ವಿಶ್ವ ಒಕ್ಕಲಿಗರ ಮಠದ ಚಂದ್ರಶೇಖರನಾಥ ಸ್ವಾಮೀಜಿ ಇನ್ನಿಲ್ಲ

author-image
Ganesh Kerekuli
chandrashekharanath swamiji
Advertisment

ಬೆಂಗಳೂರು: ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾಗಿದ್ದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ (Chandrashekaranatha Swamiji) ಅವರು ತಡರಾತ್ರಿ ಭೈರವೈಕ್ಯರಾಗಿದ್ದಾರೆ. 

ಕೆಂಗೇರಿಯಲ್ಲಿ ಶ್ರೀಮಠದ ಸ್ಥಾಪನೆ ಮಾಡಿ ಶಿಕ್ಷಣ ಕ್ಷೇತ್ರ, ಆಧ್ಯಾತ್ಮಿಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದ ಶ್ರೀಗಳು ತಡರಾತ್ರಿ 12:01 ಗಂಟೆ ಸುಮಾರಿಗೆ ವಿಧಿವಶರಾಗಿದ್ದಾರೆ. ಸ್ವಾಮೀಜಿಗಳ ಅಂತಿಮ ದರ್ಶನವನ್ನು ಇಂದು ಶ್ರೀಮಠದ ಆವರಣದಲ್ಲೇ ಏರ್ಪಡಿಸಲಾಗಿದೆ.

1974ರಲ್ಲಿ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ನೇತೃತ್ವದಲ್ಲಿ ವಿಶ್ವ ಒಕ್ಕಲಿಗ ಮಠ ಅಸ್ತಿತ್ವಕ್ಕೆ ಬಂತು. ಆಗಿನಿಂದಲೂ ಈ ಮಠಕ್ಕೆ ಚಂದ್ರಶೇಖರನಾಥ ಸ್ವಾಮೀಜಿಯೇ  ಪೀಠಾದಿಪತಿಯಾಗಿದ್ದರು. ಕಳೆದ ಒಂದು ತಿಂಗಳಿನಿಂದ ಸ್ವಾಮೀಜಿ ತೀವ್ರ ಅನಾರೋಗ್ಯದಲ್ಲಿದ್ದರು. 

ಮಧ್ಯಾಹ್ನ 3 ಗಂಟೆ ವೇಳೆಗೆ ಧಾರ್ಮಿಕ ಮುಖಂಡರು, ಪೀಠಾಧ್ಯಕ್ಷರ ನೇತೃತ್ವದಲ್ಲಿ ಭೈರವೈಕ್ಯರಾದ ಶ್ರೀಗಳ ಅಂತಿಮ ವಿಧಿ ವಿಧಾನಗಳು ನೆರವೇರಲಿವೆ. ಅಂತ್ಯ ಸಂಸ್ಕಾರದ ವಿಧಿ ವಿಧಾನಗಳನ್ನು ಉತ್ತರಾಧಿಕಾರಿ ಪೀಠಾಧ್ಯಕ್ಷರಾದ ಡಾ.ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ನೆರವೇರಿಸಲಿದ್ದಾರೆ. 

ಇದನ್ನೂ ಓದಿ:ಕೃಷ್ಣ ಜನ್ಮಾಷ್ಟಮಿ ದಿನದಂದು ಈ ಕೆಲಸ ಮಾಡಿದ್ರೆ ಉದ್ಯೋಗ, ವ್ಯವಹಾರದಲ್ಲಿ ಪ್ರಗತಿ ಕಾಣ್ತೀರಿ..!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Chandrashekaranatha Swamiji
Advertisment