/newsfirstlive-kannada/media/media_files/2025/12/15/new-bangalore-in-uttara-district-2025-12-15-19-00-41.jpg)
ಬೆಂಗಳೂರು ಗ್ರಾಮಾಂತರದ ಹೊಸಕೋಟೆ, ನೆಲಮಂಗಲ, ದೊಡ್ಡಬಳ್ಳಾಪುರ, ದೇವನಹಳ್ಳಿ, ರಾಮನಗರ, ಮಾಗಡಿ ತಾಲ್ಲೂಕಿನ ಬಿಡದಿ ಸೇರಿದಂತೆ ಹಲವು ಪ್ರದೇಶಗಳು ಹೊಸ ಬೆಂಗಳೂರು ಆಗಿ ರೂಪುಗೊಳ್ಳುತ್ತಾವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಿಸಿದ್ದಾರೆ. ಬೆಂಗಳೂರಿನ ಅಭಿವೃದ್ದಿಗೆ ಒತ್ತು ನೀಡಲಾಗುತ್ತಿದ್ದು, ಆಸ್ತಿ ಮೌಲ್ಯ ಹೆಚ್ಚಾಗಲಿದೆ. ದೂರದೃಷ್ಟಿಯಿಂದ ಬೆಂಗಳೂರು ಉತ್ತರ , ದಕ್ಷಿಣ ಜಿಲ್ಲೆಗಳಲ್ಲಿ ಹೊಸ ಬೆಂಗಳೂರು ನಿರ್ಮಾಣವಾಗಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರು ವೇಗವಾಗಿ ಬೆಳೆಯುತ್ತಿದೆ. ಬೆಂಗಳೂರು ಸುತ್ತಲಿನ ಪ್ರದೇಶಗಳನ್ನು ಬೆಂಗಳೂರಿಗೆ ಸೇರಿಸುವ ನಿಟ್ಟಿನಲ್ಲಿ ಯೋಜನೆ ಮಾಡಲಾಗುತ್ತಿದೆ. ಬೆಂಗಳೂರಿನಲ್ಲಿರುವ ನಿಮ್ಮ ಆಸ್ತಿ ಕಾಪಾಡಿಕೊಳ್ಳುವುದು ನಿಮ್ಮೆಲ್ಲರ ಕರ್ತವ್ಯ. ನಾನು ಬೆಂಗಳೂರಿಗೆ ಹೊಸ ರೂಪ ನೀಡುವ ಜೊತೆಗೆ ಆಸ್ತಿ ಮೌಲ್ಯಕ್ಕೆ ಗೌರವ ತರುವ ಕೆಲಸ ಮಾಡುತ್ತೇನೆ. ಬೆಂಗಳೂರು ಗ್ರಾಮಾಂತರಕ್ಕೆ ಸಚಿವ ಕೆ.ಎಚ್.ಮುನಿಯಪ್ಪ, ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ, ನೆಲಮಂಗಲದ ಶಾಸಕ ಶ್ರೀನಿವಾಸ್ ಬೇಡಿಕೆ ಇಟ್ಟಿದ್ದರಿಂದ ಬೆಂಗಳೂರು ಉತ್ತರ ಎಂಬ ಹೊಸ ಹೆಸರು ನೀಡಲಾಗಿದೆ. ದೂರದೃಷ್ಟಿಯಿಂದ ಬೆಂಗಳೂರು ಉತ್ತರ ಮತ್ತು ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಹೊಸ ಬೆಂಗಳೂರು ಕಟ್ಟಿ ವಿಶ್ವದ ಗಮನ ಸೆಳೆಯುವ ಕೆಲಸ ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ಎಲ್ಲರೂ ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಬೇಕು. ನಂದಗುಡಿ, ಸೋಲೂರು, ಬಿಡದಿ ರೈತರ ಜಮೀನಿಗೆ ಉತ್ತಮ ಬೆಲೆ ಸಿಗಲು ಅನುಕೂಲವಾಗುವಂಥ ಕೆಲಸ ಮಾಡಲಾಗುತ್ತೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us