/newsfirstlive-kannada/media/post_attachments/wp-content/uploads/2025/07/BNG-BYRATHI.jpg)
ಶಾಸಕ ಭೈರತಿ ಬಸವರಾಜು ಮತ್ತು ಕೊಲೆಯಾದ ಬಿಕ್ಲು ಶಿವ
ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಕೆ.ಆರ್.ಪುರ ಕ್ಷೇತ್ರದ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬಂಧನದ ಭೀತಿ ಎದುರಾಗಿದೆ. ನಿರೀಕ್ಷಣಾ ಜಾಮೀನು ಕೋರಿ ಶಾಸಕ ಭೈರತಿ ಬಸವರಾಜು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದರೇ, ಹೈಕೋರ್ಟ್‌ನ ಜಸ್ಟೀಸ್ ಸುನೀಲ್ ಯಾದವ್ ಅವರ ಪೀಠವು ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿದೆ. ಆದರೇ, ಈ ಕೊಲೆ ಕೇಸ್ ನಲ್ಲಿ ಕೋಕಾ ಕಾಯ್ದೆ ಅನ್ವಯವಾಗುವುದಿಲ್ಲವೆಂದು ಆದೇಶ ನೀಡಿದೆ. ವಿಚಾರಣಾ ನ್ಯಾಯಾಲಯದಲ್ಲೇ ಸೂಕ್ತ ಅರ್ಜಿ ಸಲ್ಲಿಸಲು ಭೈರತಿ ಬಸವರಾಜ್ ಗೆ ಹೈಕೋರ್ಟ್ ಸೂಚನೆ ನೀಡಿದೆ. ಆದರೇ, ಅಲ್ಲಿಯವರೆಗೂ ಭೈರತಿ ಬಸವರಾಜುಗೆ ಬಂಧನದಿಂದ ರಕ್ಷಣೆ ನೀಡಲು ನಿರಾಕರಿಸಿದೆ. ಹೈಕೋರ್ಟ್ ನ ಈ ಆದೇಶದಿಂದ ಭೈರತಿ ಬಸವರಾಜುಗೆ ಬಂಧನದ ಭೀತಿ ಎದುರಾಗಿದೆ.
ಆದರೆ ಉಳಿದ ಆರೋಪಿಗಳಿಗೆ ಜಾಮೀನು ಸಿಗುವ ಸಾಧ್ಯತೆ ಇದೆ. ಕೋಕಾ ಕಾಯ್ದೆ ಅನ್ವಯಿಸಿರುವುದು ರದ್ದಾಗಿರುವ ಹಿನ್ನೆಲೆಯಲ್ಲಿ ಜೈಲಿನಲ್ಲಿರುವ ಆರೋಪಿಗಳಿಗೆ ಜಾಮೀನು ಸಿಗುವ ಸಾಧ್ಯತೆ ಕೂಡ ಇದೆ. ಇನ್ನೂ ಆರೋಪಪಟ್ಟಿ ದಾಖಲಾಗಿಲ್ಲದೇ ಇರುವುದರಿಂದ ಜಾಮೀನು ಸಿಗುವ ಸಾಧ್ಯತೆ ಇದೆ.
/filters:format(webp)/newsfirstlive-kannada/media/post_attachments/wp-content/uploads/2025/07/byrathi-basavaraj.jpg)
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us