/newsfirstlive-kannada/media/media_files/2026/03/04/tirupati-accident-2026-03-04-14-09-31.jpg)
ಚಿತ್ತೂರು/ಬೆಂಗಳೂರು: ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಲು ತೆರಳುತ್ತಿದ್ದ ಭಕ್ತರ ಕಾರೊಂದು ಭೀಕರ ಅಪಘಾತಕ್ಕೀಡಾಗಿ ಬೆಂಗಳೂರು ಮೂಲದ ಐವರು ಸ್ಥಳದಲ್ಲೇ ದುರ್ಮರಣ ಹೊಂದಿರುವ ದಾರುಣ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಪಲಮನೇರು ಬಳಿ ನಡೆದಿದೆ.
ಮೃತರೆಲ್ಲರೂ ಬೆಂಗಳೂರಿನ ರಾಜಾಜಿನಗರದ ನಿವಾಸಿಗಳು ಎಂದು ತಿಳಿದುಬಂದಿದೆ. ಮೃತರನ್ನು ಮೋಹನ್‌ದಾಸ್ (71), ನಾಗರಾಜ್ ರಾವ್, ಕುಸುಮ (61), ಹಾಗೂ ಜಯಂತಿ (59) ಸೇರಿದಂತೆ ಒಟ್ಟು ಐವರು ಎಂದು ಗುರುತಿಸಲಾಗಿದೆ.
ಅಪಘಾತ ಸಂಭವಿಸಿದ್ದು ಹೇಗೆ?
ರಾಜಾಜಿನಗರ ಮೂಲದ ಈ ಐವರು ಒಂದೇ ಕಾರಿನಲ್ಲಿ ತಿರುಪತಿ ದೇವಸ್ಥಾನಕ್ಕೆ (Tirupati Temple) ಹೊರಟಿದ್ದರು. ಚಿತ್ತೂರು ಜಿಲ್ಲೆ ವ್ಯಾಪ್ತಿಯ ಪಲಮನೇರು ಬಳಿಯ ಹೆದ್ದಾರಿಯಲ್ಲಿ ತೆರಳುತ್ತಿದ್ದಾಗ, ವೇಗವಾಗಿ ಚಲಿಸುತ್ತಿದ್ದ ಇವರ ಕಾರು ನಿಯಂತ್ರಣ ತಪ್ಪಿ ಮುಂದೆ ಹೋಗುತ್ತಿದ್ದ ಟ್ರಕ್‌ಗೆ (Truck) ಹಿಂದಿನಿಂದ ಭೀಕರವಾಗಿ ಡಿಕ್ಕಿ ಹೊಡೆದಿದೆ.
ಇದನ್ನೂ ಓದಿ: ಅಭಿಷೇಕ್ ಮತ್ತೆ ಠುಸ್ ಪಟಾಕಿ.. ಇಷ್ಟಕ್ಕೆಲ್ಲ ಕಾರಣ ಏನು?
ಡಿಕ್ಕಿಯ ರಭಸ ಎಷ್ಟಿತ್ತೆಂದರೆ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಕಾರಿನೊಳಗೆ ಸಿಲುಕಿಕೊಂಡಿದ್ದ ಐವರೂ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಅಪಘಾತದ ವಿಷಯ ತಿಳಿಯುತ್ತಿದ್ದಂತೆ ತಕ್ಷಣವೇ ಘಟನಾ ಸ್ಥಳಕ್ಕೆ ದೌಡಾಯಿಸಿದ ಸ್ಥಳೀಯ ಪೊಲೀಸರು, ನಜ್ಜುಗುಜ್ಜಾಗಿದ್ದ ಕಾರಿನಿಂದ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.
ದೇವಸ್ಥಾನಕ್ಕೆಂದು ಭಕ್ತಿಯಿಂದ ಮನೆಯಿಂದ ಸಂತೋಷವಾಗಿ ಹೊರಟಿದ್ದವರು ಮಾರ್ಗಮಧ್ಯೆಯೇ ವಿಧಿಯಾಟಕ್ಕೆ ಬಲಿಯಾಗಿರುವುದು ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟುವಂತೆ ಮಾಡಿದೆ. ಈ ಅಪಘಾತದ ಕುರಿತು ಪಲಮನೇರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ: ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುತ್ತಾ? ಹೊರ್ಮುಜ್ ಜಲಸಂಧಿ ಮುಚ್ಚಿದ್ದರಿಂದ ಭಾರತಕ್ಕೆ ಸಂಕಷ್ಟ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us