/newsfirstlive-kannada/media/media_files/2025/12/04/upa-lokayukuta-justice-b-veerappa02-2025-12-04-12-20-17.jpg)
ಉಪಲೋಕಾಯುಕ್ತ ಜಸ್ಟೀಸ್ ಬಿ.ವೀರಪ್ಪ
ಕರ್ನಾಟಕ ರಾಜ್ಯವು ಈ ಹಿಂದೆ ಬಿಜೆಪಿ ಪಕ್ಷದ ಆಳ್ವಿಕೆ ಇದ್ದಾಗ ಭ್ರಷ್ಟಾಚಾರದಲ್ಲಿ ದೇಶದಲ್ಲೇ ನಂಬರ್ ಒನ್ ಸ್ಥಾನದಲ್ಲಿದೆ ಎಂದು ರಾಷ್ಟ್ರೀಯ ನಿಯತ ಕಾಲಿಕವೊಂದು ವರದಿ ಮಾಡಿತ್ತು. ಇದು ರಾಜ್ಯ ಹಾಗೂ ದೇಶದಲ್ಲಿ ಸಂಚಲನ ಸೃಷ್ಟಿಸಿತ್ತು.
ಆದರೇ, ಈಗ ಕರ್ನಾಟಕದಲ್ಲಿ ಶೇ.63 ರಷ್ಟು ಭ್ರಷ್ಟಾಚಾರ ಇದೆ ಎಂದು ಹಾಲಿ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಹೇಳಿದ್ದಾರೆ. ಕರ್ನಾಟಕದ ಪಕ್ಕದ ಕೇರಳ ರಾಜ್ಯದಲ್ಲಿ ಶೇ.10 ರಷ್ಟು ಮಾತ್ರವೇ ಭ್ರಷ್ಟಾಚಾರ ಇದೆ. ಆದರೇ, ಕರ್ನಾಟಕ ರಾಜ್ಯದಲ್ಲಿ ಶೇ.63 ರಷ್ಟು ಭ್ರಷ್ಟಾಚಾರ ಇದೆ ಎಂದು ರಾಜ್ಯದ ಉಪಲೋಕಾಯುಕ್ತ ಜಸ್ಟೀಸ್ ಬಿ.ವೀರಪ್ಪ ಹೇಳಿದ್ದಾರೆ.
ಕರ್ನಾಟಕ ರಾಜ್ಯವು ಭ್ರಷ್ಟಾಚಾರದ ಆಗ್ರಪಟ್ಟಿಯಲ್ಲಿ ಐದನೇ ಸ್ಥಾನ ಪಡೆದಿದೆ . ನಾನು ಉಪಲೋಕಾಯುಕ್ತ ಆಗಿ ನೇಮಕವಾದ ಮೇಲೆ ಇದನ್ನೆಲ್ಲಾ ಕಣ್ಣಾರೆ ನೋಡುವ ಅವಕಾಶ ಸಿಕ್ಕಿದೆ ಎಂದು ಜಸ್ಟೀಸ್ ಬಿ.ವೀರಪ್ಪ ಹೇಳಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರದ ಪ್ರತಿಯೊಂದು ಇಲಾಖೆಯಲ್ಲೂ ಭ್ರಷ್ಟಾಚಾರ ತುಂಬಿ ತುಳುಕಾಡುತ್ತಿದೆ. ಭ್ರಷ್ಟಾಚಾರದ ಈ ಪಿಡುಗು ಅನ್ನು ತಡೆಯದೇ ಹೋದರೇ, ಭವಿಷ್ಯದಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಉಪ ಲೋಕಾಯುಕ್ತ ಬಿ.ವೀರಪ್ಪ ಹೇಳಿದ್ದಾರೆ.
ಬೆಂಗಳೂರಿನ ಹೈಕೋರ್ಟ್ ವಕೀಲರ ಸಭಾಂಗಣದಲ್ಲಿ ವಕೀಲ ತುಳವನೂರು ಶಂಕರಪ್ಪ ಬರೆದಿರುವ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಉಪಲೋಕಾಯುಕ್ತ ಬಿ.ವೀರಪ್ಪ ಮಾತನಾಡಿದ್ದಾರೆ.
ನಾನು ಹೋದ ಕಡೆಯಲ್ಲೆಲ್ಲಾ ಆಸ್ಪತ್ರೆ , ಶಾಲೆ, ಹಾಸ್ಟೆಲ್ ಗಳಲ್ಲಿ ಭ್ರಷ್ಟಾಚಾರ ನಿರ್ಮೂಲನೆಗೆ ಶಪಥ ಕೈಗೊಳ್ಳುವಂತೆ ಅಲ್ಲಿನ ಸಿಬ್ಬಂದಿಗೆ ಪ್ರೇರೇಪಿಸುತ್ತಿದ್ದೇನೆ. ಈ ಯಜ್ಞದಲ್ಲಿ ವಕೀಲರೂ ಪಾಲ್ಗೊಂಡು ಭ್ರಷ್ಟಾಚಾರ ನಿರ್ಮೂಲನೆಗೆ , ಸಮಾಜ ಸುಧಾರಣೆಗೆ ಪ್ರಯತ್ನಿಸಬೇಕು ಎಂದು ಉಪಲೋಕಾಯುಕ್ತ ಬಿ.ವೀರಪ್ಪ ಹೇಳಿದ್ದಾರೆ.
/filters:format(webp)/newsfirstlive-kannada/media/media_files/2025/12/04/upa-lokayukuta-justice-b-veerappa-2025-12-04-12-19-00.jpg)
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us