/newsfirstlive-kannada/media/media_files/2026/01/19/dgp-ram-chandra-rao-and-cm-2026-01-19-18-13-14.jpg)
ತಪ್ಪು ಮಾಡಿದ್ದರೇ, ಶಿಸ್ತು ಕ್ರಮ ಜರುಗಿಸುತ್ತೇವೆ -ಸಿಎಂ
ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ವಿಡಿಯೋ ವೈರಲ್ ಆದ ಬಳಿಕ ರಜೆ ಮೇಲೆ ತೆರಳಲು ನಿರ್ಧರಿಸಿದ್ದಾರೆ. 10 ದಿನ ರಜೆ ಮೇಲೆ ತೆರಳಲು ಡಿಜಿಪಿ ರಾಮಚಂದ್ರರಾವ್ ನಿರ್ಧರಿಸಿದ್ದಾರೆ. 10 ದಿನಗಳ ಕಾಲ ಕಚೇರಿಗೆ ಗೈರಾಗುವ ಬಗ್ಗೆ ಕಚೇರಿ ಸಿಬ್ಬಂದಿಗೆ ಮಾಹಿತಿಯನ್ನು ನೀಡಿದ್ದಾರೆ. ಸದ್ಯ ಯಾರ ಕರೆಗಳನ್ನು ಕೂಡ ರಾಮಚಂದ್ರ ರಾವ್ ಸ್ವೀಕರಿಸುತ್ತಿಲ್ಲ.
ಈ ಹಿಂದೆ ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ ಬೆಳಕಿಗೆ ಬಂದ ಬಳಿಕ ರಾಮಚಂದ್ರರಾವ್ ಅವರನ್ನು ಸರ್ಕಾರವೇ ರಜೆ ಮೇಲೆ ಕಳಿಸಿತ್ತು. ಈಗ ಖುದ್ದು ರಾಮಚಂದ್ರರಾವ್ ಅವರೇ ರಜೆ ಮೇಲೆ ತೆರಳಲು ನಿರ್ಧರಿಸಿದ್ದಾರೆ. ಈಗ ರಾಜ್ಯ ಸರ್ಕಾರ ಯಾವ ಕ್ರಮ ಕೈಗೊಳ್ಳುತ್ತೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ಶಿಸ್ತು ಕ್ರಮ ಜರುಗಿಸುತ್ತೇವೆ ಎಂದ ಸಿಎಂ ಸಿದ್ದರಾಮಯ್ಯ
ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ಪ್ರಕರಣದ ಬಗ್ಗೆ ಬೆಳಗಾವಿಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ತಪ್ಪು ಮಾಡಿದ್ರೆ ಶಿಸ್ತಿನ ಕ್ರಮ ಜರುಗಿಸುತ್ತೇವೆ. ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಇನ್ನೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಜ್ವರದಿಂದ ಬಳಲುತ್ತಿದ್ದಾರೆ. ಹೀಗಾಗಿ ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದಿಂದ ಹೊರಗೆ ಬಂದಿಲ್ಲ. ಜೊತೆಗೆ ಡಿಜಿಪಿ ರಾಮಚಂದ್ರರಾವ್ ತಮ್ಮ ಮನೆಗೆ ಬಂದಾಗಲೂ ಅವರನ್ನು ಗೃಹ ಸಚಿವ ಡಾ.ಜಿ ಪರಮೇಶ್ವರ್ ಭೇಟಿಯಾಗಿಲ್ಲ.
ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣದ ಬಗ್ಗೆ ಬೆಳಗಾವಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರತಿಕ್ರಿಯಿಸಿದ್ದಾರೆ. ನಾನು ಬೆಳಿಗ್ಗೆ ಟಿವಿ ನೋಡಿಲ್ಲ, ಸಿಎಂ ಮನೆಗೆ ಹೋಗಿ ಬಂದಿರುವೆ. ಯಾರೇ ತಪ್ಪು ಮಾಡಿದ್ರೂ ಕಾನೂನು ರೀತಿ ಕ್ರಮ ಆಗಲಿ. ತಪ್ಪು ಮಾಡಿದ್ರೆ ಖಂಡಿತವಾಗಿ ಶಿಕ್ಷೆ ಕೊಡುತ್ತೇವೆ. ಮಹಿಳೆಯರು ಮೇಲೆ ದೌರ್ಜನ್ಯ ಎಸಗಿದ್ರೆ ಎಷ್ಟೇ ದೊಡ್ಡ ಅಧಿಕಾರಿ ಆದ್ರೂ ಕ್ರಮವಾಗುತ್ತೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಲಕ್ಷ್ಮಿ ಹೆಬ್ಬಾಳಕರ್ ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us