/newsfirstlive-kannada/media/media_files/2026/03/07/kavya-1-2026-03-07-12-36-04.jpg)
ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ದಂಪತಿ ನಡುವೆ ನಡೆದ ಜಗಳವೊಂದು ಅಂತಿಮವಾಗಿ ಗೃಹಿಣಿಯೊಬ್ಬರ ಸಾ*ವಿನಲ್ಲಿ ಅಂತ್ಯವಾಗಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಮೂರು ದಿನದ ಹಳೇ ಸಾಂಬಾರ್ ಬಡಿಸಿದ ವಿಚಾರಕ್ಕೆ ಪತಿ ಕಿರಿಕ್ ತೆಗೆದಿದ್ದರಿಂದ ಮನನೊಂದ ಪತ್ನಿ ವಿಷ ಸೇವಿಸಿ ಪ್ರಾಣಬಿಟ್ಟಿದ್ದಾಳೆ.
ಘಟನೆಯ ವಿವರ
ಮೃತ ಮಹಿಳೆಯನ್ನು ಕಾವ್ಯ (27) ಎಂದು ಗುರುತಿಸಲಾಗಿದೆ. ಈಕೆ ಕಳೆದ ಐದು ವರ್ಷಗಳ ಹಿಂದೆ ರಂಗಸ್ವಾಮಿ ಎಂಬುವವರನ್ನು ಮದುವೆಯಾಗಿದ್ದು, ಇವರಿಗೆ ನಾಲ್ಕು ವರ್ಷದ ಒಂದು ಮಗುವಿದೆ. ಗುರುವಾರ ಮನೆಯಲ್ಲಿ ಊಟದ ವಿಚಾರವಾಗಿ ದಂಪತಿ ನಡುವೆ ಜೋರು ಜಗಳ ನಡೆದಿದೆ.
ಜಗಳಕ್ಕೆ ಕಾರಣವಾದ ಸಾಂಬಾರ್
ವರದಿಗಳ ಪ್ರಕಾರ, ಕಾವ್ಯ ಅವರು ಮೂರು ದಿನಗಳ ಹಿಂದೆ ತಯಾರಿಸಿದ್ದ ಸಾಂಬಾರ್ ಅನ್ನು ಬಿಸಿ ಮಾಡಿ ಪತಿಗೆ ಬಡಿಸಿದ್ದರು. ಇದೇ ವಿಷಯಕ್ಕೆ ರಂಗಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ‘ಪ್ರತಿದಿನ ಹಳೇ ಸಾಂಬಾರನ್ನೇ ಹಾಕುತ್ತೀಯಾ?’ ಎಂದು ಪ್ರಶ್ನಿಸಿ ಪತ್ನಿಯ ಜೊತೆ ವಾಗ್ವಾದ ನಡೆಸಿದ್ದಾರೆ. ಈ ವೇಳೆ ರಂಗಸ್ವಾಮಿ ಪತ್ನಿಯನ್ನು ಮನಬಂದಂತೆ ಬೈದಿದ್ದಲ್ಲದೆ, ಆಕೆಯ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದಾರೆ ಎಂದು ಹೇಳಲಾಗಿದೆ.
ಇದನ್ನೂ ಓದಿ: ಟಿ20 ವಿಶ್ವಕಪ್ ಫೈನಲ್​​ಗೆ ಯಾವ ಪಿಚ್? ತಂಡದ ಗೆಲುವಿನ ಹಿಂದೆ ಪಿಚ್ ಪ್ರಮುಖ ಆಗ್ತದಾ?
ಪತಿಯ ನಿಂದನೆ ಹಾಗೂ ಹಲ್ಲೆಯ ಯತ್ನದಿಂದ ತೀವ್ರವಾಗಿ ಮನನೊಂದ ಕಾವ್ಯ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದಾಳೆ. ಕಾವ್ಯ ವಾಂತಿ ಮಾಡಿಕೊಳ್ಳುತ್ತಿರುವುದನ್ನು ಗಮನಿಸಿದ ಕುಟುಂಬ ಸದಸ್ಯರು ತಕ್ಷಣವೇ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಿದ್ದಾರೆ. ಮಾರ್ಗಮಧ್ಯದಲ್ಲೇ ಕಾವ್ಯ ಕೊನೆಯುಸಿರೆಳೆದಿದ್ದಾರೆ.
ಪೊಲೀಸ್ ತನಿಖೆ:
ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ರಂಗಸ್ವಾಮಿ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಒಂದು ಸಣ್ಣ ಊಟದ ವಿಚಾರಕ್ಕೆ ತಲೆಮಾರುಗಳ ಬಾಂಧವ್ಯ ಕಡಿದುಹೋಗಿರುವುದು ಮತ್ತು ಮಗು ತಾಯಿಯನ್ನು ಕಳೆದುಕೊಂಡಿರುವುದು ಸ್ಥಳೀಯರಲ್ಲಿ ವಿಷಾದ ಮೂಡಿಸಿದೆ.
ಇದನ್ನೂ ಓದಿ: ಅಯೋಧ್ಯೆಯಲ್ಲಿ ‘ಬಿಗ್ ಬಿ’ ಲ್ಯಾಂಡ್ ಡೀಲ್.. 35 ಕೋಟಿ ರೂಪಾಯಿಗೆ 2.67 ಎಕರೆ ಭೂಮಿ ಖರೀದಿ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us