೋರ್ಟ್ ರದ್ದುಪಡಿಸಿ ಆದೇಶ ನೀಡಿದೆ.
ಇದರಿಂದಾಗಿ ಇಂಧನ ಸಚಿವ ಕೆ.ಜೆ.ಜಾರ್ಜ್ ವಿರುದ್ಧ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಖಾಸಗಿ ದೂರು ಸಲ್ಲಿಸಿದ್ದ ಬಿಜೆಪಿ ನಾಯಕರಿಗೆ ಹಿನ್ನಡೆಯಾಗಿದೆ.
/filters:format(webp)/newsfirstlive-kannada/media/media_files/2025/08/06/minister-kj-george-2025-08-06-14-42-49.jpg)
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us