/newsfirstlive-kannada/media/media_files/2025/08/20/kar_rain_news-2025-08-20-07-30-16.jpg)
ಆರು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದ ಮಳೆ ಸುರಿಯಲಿದೆ. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದೆ. ಬಂಗಾಳ ಉಪಸಾಗರದ ಒರಿಸ್ಸಾ ಕರಾವಳಿಯಲ್ಲಿ ಚಂಡಮಾರುತ ಹಿನ್ನೆಲೆಯಲ್ಲಿ ಮಳೆಯ ಆರ್ಭಟ ಜೋರಾಗಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಇದನ್ನೂ ಓದಿ:ಗಂಡನಿಗೆ ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ, ಗಂಡನಿಂದ ಕಿರುಕುಳ, ಬೇಸತ್ತು ಬೆಂಗಳೂರಿನಲ್ಲಿ ಗೃಹಿಣಿ ಆತ್ಮಹತ್ಯೆ
ಉತ್ತರ ಭಾಗದ, ಬಂಗಾಳ ಉಪಸಾಗರದಲ್ಲಿ ಸೆಪ್ಟೆಂಬರ್ 2 ರಂದು ವಾಯುಭಾರ ಕುಸಿತ ಉಂಟಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಸೆಪ್ಟೆಂಬರ್ 6 ರವರೆಗೆ ವ್ಯಾಪಕ ಮಳೆ ಸಾಧ್ಯತೆ ಇದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ಇದೆ. ಇಂದಿನಿಂದ ಸೆಪ್ಟೆಂಬರ್ 6 ರವರೆಗೆ ಹಗುರದಿಂದ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ ಅಂತಾ ತಿಳಿಸಿದೆ.
ಇದನ್ನೂ ಓದಿ:ಸುದೀಪ್ ರಾಜಕೀಯಕ್ಕೆ.. ಕಿಚ್ಚ ಹೇಳಿದ್ದೇನು..?
ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಜಿಲ್ಲೆಗಳಿಗೆ ಸೆಪ್ಟೆಂಬರ್ 2 ರಂದು ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗುತ್ತಿದೆ. ಬೆಂಗಳೂರಿನಲ್ಲಿ ಕೆಲವು ಕಡೆ ಇಂದಿನಿಂದ ಸೆಪ್ಟೆಂಬರ್ 4 ರವರೆಗೆ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ