/newsfirstlive-kannada/media/media_files/2026/01/03/rajivgandhi-housing-corporation-2026-01-03-13-38-41.jpg)
ಸಿಎಂ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ಬಜೆಟ್ ನಲ್ಲಿ ಸ್ವಂತ ಮನೆ ಹೊಂದುವ ಜನರ ಕನಸಿಗೆ ನೀರೆರೆದಿದ್ದಾರೆ. ವಿವಿಧ ವಸತಿ ಯೋಜನೆಯ ಫಲಾನುಭವಿಗಳಿಗೆ ನೀಡುತ್ತಿದ್ದ ಸಬ್ಸಿಡಿ ಮೊತ್ತವನ್ನು 1.20 ಲಕ್ಷ ರೂಪಾಯಿಯಿಂದ 2 ಲಕ್ಷ ರೂಪಾಯಿಗೆ ಏರಿಸಿದ್ದಾರೆ. ಎಸ್ಸಿ, ಎಸ್ಟಿ ಫಲಾನುಭವಿಗಳಿಗೆ 3 ಲಕ್ಷ ಸಬ್ಸಿಡಿ ನೀಡುವುದಾಗಿ ಘೋಷಿಸಿದ್ದಾರೆ.
ವಸತಿ ಇಲಾಖೆಯಲ್ಲಿ ಮಾಡಿದ ಘೋಷಣೆಗಳ ವಿವರ ಇಲ್ಲಿದೆ ಓದಿ.
ವಸತಿ ಇಲಾಖೆಯಲ್ಲಿ ಮಾಡಿದ ಘೋಷಣೆಗಳ ವಿವರ ಇಲ್ಲಿದೆ ಓದಿ.
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ವಿವಿಧ ವಸತಿ ಯೋಜನೆಗಳಡಿಯಲ್ಲಿ 7,328 ಕೋಟಿ ರೂ.ಗಳ ಮೊತ್ತದಲ್ಲಿ ಒಟ್ಟಾರೆ 4,19,454 ಮನೆಗಳ ನಿರ್ಮಾಣವನ್ನು ಪೂರ್ಣಗೊಳಿಸಿ ಫಲಾನುಭವಿಗಳಿಗೆ ಹಸ್ತಾಂತರಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ಮೂರು ಲಕ್ಷ ಮನೆಗಳನ್ನು ಪೂರ್ಣಗೊಳಿಸುವ ಗುರಿಯನ್ನು ಹೊಂದಲಾಗಿದೆ. ಹಿಂದಿನ ಸರ್ಕಾರವು ಅನುದಾನ ನೀಡದೇ ಮಂಜೂರಾತಿ ನೀಡಿರುವ 4.90 ಲಕ್ಷ ಮನೆಗಳನ್ನು ಪೂರ್ಣಗೊಳಿಸಲು ನಮ್ಮ ಸರ್ಕಾರದ ವತಿಯಿಂದ ಕ್ರಮ ಕೈಗೊಳ್ಳಲಾಗುತ್ತದೆ.
* ಸರ್ವರಿಗೂ ಸೂರು ಕಲ್ಪಿಸುವ ಉದ್ದೇಶದಿಂದ ರಾಜ್ಯದ ವಿವಿಧ ವಸತಿ ಯೋಜನೆಗಳಡಿ BLC ಆಧಾರಿತ ಒಂದು ಲಕ್ಷ ಮನೆಗಳ ಹೊಸ ಗುರಿಯನ್ನು ಮಂಜೂರು ಮಾಡಲಾಗುವುದು. ಸದರಿ ಗುರಿಯಡಿ ಆಯ್ಕೆಯಾಗುವ ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ನೀಡುವ ಸಹಾಯಧನವನ್ನು 1.20 ಲಕ್ಷ ರೂ. ಗಳಿಂದ 2 ಲಕ್ಷ ರೂ.ಗಳಿಗೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ 2 ಲಕ್ಷ ರೂ.ಗಳಿಂದ 3 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು.
* ರಾಜ್ಯ ವಸತಿ ಯೋಜನೆಗಳಡಿ ಅರ್ಹ ಫಲಾನುಭವಿಗಳನ್ನು Manual ಲಾಟರಿ ಪ್ರಕ್ರಿಯೆಯ ಮುಖಾಂತರ ಆಯ್ಕೆಗೊಳಿಸಲಾಗುತ್ತಿದ್ದು, ಇನ್ನು ಮುಂದೆ ಆನ್ ಲೈನ್ ಲಾಟರಿ ಮೂಲಕ ಗ್ರಾಮ ಸಭೆಗಳಲ್ಲಿ ಆಯ್ಕೆಗೊಳಿಸಲಾಗುವುದು.
* ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ (ಎ.ಹೆಚ್.ಪಿ) 1.29 ಲಕ್ಷ ಮನೆಗಳ ನಿರ್ಮಾಣ ಕಾರ್ಯವನ್ನು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯು ಅನುಷ್ಠಾನಗೊಳಿಸುತ್ತಿದೆ. ರಾಜ್ಯ ಸರ್ಕಾರದಿಂದ 1,136 ಕೋಟಿ ರೂ.ಗಳ ಅನುದಾನವನ್ನು ಹೆಚ್ಚುವರಿಯಾಗಿ ಫಲಾನುಭವಿಗಳ ವಂತಿಕೆಗೆ ಎದುರಾಗಿ ಒದಗಿಸಿ 2025-26ನೇ ಸಾಲಿಗೆ ಒಟ್ಟಾರೆ 79,134 ಮನೆಗಳನ್ನು ಲೋಕಾರ್ಪಣೆ ಮಾಡಲಾಗಿದೆ. ಇದರಿಂದ ಕೊಳಗೇರಿ ನಿವಾಸಿಗಳಿಗೆ ಶಾಶ್ವತ ಸೂರು ಕಲ್ಪಿಸಿದಂತಾಗಿದೆ.
* ʻಕೆ.ಹೆಚ್.ಬಿ ಸೂರ್ಯ ಕ್ರೀಡಾ ಗ್ರಾಮʼ ಎಂಬ ಹೆಸರಿನಲ್ಲಿ ಕರ್ನಾಟಕ ಗೃಹ ಮಂಡಳಿ ವತಿಯಿಂದ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕಿನಲ್ಲಿ 80,000 ಆಸನ ಸಾಮರ್ಥ್ಯವುಳ್ಳ ಕ್ರಿಕೆಟ್ ಕ್ರೀಡಾಂಗಣ ಹಾಗೂ ಅಂತಾರಾಷ್ಟ್ರೀಯ ಕ್ರೀಡಾಕೂಟಗಳನ್ನು ನಡೆಸಲು ಅನುಕೂಲವಾಗುವಂತೆ ಅಂತಾರಾಷ್ಟ್ರೀಯ ಕ್ರೀಡಾಂಗಣವನ್ನು ನಿರ್ಮಾಣ ಮಾಡಲಾಗುವುದು.
* ಕೆ.ಹೆಚ್.ಬಿ. ವತಿಯಿಂದ ನಮ್ಮ ಮನೆ ಯೋಜನೆಯಡಿಯಲ್ಲಿ ಮುಂದಿನ ಎರಡು ವರ್ಷಗಳಲ್ಲಿ 50 ಸಾವಿರ ನಿವೇಶನಗಳನ್ನು ರಿಯಾಯತಿ ದರದಲ್ಲಿ ವಿತರಿಸಲು ಉದ್ದೇಶಿಸಲಾಗಿದೆ.
/filters:format(webp)/newsfirstlive-kannada/media/media_files/2025/11/17/housing-board-auction-sites02-2025-11-17-14-31-05.jpg)
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us