/newsfirstlive-kannada/media/media_files/2026/01/01/girl-committs-suicide-in-bangalore-2026-01-01-10-59-12.jpg)
ಆತ್ಮಹತ್ಯೆಗೆ ಶರಣಾದ ಲೇಖನಾ ಎಂಬ ಬಾಲಕಿ
ತಂದೆ ತಾಯಿಯ ಪ್ರೀತಿ ಸಿಗದೆ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. …ಲೇಖನಾ (17) ಆತ್ಮಹತ್ಯೆಗೆ ಶರಣಾದ ಬಾಲಕಿ. … ನಿನ್ನೆ ರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ…ಮಾಡಿಕೊಂಡಿದ್ದಾರೆ. ಮೃತದೇಹವನ್ನು ಕಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ರವಾನೆ…ಮಾಡಲಾಗಿದೆ. ಲೇಖನಾ 10 ನೇ ತರಗತಿ ಅನುತ್ತೀರ್ಣಳಾಗಿ ಮನೆಯಲ್ಲಿಯೇ ಇದ್ದಳು. ತಂದೆ - ತಾಯಿ ಕೌಟುಂಬಿಕ ಕಲಹದಿಂದ ದೂರವಾಗಿದ್ದರು. ತಂದೆ ಬೇರೆ ಕಡೆ ವಾಸವಿದ್ರೆ ಲೇಖನಾ ತಾಯಿ ಜೊತೆಗೆ ವಾಸವಿದ್ದಳು.
ನನಗೆ ತಂದೆ-ತಾಯಿ ಪ್ರೀತಿ ಸಿಗುತ್ತಿಲ್ಲ. ನಾನು ಒಂಟಿ ಎಂಬ ಭಾವನೆ ಕಾಡುತ್ತಿದೆ. ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟ್ ಬರೆದು ಲೇಖನಾ ಸೂಸೈಡ್ ಮಾಡಿಕೊಂಡಿದ್ದಾಳೆ. ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us