/newsfirstlive-kannada/media/media_files/2025/10/15/raghu-dixit-and-varijashree-venugopal-1-2025-10-15-10-30-32.jpg)
ಬೆಂಗಳೂರು ಜನರಿಗೆ ನಗರಾಭಿವೃದ್ಧಿ ಇಲಾಖೆ ದೀಪಾವಳಿಯ ಗಿಫ್ಟ್ ನೀಡಿದೆ. ನಗರದಲ್ಲಿನ ಬಡವರು ಮತ್ತು ಮಧ್ಯಮ ವರ್ಗದವರು ಅನಧಿಕೃತವಾಗಿ ನಿರ್ಮಿಸಿರುವ ಸಣ್ಣ ವಿಸ್ತೀರ್ಣದ ಮನೆಗಳಿಗೆ ಸ್ವಾಧೀನಾನುಭವ ಪ್ರಮಾಣಪತ್ರ (OC- occupancy certificate) ಪಡೆಯುವುದರಿಂದ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಹಿಂದೆ ಓಸಿ ಇಲ್ಲದ ಕಟ್ಟಡಗಳಿಗೆ ಜಲಮಂಡಳಿ, ಬೆಸ್ಕಾಂ ವಿದ್ಯುತ್ ಸಂಪರ್ಕ ನೀಡುತ್ತಿರಲಿಲ್ಲ. ಇದೀಗ 30x40 ನಿವೇಶನಗಳಿಗೆ ಓಸಿ ಅಗತ್ಯವಿಲ್ಲ. ಸಚಿವ ಸಂಪುಟ ಒಪ್ಪಿಗೆಯಂತೆ ಒಸಿಯಿಂದ ವಿನಾಯಿತಿ ನೀಡಿ ನಗರಾಭಿವೃದ್ಧಿ ಇಲಾಖೆ ಅಧಿಕೃತ ಅದೇಶ ಹೊರಡಿಸಿದೆ.
ಇದನ್ನೂ ಓದಿ:ಖ್ಯಾತ ಗಾಯಕಿ ಜೊತೆ ರಘು ದೀಕ್ಷಿತ್ ಮದುವೆ.. ಯಾವಾಗ?
/filters:format(webp)/newsfirstlive-kannada/media/media_files/2025/10/15/siddaramaiah-3-2025-10-15-10-37-51.jpg)
30X40 ಸೈಟ್​ನಲ್ಲಿ ನೆಲ +2 ಅಂತಸ್ತಿನ ಕಟ್ಟಡಗಳಿಗೆ, ವಸತಿ ಕಟ್ಟಡಗಳಿಗೆ ಓಸಿ ಪತ್ರ ಪಡೆಯುವುದರಿಂದ ವಿನಾಯಿತಿ ನೀಡಲಾಗಿದೆ. ಆ ಮೂಲಕ ಬೆಂಗಳೂರಿನ ಲಕ್ಷಾಂತರ ಜನರು ನಿಟ್ಟುಸಿರುಬಿಟ್ಟಿದ್ದಾರೆ. ಈ ಹೊಸ ಆದೇಶದಿಂದ ಬೆಂಗಳೂರಿನಲ್ಲಿ ನಿರ್ಮಾಣ ಆಗಿರುವ ಹಾಗೂ ನಿರ್ಮಾಣ ಹಂತದಲ್ಲಿರುವ ಲಕ್ಷಾಂತರ ಕಟ್ಟಡ ಮಾಲೀಕರಿಗೆ ಅನುಕೂಲವಾಗಲಿದೆ.
ಅಕ್ಟೋಬರ್ 9ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿತ್ತು. ಈ ನಿರ್ಧಾರದ ಅನ್ವಯ ಜಿಬಿಎ ವ್ಯಾಪ್ತಿಯ ಐದು ಪಾಲಿಕೆಗಳ 1200 ಚದರ ಅಡಿ ಜಾಗದಲ್ಲಿ ನಿರ್ಮಾಣಗೊಂಡಿರುವ ನೆಲ+2 ಅಂತಸ್ತು ಅಥವಾ ಸ್ಟಿಲ್ಟ್ +3 ಅಂತಸ್ತುಗಳವರೆಗಿನ ವಸತಿ ಕಟ್ಟಡಗಳಿಗೆ ಓಸಿ ಪಡೆಯೋದ್ರಿಂದ ವಿನಾಯಿತಿ ನೀಡಲಾಗಿದೆ.
ಸುಪ್ರೀಂಕೋರ್ಟ್ ಆದೇಶದ ಅನ್ವಯ ಎಸ್ಕಾಂಗಳು ವಿದ್ಯುತ್ ಸಂಪರ್ಕ ಪಡೆಯಲು ಓಸಿ ಕಡ್ಡಾಯ ಮಾಡಿದ್ದವು. ನಕ್ಷೆ ಮಂಜೂರಾತಿ ಇಲ್ಲದೇ ಓಸಿ ನೀಡಲು ಅವಕಾಶ ಇರಲಿಲ್ಲ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ 3.30 ಲಕ್ಷ ಕಟ್ಟಡಗಳು ನಿರ್ಮಾಣ ಪೂರ್ಣಗೊಂಡರೂ ಓಸಿ ಇಲ್ಲದೆ ವಿದ್ಯುತ್ ಸಂಪರ್ಕ ಪಡೆಯಲು ಸಾಧ್ಯವಾಗಿರಲಿಲ್ಲ.
ಇದನ್ನೂ ಓದಿ: ನಶೆಗಾಗಿ ಕೆಮ್ಮು ಸಿರಪ್ ಬಳಕೆ.. ದಾವಣಗೆರೆಯಲ್ಲಿ ಸಿಕ್ಕಿಬಿದ್ದ ಅತಿ ದೊಡ್ಡ ಜಾಲ..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us