/newsfirstlive-kannada/media/post_attachments/wp-content/uploads/2025/04/Siddaramaiah-Cabinet-Meet.jpg)
ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಸಿಎಂ ಸಭೆ ಆರಂಭ
ಬೆಂಗಳೂರಿನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಸಿಎಂ ಸಿದ್ದರಾಮಯ್ಯ ಅವರ ಸಭೆ ಆರಂಭವಾಗಿದೆ. 38 ಕ್ಕೂ ಹೆಚ್ಚು ಸಕ್ಕರೆ ಕಾರ್ಖಾನೆಗಳ ಮಾಲೀಕರು ಮತ್ತು ಆಡಳಿತ ಮಂಡಳಿಯ ಪ್ರತಿನಿಧಿಗಳು ಸಭೆಯಲ್ಲಿ ಭಾಗಿಯಾಗಿದ್ದಾರೆ. ಕಬ್ಬುಗೆ ಪ್ರತಿ ಟನ್ ಗೆ 3,500 ರೂಪಾಯಿ ಬೆಲೆ ನೀಡಬೇಕೆಂದು ಆಗ್ರಹಿಸಿ ರೈತರು ಬೆಳಗಾವಿ, ಬಾಗಲಕೋಟೆ ಜಿಲ್ಲೆಯಲ್ಲಿ ತೀವ್ರ ಪ್ರತಿಭಟನೆ ನಡೆಸುತ್ತಿರುವ ಹಿನ್ನಲೆಯಲ್ಲಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಈ ಸಭೆ ನಡೆಸಲಾಗುತ್ತಿದೆ.
ಸಭೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿ, ಎಂ.ಬಿ.ಪಾಟೀಲ್, ಆರ್.ಬಿ.ತಿಮ್ಮಾಪೂರ, ಲಕ್ಷ್ಮಿ ಹೆಬ್ಬಾಳ್ಕರ್, ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ, ಮುರುಗೇಶ್ ನಿರಾಣಿ, ರಾಜು ಅಸಿಫ್ ಸೇಟ್ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ಪೈಕಿ ಹಲವರು ಸಕ್ಕರೆ ಕಾರ್ಖಾನೆಗಳ ಮಾಲೀಕರೂ ಕೂಡ ಆಗಿದ್ದಾರೆ. ಬಿಜೆಪಿಯ ಮಾಜಿ ಸಚಿವ ಮುರುಗೇಶ್ ನಿರಾಣಿ ಸಕ್ಕರೆ ಕಾರ್ಖಾನೆ ಮಾಲೀಕರೂ ಕೂಡ ಆಗಿದ್ದಾರೆ. ಅದೇ ರೀತಿ ಕಾಂಗ್ರೆಸ್ ಪಕ್ಷದ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಕೂಡ ಸಕ್ಕರೆ ಕಾರ್ಖಾನೆಯ ಮಾಲೀಕರಾಗಿದ್ದಾರೆ.
ಕಬ್ಬುಗೆ ಪ್ರತಿ ಟನ್ ಗೆ ಎಷ್ಟು ಬೆಲೆ ನೀಡಲು ಸಾಧ್ಯ ಎಂಬ ಬಗ್ಗೆ ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ನೇರವಾಗಿ ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸುತ್ತಿದ್ದಾರೆ.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us