/newsfirstlive-kannada/media/post_attachments/wp-content/uploads/2025/05/RAIN-26.jpg)
ಬೆಂಗಳೂರು: ಸಿಲಿಕಾನ್​ ಸಿಟಿಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಗಣೇಶ ಹಬ್ಬದ ಖುಷಿಯಲ್ಲಿದ್ದ ಮಂದಿಗೆ ಮಳೆರಾಯ ಶಾಕ್​ ಕೊಟ್ಟಿದ್ದಾನೆ.
ಇದನ್ನೂ ಓದಿ: ನಾಡಿನೆಲ್ಲೆಡೆ ಗೌರಿ ಗಣೇಶ ಹಬ್ಬದ ಸಂಭ್ರಮ.. ವಿಘ್ನ ನಿವಾರಕನ ಪ್ರತಿಷ್ಠಾಪನೆ ಸಡಗರ ಜೋರು
/filters:format(webp)/newsfirstlive-kannada/media/media_files/2025/08/20/kar_rain_new-2025-08-20-07-30-28.jpg)
ಸಿಲಿಕಾನ್ ಸಿಟಿಯ ಹಲವೆಡೆ ಮಳೆ ಆರಂಭಗೊಂಡಿದೆ. ಲಾಲ್ ಬಾಗ್, ಶಾಂತಿ ನಗರ, ಕೆಆರ್​ ಮಾರ್ಕೆಟ್, ಟೌನ್​ ಹಾಲ್​, ಮೆಜೆಸ್ಟಿಕ್ ಸುತ್ತ ಮುತ್ತ ಧಾರಾಕಾರವಾಗಿ ಮಳೆಯಾಗುತ್ತಿದೆ. ಗಣೇಶನ ಹಬ್ಬಕ್ಕೆ ಖುಷಿಯಲ್ಲಿದ್ದ ಮಂದಿಗೆ ವರುಣ ಶಾಕ್​ ಕೊಟ್ಟಿದ್ದಾನೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಆಗಸ್ಟ್ 31ರವರೆಗೆ ಕರ್ನಾಟಕದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿತ್ತು. ಈಗಾಗಲೇ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿರುಸಿನ ಮಳೆಯಾಗುತ್ತಿದೆ. ಮತ್ತೊಂದು ಕಡೆ ಕಲ್ಯಾಣ ಕರ್ನಾಟಕ ಭಾಗದಲ್ಲೂ ಧಾರಾಕಾರ ಮಳೆಯಾಗುತ್ತಿದೆ. ಇನ್ನೂ, ಧಾರಾಕಾರ ಮಳೆಯು ಗಣೇಶ ಚತುರ್ಥಿಯ ಸಂಭ್ರಮಕ್ಕೆ ಅಡ್ಡಿಯಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us