/newsfirstlive-kannada/media/media_files/2025/12/24/bashettihalli-patana-panchayat-election-results-2025-12-24-18-16-39.jpg)
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತ್ ಚುನಾವಣೆ ಗೆದ್ದ ಬಿಜೆಪಿ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಗೆದ್ದು ಬಿಜೆಪಿ ಅಧಿಕಾರದ ಗದ್ದುಗೆ ಹಿಡಿದಿದೆ. ಪಟ್ಟಣ ಪಂಚಾಯತಿ ಆದ ನಂತರ ಇದೇ ಮೊದಲ ಬಾರಿಗೆ ನಡೆದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯ್ತಿ ಚುನಾವಣೆಯಲ್ಲಿ ಬಿಜೆಪಿ ಅಧಿಕಾರದ ಗದ್ದುಗೆ ಹಿಡಿದಿರುವುದು ವಿಶೇಷ. ಕಳೆದ ಭಾನುವಾರ ಮತದಾನ ನಡೆದಿತ್ತು. ಇಂದು ದೊಡ್ಡಬಳ್ಳಾಪುರದ ಕೊಂಗಾಡಿಯಪ್ಪ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆದಿದೆ. 19 ಸ್ಥಾನಗಳ ಪೈಕಿ ಬಿಜೆಪಿ 14 ಸ್ಥಾನಗಳಲ್ಲಿ ಜಯಗಳಿಸಿ ಪಟ್ಟಣ ಪಂಚಾಯಿತಿಯಲ್ಲಿ ಅಧಿಕಾರ ಗದ್ದುಗೆ ಹಿಡಿದಿದೆ. ಕಾಂಗ್ರೆಸ್ 3, ಜೆಡಿಎಸ್ 1, ಸ್ವತಂತ್ರ ಅಭ್ಯರ್ಥಿ 1 ವಾರ್ಡ್ ಗಳಲ್ಲಿ ಜಯ ಸಾಧಿಸಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಮುಖಭಂಗವಾಗಿದೆ. ಬಿಜೆಪಿ ತೆಕ್ಕೆಗೆ ಪಟ್ಟಣ ಪಂಚಾಯ್ತಿ ಬಂದ ಹಿನ್ನಲೆಯಲ್ಲಿ ಬಿಜೆಪಿ ಶಾಸಕ ಧೀರಜ್ ಮುನಿರಾಜು ಮತ ಎಣಿಕೆ ಸ್ಥಳಕ್ಕೆ ಆಗಮಿಸಿದ್ದರು. ಬಿಜೆಪಿ ಕಾರ್ಯಕರ್ತರು ಬೃಹತ್ ವಿಜಯೋತ್ಸವ ನಡೆಸಿದ್ದರು.
/filters:format(webp)/newsfirstlive-kannada/media/media_files/2025/12/24/bashettihalli-patana-panchayat-election-results-2-2025-12-24-18-18-57.jpg)
ದೊಡ್ಡಬಳ್ಳಾಪುರ ಪಟ್ಟಣಕ್ಕೆ ಹೊಂದಿಕೊಂಡಂತೆಯೇ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತ್ ಇದೆ. ಈ ಮೊದಲು ಬಾಶೆಟ್ಟಿಹಳ್ಳಿ ಗ್ರಾಮ ಪಂಚಾಯತ್ ಆಗಿತ್ತು. ಅದನ್ನು ಮೇಲ್ದರ್ಜೇಗೇರಿಸಿ ಪಟ್ಟಣ ಪಂಚಾಯತ್ ಆಗಿ ಮಾಡಲಾಗಿದೆ. ಬಾಶೆಟ್ಟಿಹಳ್ಳಿಯಲ್ಲಿ ಪಟ್ಟಣ ಪಂಚಾಯತ್ ಆಗಿ ಮೇಲ್ದರ್ಜೇಗೇರಿಸಿದ ಬಳಿಕ ವಾರ್ಡ್ ವಾರು ಚುನಾವಣೆ ನಡೆದಿರಲಿಲ್ಲ. ಇದೇ ಮೊದಲ ಭಾರಿಗೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತ್‌ಗೆ ಚುನಾವಣೆ ನಡೆದಿದೆ. ಬಾಶೆಟ್ಟಿಹಳ್ಳಿಯಲ್ಲಿ ಕೈಗಾರಿಕೆಗಳು ಹೆಚ್ಚಿನ ಸಂಖ್ಯೆಯಲ್ಲಿವೆ. ಬೆಂಗಳೂರಿನ ಯಲಹಂಕದಿಂದ 22 ಕಿ.ಮೀ. ದೂರದಲ್ಲಿದೆ. ಟೆಕ್ಸ್ ಟೈಲ್ಸ್ ಪಾರ್ಕ್ ನಲ್ಲಿ ಗಾರ್ಮೆಂಟ್ಸ್ ಗಳು ಹೆಚ್ಚಿನ ಸಂಖ್ಯೆಯಲ್ಲಿವೆ. ಬಾಶೆಟ್ಟಿಹಳ್ಳಿ ಸಮೀಪದಲ್ಲೇ ಸ್ಯಾಟಲೈಟ್ ಟೌನ್ ರಿಂಗ್ ರೋಡ್ ಹಾದು ಹೋಗಿದೆ. ಹತ್ತಿರದಲ್ಲೇ ಬೆಂಗಳೂರಿನ ಕೆಂಪೇಗೌಡ ಇಂಟರ್ ನ್ಯಾಷನಲ್ ಏರ್ ಪೋರ್ಟ್ ಇದೆ. ಸಮೀಪದಲ್ಲೇ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕಚೇರಿ ಇದೆ. ಅಂತಾರಾಷ್ಟ್ರೀಯ ಸ್ಕೂಲ್, ಖ್ಯಾತ ವಿಶ್ವವಿದ್ಯಾಲಯಗಳೂ ಹಾಗೂ ಐ.ಟಿ. ಹೂಡಿಕೆ ವಲಯ ಕೂಡ ಸಮೀಪದಲ್ಲೇ ಇದೆ.
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತ್‌ನ ನೂತನ ಆಡಳಿತ ಮಂಡಳಿ ಮೂಲಸೌಕರ್ಯ ಅಭಿವೃದ್ದಿಗೆ ಹೆಚ್ಚಿನ ಗಮನ ನೀಡಬೇಕು.
/filters:format(webp)/newsfirstlive-kannada/media/media_files/2025/12/24/bashettihalli-patana-panchayat-election-results-1-2025-12-24-18-17-35.jpg)
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us