/newsfirstlive-kannada/media/media_files/2025/08/06/pavitra-gowda-bail-2025-08-06-20-30-26.jpg)
ಪವಿತ್ರ ಗೌಡ
ಬೆಂಗಳೂರು: ರೇಣುಕಾಸ್ವಾಮಿ ಪ್ರಕರಣದ ಪ್ರಮುಖ ಆರೋಪಿ ಪವಿತ್ರಗೌಡಗೆ ಈಗ ಮನೆಯೂಟದ ಭಾಗ್ಯಕ್ಕೆ ಕೊಕ್ಕೆ ಬಿದ್ದಿದೆ. ಮನೆಯೂಟಕ್ಕೆ ಅನುಮತಿ ನೀಡಿದ್ದ ಸೆಷನ್ಸ್ ಕೋರ್ಟ್ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದ್ದು, ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ಸಂದೇಶವನ್ನು ರವಾನಿಸಿದೆ.
ಸೆಷನ್ಸ್ ಕೋರ್ಟ್ ಆದೇಶಕ್ಕೆ ತಡೆ
ಆರೋಪಿಗಳಾದ ಪವಿತ್ರಗೌಡ, ಲಕ್ಷ್ಮಣ್ ಹಾಗೂ ನಾಗರಾಜ್ ಅವರಿಗೆ ಮನೆಯೂಟ ನೀಡುವಂತೆ 57ನೇ ಸಿಸಿಹೆಚ್ ನ್ಯಾಯಾಲಯ ನೀಡಿದ್ದ ಆದೇಶವನ್ನು ಹೈಕೋರ್ಟ್ ಪ್ರಶ್ನಿಸಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠವು ಈ ಆದೇಶಕ್ಕೆ ತಡೆಯಾಜ್ಞೆ ನೀಡಿದ್ದು ಮೂವರಿಗೂ ನೋಟಿಸ್ ಜಾರಿ ಮಾಡಿದೆ.
ಇದನ್ನೂ ಓದಿ:ಗಿಲ್ಲಿಗೆ ಇನ್ನೊಬ್ಬರ ಆಟ ಹೇಗೆ ಕೆಡಿಸಬೇಕು ಅಂತಾ ಚೆನ್ನಾಗಿ ಗೊತ್ತಿತ್ತು -ಅಶ್ವಿನಿ ಗೌಡ VIDEO
/filters:format(webp)/newsfirstlive-kannada/media/media_files/2025/08/13/darshan-pavitra-gowda-2025-08-13-19-49-24.jpg)
ಕಾನೂನಿನ ಮುಂದೆ ಎಲ್ಲರೂ ಸಮಾನರು
ಎಷ್ಟೇ ದೊಡ್ಡವರಾದರೂ ಕಾನೂನಿನ ಮುಂದೆ ಎಲ್ಲರೂ ಒಂದೇ. ಜೈಲಿನಲ್ಲಿರುವ ಕೈದಿಗಳಿಗೆ ವಿಶೇಷ ಸವಲತ್ತುಗಳನ್ನು ನೀಡುವುದು ಕಾನೂನುಬಾಹಿರ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ವಿಶೇಷ ಸಂದರ್ಭಗಳಲ್ಲಿ ಮಾತ್ರ ಮನೆಯೂಟಕ್ಕೆ ಅವಕಾಶವಿರುತ್ತದೆ. ಆದರೆ ಇಲ್ಲಿ ನಿಯಮಗಳನ್ನು ಗಾಳಿಗೆ ತೂರಲಾಗಿದೆ ಎಂದು ವಾದಿಸಲಾಯಿತು.
ಜೈಲು ಊಟಕ್ಕೆ FSSAI ಮಾನ್ಯತೆ
ಜೈಲಿನಲ್ಲಿ ನೀಡಲಾಗುವ ಆಹಾರವು ಕಳಪೆಯಾಗಿಲ್ಲ. ಬದಲಾಗಿ, ಜೈಲಿನ ಆಹಾರಕ್ಕೆ ಎಫ್‌ಎಸ್‌ಎಸ್‌ಎಐ ಕಡೆಯಿಂದ ‘4 ಸ್ಟಾರ್’ ರೇಟಿಂಗ್ ನೀಡಲಾಗಿದೆ. ಹೀಗಿರುವಾಗ ಮನೆಯೂಟದ ಅಗತ್ಯವೇನಿದೆ? ಎಂದು ಕೋರ್ಟ್ ಪ್ರಶ್ನೆ ಮಾಡಿದೆ.
ಇದನ್ನೂ ಓದಿ: ಗೋವಾದಲ್ಲಿ ರಷ್ಯಾದ ಇಬ್ಬರು ಸುಂದರಿಯರ ಕೊಂದ ವ್ಯಕ್ತಿ : ಕೊಲೆಗೆ ಕಾರಣವೇನು ಗೊತ್ತಾ?
ಒಬ್ಬೊಬ್ಬರಿಗೆ ಒಂದು ರೀತಿಯ ಸವಲತ್ತು ನೀಡುವುದು ಸುಪ್ರೀಂ ಕೋರ್ಟ್ ಆದೇಶದ ಉಲ್ಲಂಘನೆಯಾಗುತ್ತದೆ. ಒಂದು ವೇಳೆ ಸುಪ್ರೀಂ ಕೋರ್ಟ್ ನಿಯಮಗಳನ್ನು ಮೀರಿ ಆರೋಪಿಗಳಿಗೆ ವಿಶೇಷ ಸವಲತ್ತು ನೀಡಿದರೆ, ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಲಾಗಿದೆ.
ಜೈಲು ಕೈಪಿಡಿ (Prison Manual) ಉಲ್ಲಂಘನೆ
ಮನೆಯೂಟಕ್ಕೆ ಅನುಮತಿ ನೀಡುವಾಗ ಜೈಲು ಕೈಪಿಡಿಯ ನಿಯಮಗಳನ್ನು ಪಾಲಿಸಲಾಗಿಲ್ಲ. ಈ ಹಿನ್ನೆಲೆಯಲ್ಲಿ ಜಗದೀಶ್ ಅವರು ಮಂಡಿಸಿದ ವಾದವನ್ನು ಪುರಸ್ಕರಿಸಿದ ಹೈಕೋರ್ಟ್, ಸದ್ಯಕ್ಕೆ ಮನೆಯೂಟ ನೀಡದಂತೆ ಆದೇಶಿಸಿದೆ. ಈ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ ಫೆಬ್ರವರಿ 03ಕ್ಕೆ ಮುಂದೂಡಿದೆ. ಅಲ್ಲಿಯವರೆಗೆ ಪವಿತ್ರಗೌಡ ಮತ್ತು ಇತರ ಇಬ್ಬರು ಆರೋಪಿಗಳು ಜೈಲಿನ ಆಹಾರವನ್ನೇ ಸೇವಿಸಬೇಕಾಗುತ್ತದೆ.
ಇದನ್ನೂ ಓದಿ: ನಿತಿನ್ ನಬಿನ್ ನನ್ನ ಬಾಸ್, ನಾನು ಪಕ್ಷದ ಕಾರ್ಯಕರ್ತ ಎಂದ ಪ್ರಧಾನಿ ಮೋದಿ!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us