ಕಿರುತೆರೆ ನಟ, ನಟಿಯರಿಗೆ ಸೈಟ್​​ ಕೊಡಿಸೋದಾಗಿ ವಂಚಿಸಿದ ಆರೋಪ ಕೇಳಿಬಂದಿದೆ. ಪ್ರಕರಣ ಸಂಬಂಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಬಿಲ್ಡರ್ ಸೇರಿದಂತೆ ಐವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅಸೋಸಿಯೇಷನ್ ಸದಸ್ಯೆ ಭಾವನ ಬೆಳಗೆರೆ ದೂರು ದಾಖಲಿಸಿದ್ದು, ಸುಮಾರು 139 ಜನರಿಗೆ ಸೈಟ್​​ ಕೊಡಿಸುವುದಾಗಿ 1.6 ಕೋಟಿ ರುಪಾಯಿಯಷ್ಟು ವಂಚಿಸಿದ್ದಾರೆ ಎನ್ನಲಾಗ್ತಿದೆ. ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಸದಸ್ಯೆ ಭಾವನ ಬೆಳಗೆರೆ ನೀಡಿದ ದೂರಿನ ಆಧಾರದ ಮೇಲೆ ಬಿಲ್ಡರ್ ಭಗೀರಥ, ಸಂಜೀವ್ ತಗಡೂರು, ಗುರುಪ್ರಸಾದ್, ರವೀಂದ್ರ ಮತ್ತು ಉಮಾಕಾಂತ್ ವಿರುದ್ಧ FIR ದಾಖಲಾಗಿದೆ. ಪ್ರಕರಣದ ಸಂಪೂರ್ಣ ವಿವರ ತಿಳಿದುಕೊಳ್ಳಲು ಮೇಲಿನ ಲಿಂಕ್ ಕ್ಲಿಕ್ ಮಾಡಿ..
ಇದನ್ನೂ ಓದಿ: KL ರಾಹುಲ್​​ಗೆ ಗಾಳ.. ನಾಯಕತ್ವ ಬದಲಾಯಿಸಲು ನಿರ್ಧರಿಸಿದ ಐದು IPL ಫ್ರಾಂಚೈಸಿಗಳು
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.30ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ